*‘ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾದ ಟ್ರೇಲರ್ ಹಾಗೂ ಆಡಿಯೋ ಬಿಡುಗಡೆ ಮಾಡಿದ ಕ್ಯಾಪ್ಟನ್ ಕೂಲ್ ಎಂ.ಎಸ್.ಧೋನಿ*
ಕ್ಯಾಪ್ಟನ್ ಕೂಲ್ ಎಂ.ಎಸ್.ಧೋನಿ ಸಿನಿಮಾ ಜಗತ್ತಿಗೂ ಎಂಟ್ರಿ ಕೊಟ್ಟಿರುವುದು ಗೊತ್ತೇ ಇದೆ. ತಮ್ಮದೇ ಧೋನಿ ಎಂಟರ್ ಟೈನ್ಮೆಂಟ್ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ಈ ಸಂಸ್ಥೆಯಡಿ ಧೋನಿ ಪತ್ನಿ ಸಾಕ್ಷಿ ಧೋನಿ ಲೆಟ್ಸ್ ಗೆಟ್ ಮ್ಯಾರೀಡ್ ಎಂಬ ತಮಿಳು ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಟ್ರೇಲರ್ ಹಾಗೂ ಆಡಿಯೋ ಬಿಡುಗಡೆ ಕಾರ್ಯಕ್ರಮ ಚೆನ್ನೈನಲ್ಲಿ ನೆರವೇರಿದೆ. ಕ್ಯಾಪ್ಟನ್ ಕೂಲ್ ತಮ್ಮದೇ ನಿರ್ಮಾಣ ಸಂಸ್ಥೆಯ ಚೊಚ್ಚಲ ಸಿನಿಮಾದ ಟ್ರೇಲರ್ ಅನಾವರಣ ಮಾಡಿ ಹಲವು ವಿಷಯಗಳನ್ನು ಹಂಚಿಕೊಂಡರು. ಎರಡನೇ ಮದುವೆಯ ಮೊದಲನೇ […]