ಯೂಟರ್ನ್ ಸಿನಿಮಾ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ಮೂಗುತಿ ಸುಂದರಿ ಶ್ರದ್ದಾ ಶ್ರೀನಾಥ್ ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ಕನ್ನಡದ ಜೊತೆಗೆ ತಮಿಳು, ತೆಲುಗು, ಮಾಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಸಕ್ರಿಯರಾಗಿರುವ ಶ್ರದ್ದಾ ಕೈ ತುಂಬಾ ಅವಕಾಶಗಳಿವೆ. ಇದೀಗ ಅವರು ಪ್ಯಾನ್ ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ 75ನೇ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’ ಭಾರೀ ನಿರೀಕ್ಷೆ ಹೆಚ್ಚಿಸಿದೆ. ಶೈಲೇಶ್ ಕೋಲನು ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಸದ್ಯ ವೈಜಾಗ್ ನಲ್ಲಿ ಎರಡನೇ ಹಂತದ ಶೂಟಿಂಗ್ ನಡೆಯುತ್ತಿದೆ. ನಿಹಾರಿಕಾ ಎಂಟರ್ ಟೈನ್ಮೆಂಟ್ ನಡಿ ವೆಂಕಟ್ ಬೋಯನಪಲ್ಲಿ ನಿರ್ಮಿಸುತ್ತಿರುವ ಸೈಂಧವ್ ಗೆ ಕನ್ನಡತಿ ಶ್ರದ್ದಾ ಶ್ರೀನಾಥ್ ಎಂಟ್ರಿ ಕೊಟ್ಟಿದ್ದಾರೆ. ವಿಕ್ಟರಿಗೆ ವೆಂಕಟೇಶ್ ಗೆ ಜೋಡಿಯಾಗಿ ನಟಿಸ್ತಿರುವ ಮೂಗುತಿ ಸುಂದರಿಯ ಫಸ್ಟ್ ಲುಕ್ ಅನಾವರಣ ಮಾಡಲಾಗಿದೆ.
ಏಜೆಂಟ್ ಸಿನಿಮಾಗೆ ಬಾಲಿವುಡ್ ಸ್ಟಾರ್ ಎಂಟ್ರಿ…ಹೇಗಿದೆ ಡಿನೋ ಮೋರಿಯಾ ಫಸ್ಟ್ ಲುಕ್
ಸೈಂಧವ್ ಸಿನಿಮಾದಲ್ಲಿ ಶ್ರದ್ದಾ ಮನೋಜ್ಞಾ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಅವರ ಫಸ್ಟ್ ಲುಕ್ ನೋಡುಗರ ಗಮನಸೆಳೆಯುತ್ತಿದೆ. ಸೀರೆಯುಟ್ಟು ಹೋಮ್ಲಿ ಲುಕ್ ಕಾಣಿಸಿಕೊಂಡಿರುವ ಶ್ರದ್ದಾ, ಕೈಯಲ್ಲಿ ಟಿಫನ್ ಬಾಕ್ಸ್ ಹಿಡಿದು ಗಂಭೀರ ಆಲೋಚನೆಯಲ್ಲಿ ತೊಡಗಿದ್ದಾರೆ. ಜೆರ್ಸಿ ಸಿನಿಮಾದಲ್ಲಿ ಅದ್ಭುತ ಅಭಿಯನದ ಪ್ರದರ್ಶಿಸಿದ್ದ ಶ್ರದ್ದಾ ಶ್ರೀನಾಥ್, ಸೈಂಧವ್ ಸಿನಿಮಾದಲ್ಲಿ ಮತ್ತೊಮ್ಮೆ ಎಲ್ಲರ ಗಮನಸೆಳೆಯಲಿದ್ದಾರೆ.ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಈ ಚಿತ್ರದ ಮೂಲಕ ಸೌತ್ ಸಿನಿರಂಗ ಪ್ರವೇಶಿಸಿದ್ದಾರೆ. ತಾಂತ್ರಿಕವಾಗಿಯೂ ಶ್ರೀಮಂತಿಕೆಯಿಂದ ಕೂಡಿರುವ ಸೈಂಧವ್ ಸಿನಿಮಾಗೆ ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಎಸ್ ಮಣಿಕಂದನ್ ಛಾಯಾಗ್ರಹಣ, ಗ್ಯಾರಿ ಬಿಎಚ್ ಸಂಕಲನ ಮತ್ತು ಅವಿನಾಶ್ ಕೊಲ್ಲ ನಿರ್ಮಾಣ ವಿನ್ಯಾಸ ಮಾಡಿದ್ದು, ಕಿಶೋರ್ ತಲ್ಲೂರ್ ಸಹ ನಿರ್ಮಾಪಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಶೀಘ್ರದಲ್ಲೇ ಇತರ ಪಾತ್ರವರ್ಗ ರಿವೀಲ್ ಮಾಡಲಿರುವ ಚಿತ್ರತಂಡ, ಸೈಂಧವ್ ಸಿನಿಮಾವನ್ನು ಡಿಸೆಂಬರ್ 22 ರಂದು ಕ್ರಿಸ್ಮಸ್ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.