ಸದ್ದಿಲ್ಲದೆ ಸಿದ್ಧವಾಯ್ತು ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಚಿಣ್ಣರ ಚಂದ್ರ’ ಚಿತ್ರ
ಬರಗೂರು ರಾಮಚಂದ್ರಪ್ಪನವರು ಮಕ್ಕಳ ಚಿತ್ರವೊಂದನ್ನು ಸದ್ದಿಲ್ಲದೆ ಸಿದ್ಧ ಮಾಡಿದ್ದಾರೆ. ತಮ್ಮ ರಚನೆಯ ‘ಅಡಗೂಲಜ್ಜಿ’ ಎಂಬ ಕಾದಂಬರಿಯನ್ನು ಆಧರಿಸಿದ ಈ ಚಿತ್ರಕ್ಕೆ ‘ಚಿಣ್ಣರ ಚಂದ್ರ’ ಎಂದು ಹೆಸರಿಡಲಾಗಿದೆ. ಬರಗೂರರ ಮೊಮ್ಮಗ ಆಕಾಂಕ್ಷ್ ಬರಗೂರ್ ಈ ಹಿಂದೆ ಬಯಲಾಟದ ಭೀಮಣ್ಣ ಮತ್ತು ತಾಯಿ ಕಸ್ತೂರ್ ಗಾಂಧಿ ಚಿತ್ರಗಳಲ್ಲಿ ಪುಟ್ಟ ಪಾತ್ರ ವಹಿಸಿದ್ದು ‘ಚಿಣ್ಣರ ಚಂದ್ರ’ದಲ್ಲಿ ನಾಯಕ ಪಾತ್ರವನ್ನು ನಿರ್ವಹಿಸಿರುವುದು ಈ ಚಿತ್ರದ ಒಂದು ವಿಶೇಷ. ಆಕಾಂಕ್ಷ್ ಬರಗೂರ್ ಜೊತೆಗೆ ಈಶಾನ್ ಪಾಟೀಲ್, ನಿಕ್ಷೇಪ್, ಅಭಿನವ್ ನಾಗ್, ಶಡ್ಜಹೆಗ್ಡೆ ಮುಂತಾದ ಬಾಲ […]