# Tags

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಅನಾವರಣವಾಯಿತು ಸುಮಂತ್ ಶೈಲೇಂದ್ರ ಅಭಿನಯದ “ಚೇಸರ್” ಚಿತ್ರದ ಟೀಸರ್ .

ಹೊಸಬರ ಹೊಸಪ್ರಯತ್ನಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದಾ ಪ್ರೋತ್ಸಾಹ ನೀಡುತ್ತಾ ಬರುತ್ತಿದ್ದಾರೆ. ಇತ್ತೀಚೆಗೆ ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ “ಬುದ್ದಿವಂತ ೨” ಚಿತ್ರದ ಖ್ಯಾತಿಯ ಎಂ ಜಯ್ಯರಾಮಃ ನಿರ್ದೇಶನದ ಹಾಗೂ “ದಿಲ್ ವಾಲ” ಚಿತ್ರದ ಖ್ಯಾತಿಯ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ “ಚೇಸರ್” ಚಿತ್ರದ ಟೀಸರ್ ಅನ್ನು ಧ್ರುವ ಸರ್ಜಾ ಅನಾವರಣ ಮಾಡಿದರು. ನಟರಾದ ಅರವಿಂದ್, ತ್ರಿವಿಕ್ರಮ್ ಹಾಗು ಕರಣ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. “ಚೇಸರ್” ಚಿತ್ರದ ಟೀಸರ್ ಚೆನ್ನಾಗಿದೆ.‌ ಆಕ್ಷನ್ […]

ಮೊದಲ‌ನೋಟದಲ್ಲೇ ಮೋಡಿ ಮಾಡಿದ “ಅಮರ ಪ್ರೇಮಿ ಅರುಣ್” ‌

  ಕನ್ನಡದಲ್ಲೀಗ ಹೊಸತಂಡದಿಂದ ಹೊಸಪ್ರಯತ್ನಗಳು ಸಾಕಷ್ಟು ನಡೆಯುತ್ತಿದೆ. ಅಂತಹ ಹೊಸ ಹಾಗೂ ವಿಭಿನ್ನ ಪ್ರಯತ್ನಗಳಲ್ಲಿ “ಅಮರ‌ ಪ್ರೇಮಿ ಅರುಣ್” ಸಹ ಒಂದು. ಸಮಾನ ಮನಸ್ಕರೆಲ್ಲಾ ಸೇರಿ ಕಟ್ಟಿರುವ ಒಲವು ಸಿನಿಮಾ ಎಂಬ ನಿರ್ಮಾಣ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ‌ ಮಾಡಿದೆ. ಗಿರೀಶ್ ಕಾಸರವಳ್ಳಿ,‌ ಯೋಗರಾಜ್ ಭಟ್ ಸೇರಿದಂತೆ ಕನ್ನಡದ ಅನೇಕ ಹಿರಿಯ ದಿಗ್ದರ್ಶಕರ ಬಳಿ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಪ್ರವೀಣ್ ಕುಮಾರ್ ಜಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಡಾ||ಮಂಜಮ್ಮ […]

ಜನ‌ ಮೆಚ್ಚಿದ “ಫಾರೆಸ್ಟ್” ; ಕಾಡಿನ ಕಥೆಗೆ 25 ದಿನಗಳ ಸಂಭ್ರಮ .

ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ ಹಾಗೂ ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಅವರಂಥ ಸ್ಟಾರ್ ಕಲಾವಿದರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಮಲ್ಟಿ ಸ್ಟಾರರ್ “ಫಾರೆಸ್ಟ್” ಚಿತ್ರ ಬಿಡುಗಡೆಯಾಗಿ 25 ದಿನಗಳಾಗಿದೆ. ಕರ್ನಾಟಕದ ಕೆಲವು ಚಿತ್ರಮಂದಿರಗಳಲ್ಲಿ ಯಶಸ್ವಿ 25 ದಿನಗಳನ್ನು ಪೂರೈಸಿದ ಈ ಚಿತ್ರ 50 ದಿನಗಳತ್ತ ಹೆಜ್ಜೆ ಹಾಕುತ್ತಿದೆ. ಕಲಾವಿದರ ಅದ್ಭುತ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಸಿನಿಮಾ ಬಗ್ಗೆ ಅಪಾರ ಪ್ರೀತಿ ಹೊಂದಿರುವ ಎನ್ […]

