“ಬೆಲ್ ಬಟನ್” ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ನವರಸ ನಾಯಕ ಜಗ್ಗೇಶ್ ರವವರು ಚಿತ್ರಕ್ಕೆ ಚಾಲನೆ ನೀಡಿದರು.ನಟ ಪ್ರತಾಪ್ ರೆಡ್ಡಿ ಅವರು ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು,ತಾಯಿ ಬಂಡೆ ಮಹಾ ಕಾಳಿ ಅಮ್ಮನವರ ಸನ್ನಿಧಿಯಲ್ಲಿ ಬೆಲ್ ಬಟನ್ ಚಿತ್ರದ ಮಹೂರ್ತ ಇತ್ತೀಚಿಗೆ ನಡೆಯಿತು.
ಕನ್ನಡದ ಖ್ಯಾತ ನಿರ್ದೇಶಕರ ಜೊತೆ ಸಹ ನಿರ್ದೇಶಕರಾಗಿ, ಹಾಗು ರಂಗಭೂಮಿ ನಟರಾಗಿ ಅನುಭವವಿರುವ ಲಕ್ಷ್ಮಿನರಸಿಂಹ. ಎಂ “ಬೆಲ್ ಬಟನ್” ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಲವ್ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.
ಫ್ರೆಶ್ ಫಿಲಂಸ್ ಮೂಲಕ ಗಂಗರಾಜ್ ಗೌಡ ಆರ್, ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಎ.ಆರ್ ರೆಹಮಾನ್ ಬಳಿ ಕೆಲಸ ಮಾಡಿರುವ ಎಸ್ ಎಂ ರಾಹಿತ್ಯ ಸಂಗೀತ ನೀಡುತ್ತಿದ್ದಾರೆ. ಲಕ್ಕಿ ಛಾಯಾಗ್ರಹಣ ಹಾಗೂ ಎಸ್ ಆಕಾಶ್ ಮಹೇಂದ್ರಕರ್ ಸಂಕಲನ ಈ ಚಿತ್ರಕ್ಕಿದೆ.
ಜೈ, ಈ ಚಿತ್ರದ ನಾಯಕ, ನಿಸರ್ಗ ಅಪ್ಪಣ್ಣ ಮತ್ತು ಚೈತ್ರಾ ಗೌಡ , ನಾಯಕಿಯರು, ಪ್ರಮೀಳಾ ಸುಬ್ರಮಣ್ಯ, ಭಾನುಪ್ರಕಾಶ್, ಶ್ರುತಿ, ರಮೇಶ್, ಪವನ್ ರಿಚ್ಚಿ, ವೇಣು, ಸುಜನಿತ್ ಶೆಟ್ಟಿ, ಗಿರೀಶ್, ಅರವಿಂದ್, ಹರೀಶ್, ಮುಂತಾದವರು ಅಭಿನಯಸುತ್ತಿದ್ದಾರೆ, ಮೇ 15 ರಿಂದ ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಲಕ್ಷ್ಮಿನರಸಿಂಹ ಅವರು ತಿಳಿಸಿದ್ದಾರೆ.