Sandalwood Leading OnlineMedia

ರಶ್ಮಿಕಾ ಮಂದಣ್ಣ ಡೀಪ್ ಫೇಕ್ ಕೇಸ್: ನಾಲ್ವರನ್ನು ಬಂಧಿಸಿದ ಪೊಲೀಸರು

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸಂಬಂಧಿಸಿದಂತೆ ನಾಲ್ವರು ಸಂಶಯಾಸ್ಪದ ವ್ಯಕ್ತಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ನಕಲಿ ತಂತ್ರಜ್ಞಾನ ಬಳಸಿ ರಶ್ಮಿಕಾ ಮಂದಣ್ಣ ಅಶ್ಲೀಲ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಲಾಗಿತ್ತು. ಇದರ ಬಗ್ಗೆ ಮಹಿಳಾ ಆಯೋಗ ಕ್ರಮ ಕೈಗೊಳ್ಳಲು ದೆಹಲಿ ಪೊಲೀಸರಿಗೆ ಸೂಚನೆ ನೀಡಿತ್ತು.ಕೇವಲ ರಶ್ಮಿಕಾ ಮಾತ್ರವಲ್ಲ, ಅನೇಕ ನಟಿಯರು, ಸೆಲೆಬ್ರಿಟಿಗಳ ವಿಡಿಯೋವನ್ನು ನಕಲಿ ಸೃಷ್ಟಿಸಿ ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಲಾಗಿತ್ತು. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದೀಗ ರಶ್ಮಿಕಾ ವಿಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹರಿಯಬಿಟ್ಟ ಸಂಶಯದ ಮೇರೆಗೆ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ವಿಡಿಯೋ ಸೃಷ್ಟಿಸಿದ ವ್ಯಕ್ತಿ ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Share this post:

Related Posts

To Subscribe to our News Letter.

Translate »