Sandalwood Leading OnlineMedia

ಕರುಳುಬಳ್ಳಿಯ ಕಥೆ ಹೇಳಲಿದೆ “2nd ಲೈಫ್”

ಮಗು ಜನಿಸಿದ ಕೆಲವೇ ದಿನಗಳಲ್ಲಿ ಕರುಳಬಳ್ಳಿ(ಹೊಕ್ಕಳು ಬಳ್ಳಿ) ಬೀಳುತ್ತದೆ. ಅದನ್ನು ಕ್ಯಾನ್ಸರ್‌ ರೋಗಿಗಳ ಔಷದಿಗೆ ಬಳಸಿಕೊಳ್ಳಲಾಗುತ್ತದೆ. ಕರ್ನಾಟಕ ಒಂದರಲ್ಲೆ 70..80 ಸಾವಿರ ಜನರು ಕ್ಯಾನ್ಸರ್ ಗೆ ತುತ್ತಾಗುತ್ತಿದ್ದಾರೆ. ಅಂತಹವರಿಗೆ ಇದು ಉಪಯೋಗವಾಗುತ್ತದೆ.  ಕರುಳಬಳ್ಳಿಯನ್ನು ಶೇಖರಿಸಿಡುವ ಕಾರ್ಯ ಕೂಡ ಎಲ್ಲೆಡೆ ನಡೆಯುತ್ತಿದೆ. ಈ ಅಂಶವನ್ನೇ ಪ್ರಮುಖವಾಗಿಟ್ಟು ಕೊಂಡು “2 nd ಲೈಫ್” ಚಿತ್ರ ತಯಾರಾಗಿದೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು. ಜಯಣ್ಣ ಫಿಲಂಸ್ ಹಾಗೂ ಶುಕ್ರ ಫಿಲಂಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದೆ.

 

 

ಈ ವಾರ ತೆರೆಗೆ “ಆವರ್ತ”

ಜೀವನದಲ್ಲಿ ಯಾವುದೋ ದೊಡ್ಡ ಅನಾಹುತ ನಡೆದು ಅದರಿಂದ ಪಾರಾದಾಗ ಎಲ್ಲರೂ ಹೇಳುವುದು. ನಿನ್ನ ಹೊಸಜೀವನ ಆರಂಭವಾಗಿದೆ ಅಂತ.  ಈ ರೀತಿಯ ಘಟನೆ ಚಿತ್ರದಲ್ಲಿ ನಡೆಯುವುದರಿಂದ ಚಿತ್ರಕ್ಕೆ “2nd ಲೈಫ್” ಅಂತ ಹೆಸರಿಡಲಾಗಿದೆ. ಈಗ ಟ್ರೇಲರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ  ಬರಲಿದೆ ಎಂದು ನಿರ್ದೇಶಕ ರಾಜು ದೇವಸಂದ್ರ ಚಿತ್ರದ ಕುರಿತು ವಿವರಣೆ ನೀಡಿದರು.

 

ಬಿಡುಗಡೆಯಾಯಿತು “ಸ್ಪೂಕಿ ಕಾಲೇಜ್” ಚಿತ್ರದ “ಮೆಲ್ಲುಸಿರೆ ಸವಿಗಾನ” ಹಾಡು

ನಾನು ಈ ಹಿಂದೆ “ಸ್ವಾರ್ಥ ರತ್ನ” ಎಂಬ ಚಿತ್ರದಲ್ಲಿ ‌ಅಭನಯಸಿದ್ದೆ. ಈಗ “2 nd ಲೈಫ್” ಚಿತ್ರದಲ್ಲಿ ನಟಿಸಿದ್ದೇನೆ. ನಾನು ಮೂಲತಃ ಆಡಿಟರ್. ಮಂಜುಳಾ ರಮೇಶ್ ಅವರು ಬರೆದಿರುವ ಈ ಚಿತ್ರದ ಕಥೆ ಹಿಡಿಸಿತು. ಪಿ.ಆರ್.ಕೆ ಆಡಿಯೋ ಮೂಲಕ ಹಾಡು ಬಿಡುಗಡೆಯಾಗಿದೆ. ಕನ್ನಡ, ತೆಲುಗು ಹಾಗೂ ತಮಿಳು ಮೂರು ಭಾಷೆಗಳಲ್ಲಿ ನಮ್ಮ ಚಿತ್ರ ನಿರ್ಮಾಣವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಪ್ರೋತ್ಸಾಹಿಸಿ ಎಂದರು ನಾಯಕ ಆದರ್ಶ ಗುಂಡುರಾಜ್.  ಈ‌ ಚಿತ್ರದಲ್ಲಿ ನನ್ನದು ಕುರುಡಿಯ ಪಾತ್ರ ಎಂದು ತಮ್ಮ ಪಾತ್ರದ ಬಗ್ಗೆ  ನಾಯಕಿ ಸಿಂಧೂ ರಾವ್ ತಿಳಿಸಿದರು. ಸಂಗೀತ ನಿರ್ದೇಶಕ ಆರವ್ ರಿಶಿಕ್, ಛಾಯಾಗ್ರಹಕ ರಮೇಶ್ ಕೊಯಿರ,  ನಟ ಶಿವಪ್ರದೀಪ್ ಹಾಗೂ ಸಹ ನಿರ್ಮಾಪಕ – ನಟ ರುದ್ರಮುನಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

 

 

Share this post:

Related Posts

To Subscribe to our News Letter.

Translate »