ಆಧುನಿಕ ತಂತ್ರಜ್ಞಾನದೊಂದಿಗೆ ಬಿಡುಗಡೆಯಾದ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರಕ್ಕೆ ಪ್ರೇಕ್ಷಕ ಫಿದಾ
ಹದಿನೆಂಟನೇ ಶತಮಾನದಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಬಲಗೈ ಭಂಟನಾಗಿದ್ದ ವೀರಸೇನಾನಿ ಸಂಗೊಳ್ಳಿ ರಾಯಣ್ಣನ ಸಾಹಸ ಗಾಥೆಯನ್ನು ಬೆಳ್ಳಿತೆರೆಯ ಮೇಲೆ ಅನಾವರಣಗೊಳಿಸಲಾದ ಚಿತ್ರ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ 2012ರಲ್ಲಿ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಂಡಿತ್ತು.ಕಿಚ್ಚ ಸುದೀಪ್ ಅವರು ನಿರೂಪಣೆ ಮಾಡಿದ್ದ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬ್ರಿಟೀಷರ ವಿರುದ್ದ ತೊಡೆತಟ್ಟಿ ನಿಂತ ಕೆಚ್ಚೆದೆಯ ವೀರ ಯೋಧ ಸಂಗೊಳ್ಳಿ ರಾಯಣ್ಣನಾಗಿ ಅಬ್ಬರಿಸಿದ್ದರು. ಹಿರಿಯನಟಿ ಜಯಪ್ರದ ಅವರು ಕಿತ್ತೂರು ರಾಣಿ ಚನ್ನಮ್ಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಉತ್ತರ ಕರ್ನಾಟಕದ ಆನಂದ್ ಬಿ.ಅಪ್ಪುಗೋಳ್ […]