ವರ್ಣಬೇಧದ ಅಪರೂಪದ ಕಥೆ ಹೊತ್ತ ಬಹುನಿರೀಕ್ಷಿತ ಚಿತ್ರ `ಇಮಾನ್ದಾರ್’ ಐದು ಭಾಷೆಗಳಲ್ಲಿ ಬಿಡುಗಡೆ: ಇದು ಪ್ರತಿಭಾವಂತ ನಿರ್ದೇಶಕ ಸಂದೇಶ ಶೆಟ್ಟಿ ಆಜ್ರಿಯ ಮೆಗಾ ಪ್ರೊಜೆಕ್ಟ್
ಕನ್ನಡ, ಕನ್ನಡತನ ಎಂಬುದು ಸ್ವಾಭಿಮಾನಿ ಕನ್ನಡಿಗರ ಉಸಿರು. ಬಹುಶಃ ಕಾವೇರಿ, ಮಹದಾಯಿ ಹೀಗೆ ಈ ನಾಡಿನ ನೆಲ, ಜಲದ ವಿಚಾರ ಬಂದಾಗೆಲ್ಲ, ಸ್ವಾಭಿಮಾನಿ ಕನ್ನಡಿಗರು ಪ್ರದರ್ಶಿಸುವ ಒಗ್ಗಟ್ಟು ಬಹುಶಃ ದೇಶವೇ ಕಂಡು ಅರಿತ ವಿಚಾರ. ಬಹುಭಾಷಿಗರಿಗೆ ಅನ್ನ ಮತ್ತು ಆಶ್ರಯ ನೀಡಿದ ತಾಣ ಈ ನಾಡು. ಈ ನಿಟ್ಟಿನಲ್ಲಿ ಚಿತ್ರರಂಗದಲ್ಲೂ ಕೂಡ ಕನ್ನಡಿಗರನ್ನೇ ಕಟ್ಟಿಕೊಂಡು ಸಮಾಜಕ್ಕೊಂದು ಸಂದೇಶ ನೀಡಬಲ್ಲ ಚಿತ್ರ ಕಥೆಯನ್ನು ಹೆಣೆದು ಅದನ್ನು ಪರದೆ ಮೇಲೆ ತರಲು ಸಿದ್ಧರಾಗಿದ್ದಾರೆ ನಿರ್ದೇಶಕ ಸಂದೇಶ ಶೆಟ್ಟಿ ಆಜ್ರಿ. […]