ಮಾರ್ಚ್‍ನಲ್ಲಿ ಬಿಡುಗಡೆಯಾಗಲಿದೆ ವಿನಯ್‍-ಅದಿತಿ ಅಭಿನಯದ ‘ಅಂದೊಂದಿತ್ತು ಕಾಲ’

  ವಿನಯ್‍ ರಾಜ್‍ಕುಮಾರ್ ಮತ್ತು ಅದಿತಿ ಪ್ರಭುದೇವ ಅಭಿನಯದ ‘ಅಂದೊಂದಿತ್ತು ಕಾಲ’ ಚಿತ್ರದ ‘ಮುಂಗಾರು ಮಳೆಯಲ್ಲಿ …’ ಎಂಬ ಹಾಡು ಕೆಲವು ದಿನಗಳ ಹಿಂದೆ ‘ಗೋಲ್ಡನ್‍ ಸ್ಟಾರ್‍’ ಗಣೇಶ್ ಮತ್ತು ‘ಮಳೆ ಹುಡುಗಿ’ ಪೂಜಾ ಗಾಂಧಿ ಬಿಡುಗಡೆ ಮಾಡಿದ್ದರು. ಎ2 ಮ್ಯೂಸಿಕ್‍ ಚಾನಲ್‍ನಲ್ಲಿ ಲಭ್ಯವಿರುವ ಈ ಹಾಡು 1.6 ಮಿಲಿಯನ್‍ ವೀಕ್ಷಣೆ ಪಡೆಯುವುದರ ಜೊತೆಗೆ ಜನರಿಂದ ಮೆಚ್ಚುಗೆ ಪಡೆದಿದೆ. ಈ ಹಾಡು ಯಶಸ್ವಿಯಾದ ಹಿನ್ನೆಲೆಯಲ್ಲಿ ಚಿತ್ರತಂಡದವರು ಇತ್ತೀಚೆಗೆ ಮಾಧ್ಯಮದವರ ಮುಂದೆ ಬಂದು ಚಿತ್ರದ ಬಗ್ಗೆ ಹಲವು ವಿಷಯಗಳನ್ನು […]

ಟ್ರೇಲರ್ ಮೂಲಕ ಗಮನ ಸೆಳೆದ “ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ವಿಕಾಶ್ ಉತ್ತಯ್ಯ ಅಭಿನಯದ “ಅಪಾಯವಿದೆ ಎಚ್ಚರಿಕೆ” ಚಿತ್ರ “

ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಅಭಿಮಾನಿಗಳು ಸದಾ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಒಂದೊಳ್ಳೆ ಕಂಟೆಂಟ್ ನೊಂದಿಗೆ ಹಾರಾರ್ ಜಾನರ್ ನ ಕಥಾಹಂದರವನ್ನೂ ಹೊಂದಿರುವ “ಅಪಾಯವಿದೆ ಎಚ್ಚರಿಕೆ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. “ಅಣ್ಣಯ್ಯ” ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ವಿಕಾಶ್ ಉತ್ತಯ್ಯ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಅಭಿಜಿತ್ ತೀರ್ಥಹಳ್ಳಿ ಬರೆದು ನಿರ್ದೇಶಿಸಿದ್ದಾರೆ. ಹಿರಿಯ ಚಲನಚಿತ್ರ ಪತ್ರಕರ್ತೆ ಸರಸ್ವತಿ ಜಾಗಿರದಾರ್, ಚಲನಚಿತ್ರ ಸ್ಥಿರ ಛಾಯಾಗ್ರಾಹಕರಾದ ಮನು,‌ ಮೋಕ್ಷೇಂದ್ರ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಕನ್ನಡ ಚಲನಚಿತ್ರಗಳನ್ನು ಸದಾ ಪ್ರೋತ್ಸಾಹಿಸುತ್ತಾ […]

