ಸದಭಿರುಚಿ ಚಿತ್ರಗಳ ನಿರ್ಮಾಪಕರಾದ ರಮೇಶ್ ರೆಡ್ಡಿ ನಿರ್ಮಾಣದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಪ್ರಥಮ ನಿರ್ದೇಶನದಲ್ಲಿ ಮೂಡಿ ಬರಲಿರುವ ‘45’ ಸಿನಿಮಾಗೆ ನಾಯಕಿ ಯಾರಾಗಲಿದ್ದಾರೆ ಎನ್ನುವ ಕುತೂಹಲವಿತ್ತು. ಹಲವು ನಾಯಕಿಯರ ಹೆಸರೂ ಕೇಳಿ ಬಂದಿದ್ದವು. ಅದರಲ್ಲೂ ಸೀರಿಯಲ್ ನಟಿ ಕೌಸ್ತುಭ ಮಣಿ ನಾಯಕಿ ಎಂದು ಹೇಳಲಾಗಿತ್ತು. ಇದೀಗ ಚಿತ್ರತಂಡವೇ ಅಧಿಕೃತ ಮಾಹಿತಿ ನೀಡಿದೆ.
ಫಿಸಿಕ್ಸ್ ಟೀಚರ್ ಈಗ ಚಾಕೊಲೇಟ್ ಬಾಯ್
ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರಕ್ಕೆ ಕೌಸ್ತುಭ ಮಣಿ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಚಿತ್ರತಂಡವೇ ಘೋಷಿಸಿದೆ. ಕಲರ್ಸ್ ಕನ್ನಡದ ‘ನನ್ನರಸಿ ರಾಧೆ’, ಜೀ ತೆಲುಗಿನ ಪ್ರಸಿದ್ದ ಧಾರಾವಾಹಿ ಹಾಗೂ ಕನ್ನಡದ ರಾಮಾಚಾರಿ 2.0 ಚಿತ್ರದಲ್ಲಿ ಕೌಸ್ತುಭ ಮಣಿ ನಟಿಸಿದ್ದಾರೆ.ಮ್ಯೂಸಿಕಲ್ ಕಂಪೋಸರ್ ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ. ಶಿವಣ್ಣ, ಉಪ್ಪಿ, ರಾಜ್ ಬಿ ಶೆಟ್ಟಿಗೆಆ್ಯಕ್ಷನ್ ಕಟ್ ಹೇಳ್ತಿದ್ದಾರೆ. `45′ ಚಿತ್ರದಲ್ಲಿ ಅನೇಕ ವಿಶೇಷತೆಗಳನ್ನು ಹೊಂದಿದೆ ಎಂದು ಈಗಾಗಲೇ ನಿರ್ದೇಶಕರು ಕೆಲ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ‘ಅಭಿರಾಮಚಂದ್ರ’ನಿಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್
ಏಪ್ರಿಲ್ 28ಕ್ಕೆ ತೆರೆಗೆ ಬಹುನಿರೀಕ್ಷಿತ ‘ರಾಘು’ ಚಿತ್ರ ಎಂಟ್ರಿ: ವಿಭಿನ್ನ ರೂಪದಲ್ಲಿ ಚಿನ್ನಾರಿ ಮುತ್ತ!
ಶಿವರಾಜ್‌ಕುಮಾರ್ ನಟನೆಯ `45′ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧಗೊಳ್ಳಲಿದೆ. ಈ ಸಿನಿಮಾಗೆ ರಮೇಶ್ ರೆಡ್ಡಿ ನಿರ್ಮಾಣ ಮಾಡ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭ ಆಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಸಿನಿಮಾ ತೆರೆಕಾಣಿಸಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಕೂಡ ವಹಿಸಿಕೊಂಡಿದ್ದಾರೆ.