ಠಾಣೆ ಚಿತ್ರ ಕ್ಕೆ ಯು/ಎ ಸೆನ್ಸಾರ್ ಪ್ರಮಾಣಪತ್ರ

  ರಂಗಭೂಮಿ ಕಲಾವಿದನಾಗಿ ಗುರುತಿಸಿಕೊಂಡಿರುವ ಹಾಗೂ ಕನ್ನಡದ ಹೆಸರಾಂತ ಸಾಹಸ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಪ್ರವೀಣ್ “ಠಾಣೆ” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ‌. ವಿದೂಷಿ ಹರಿಣಾಕ್ಷಿ , ಬಿ.ವಿ.ರಾಜರಾಂ, ಬಾಲ್ ರಾಜ್ವಾಡಿ, ರೋಹಿತ್ ನಾಗೇಶ್, ಕುಲದೀಪ್, ಸಂತೋಷ್ ಕರ್ಕಿ, ಭೀಷ್ಮ ರಾಮಯ್ಯ, ನಾಗರಾಜ್,‌ ಪಿ.ಡಿ.ಸತೀಶ್ ಚಂದ್ರ, ಪ್ರವೀಣ್ ಜಾನ್, ಪೂಜಾ ರಾವ್ . ರೂಪ .ಸೇರಿದಂತೆ ಅನೇಕ ರಂಗಭೂಮಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. 20 ವರ್ಷಗಳ ಹಿಂದೆ ಮಾಧ್ಯಮಗಳು, ಪೋಲೀಸ್ ಇಲಾಖೆಗಳ ಪ್ರಮಾಣ […]

ವಿದ್ಯಾ ವಿಜಯ್ ಅಭಿನಯದ ‘ಬೇಬೋ’ ಚಿತ್ರಕ್ಕೆ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಚಾಲನೆ

  ಈ ಹಿಂದೆ ‘ಯುದ್ಧ ಮತ್ತು ಸ್ವಾತಂತ್ರ್ಯ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ವಿದ್ಯಾ, ಈಗ ಒಂದು ಸಣ್ಣ ಗ್ಯಾಪ್‍ನ ನಂತರ ನಾಯಕಿಯಾಗಿ ನಟಿಸುತ್ತಿದ್ದಾರೆ. ವಿದ್ಯಾ ಸದ್ಯ ‘ಬೇಬೋ’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಮುಹೂರ್ತ ಇತ್ತೀಚಿಗೆ ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿದೆ. ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ನಟ ಕೌಶಿಕ್, ಅನಂತು ಮುಂತಾದ ಗಣ್ಯರು ಈ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. […]

ಫೆ.21ಕ್ಕೆ ಎಲ್ಲೋ ಜೋಗಪ್ಪ ನಿನ್ನರಮನೆ ಬಿಡುಗಡೆ..ಜರ್ನಿ ಕಥೆಯೊಂದಿಗೆ ಬೆಳ್ಳಿತೆರೆಗೆ ಬಂದ ನಿರ್ದೇಶಕ ಹಯವದನ

ಸ್ಯಾಂಡಲ್ ವುಡ್ ಅಂಗಳದಲ್ಲೀಗ ಜೋಗಪ್ಪನ ಸದ್ದು ಜೋರಾಗಿದೆ. ಅನೇಕ ಹಿಟ್ ಧಾರಾವಾಹಿಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ನಿರ್ದೇಶಕ ಹಯದವನ ಚೊಚ್ಚಲ ಪ್ರಯತ್ನದ ಎಲ್ಲೋ ಜೋಗಪ್ಪ ನಿನ್ನರಮನೆ ಪ್ರೇಕ್ಷಕರ ಎದುರು ಬರಲು ಕೆಲ ದಿನಗಳಷ್ಟೇ ಬಾಕಿ ಇದೆ. ಬಿಡುಗಡೆಗೆ ಸಜ್ಜಾಗಿರುವ ಚಿತ್ರತಂಡ ಭರದಿಂದ ಪ್ರಚಾರ ಕೂಡ ನಡೆಸುತ್ತಿದೆ. ಇದೇ ತಿಂಗಳ 21ಕ್ಕೆ ತೆರೆಗೆ ಬರ್ತಿರುವ ಸಿನಿಮಾ ಬಗ್ಗೆ ಚಿತ್ರತಂಡ ಸಾಕಷ್ಟು ಮಾಹಿತಿಯನ್ನು ಹಂಚಿಕೊಂಡಿದೆ. ನಿನ್ನೆ ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಸುದ್ದಿಗೋಷ್ಟಿ ಆಯೋಜಿಸಲಾಗಿತ್ತು. ಈ ವೇಳೆ […]

ಪ್ರೀತಿಯ ಹೊಸ ಆಯಾಮ ‘ಭಾವ ತೀರ ಯಾನ’ ಫೆ.21ಕ್ಕೆ ಬಿಡುಗಡೆ

ಭಾವನೆಗಳ ಬೆಸೆದ ಸುಂದರ ಪ್ರೇಮಕಥೆಯ ಭಾವ ತೀರ ಯಾನ ಸಿನಿಮಾಗೆ ಈ ವಾರ ತೆರೆಗೆ ಬರ್ತಿದೆ. ಹೊಸ ಪ್ರತಿಭೆಗಳು ಸೇರಿ ಮಾಡಿರುವ ಚಿತ್ರಕ್ಕೆ ನಿರ್ದೇಶಕರಾದ ಮಯೂರ್‌ ಅಂಬೆಕಲ್ಲು ಹಾಗೂ ತೇಜಸ್ ಕಿರಣ್ ಸಾರಥಿಗಳು. ಇದೇ 21ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಭಾವ ತೀರ ಯಾನ ಬಿಡುಗಡೆಯಾಗುತ್ತಿದ್ದು, ಈ ಕುರಿತು ಚಿತ್ರತಂಡ ಸಾಕಷ್ಟು ಮಾಹಿತಿ ಹಂಚಿಕೊಂಡಿದೆ. ನಿನ್ನೆ ಬೆಂಗಳೂರಿನ ಎಸ್ ಆರ್ ವಿ ಚಿತ್ರಮಂದಿರದಲ್ಲಿ ಸುದ್ದಿಗೋಷ್ಟಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನಿರ್ದೇಶಕ ಮಯೂರ್‌ ಅಂಬೆಕಲ್ಲು ಮಾತನಾಡಿ, ಶುಕ್ರವಾರ ಭಾವ ತೀರ […]

ಛಾವಾ ; ಪ್ರತಿಧ್ವನಿಸುತ್ತಿದೆ ಸಂಭಾಜಿ ಎಂಬ ಸಿಂಹದ ಮರಿಯ ಘರ್ಜನೆ

ಇತಿಹಾಸ ಪಾಠಗಳು ಎಷ್ಟೆಲ್ಲ ಮೋಸಮಾಡಿಬಿಟ್ವಲ್ಲ.. ಎಷ್ಟೆಲ್ಲ ಸತ್ಯಗಳನ್ನು ಮರೆಮಾಚಿಬಿಟ್ಟಿತಲ್ಲ… ಅಂತ ಪದೇಪದೆ ಅನಿಸ್ತಿರುತ್ತೆ. ನಿನ್ನೆ ಮತ್ತೆ ಹಾಗೇ ಅನಿಸಿ ಸಿಟ್ಟು ಬೇಸರ ಆಕ್ರೋಶ ಕಣ್ಣೀರು ಎಲ್ಲವನ್ನೂ ಹುಟ್ಟಿಸಿತು. ಕಾರಣ ’ಛಾವಾ’. ನಾವು ಓದಿದ ಇತಿಹಾಸ ಪಾಠದಲ್ಲಿ ಮರಾಠರು ಮತ್ತು ಪೇಶ್ವೆಗಳು ಅಂತ ಒಂದು ನಾಮಕಾವಾಸ್ತೆ ಪಾಠ ಇತ್ತು. ಶಿವಾಜಿಯ ಬಗ್ಗೆ ಚೂರಾದ್ರೂ ಹೇಳದೇ ಹೋದ್ರೆ ಚಿಕ್ಕ ಮಕ್ಕಳು ಕೂಡ ತಿರುಗಿಸಿ ಒದ್ದುಬಿಡ್ತಾರೆ ಅಂತಾನೋ ಏನೋ ಕೆಲವು ಸಾಲುಗಳಲ್ಲಿ ಶಿವಾಜಿಯ ಪರಾಕ್ರಮವನ್ನು, ರಾಜಾವಧಿಯನ್ನು, ಔರಂಗಜೇಬನ ಜೊತೆಗಿನ ಆತನ ಹಣಾಹಣಿಗಳನ್ನು […]

Translate »