ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಸೆಪ್ಟೆಂಬರ್ 18, ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ “45” ಚಿತ್ರತಂಡ ಉಪೇಂದ್ರ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದೆ. ಉಪೇಂದ್ರ ಅವರ ನಿವಾಸಕ್ಕೆ “45” ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಮುಂತಾದವರು ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನೀಡಿರುವ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ ಹಾಗೂ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರು ಅಭಿನಯಿಸುತ್ತಿರುವ ಮಲ್ಟಿ ಸ್ಟಾರರ್ ಸಿನಿಮಾ ’45’.
ಕನ್ನಡ ಚಿತ್ರರಂಗದ ಮೂವರು ಹೆಸರಾಂತ ನಾಯಕ ನಟರ ಸಮಾಗಮದಲ್ಲಿ ಮೂಡಿ ಬರುತ್ತಿರುವ ’45’ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಬಹುಕೋಟಿ ವೆಚ್ಚದಲ್ಲಿ ’45’ ಸಿನಿಮಾ ಅದ್ದೂರಿಯಾಗಿ ನಿರ್ಮಾಣವಾಗುತ್ತಿದೆ. ಬಹುನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರಕ್ಕೆ ಸದ್ಯದಲ್ಲೇ ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶ ಮೂವತ್ತು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ. ಇಷ್ಟು ದಿನಗಳ ಕಾಲ ಅಪಾರ ವೆಚ್ಚದಲ್ಲಿ, ಅದ್ದೂರಿಯಾಗಿ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ನಡೆಯುತ್ತಿರುವುದು ಕನ್ನಡದಲ್ಲಿ ಇದೇ ಮೊದಲಿರಬಹುದು. ಸೆಪ್ಟೆಂಬರ್‌ನಲ್ಲಿ ’45’ ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗಲಿದೆ. ಇನ್ನು ಈ ಚಿತ್ರದ ನಿರ್ದೇಶಕ ಅರ್ಜುನ್ ಜನ್ಯ ಅವರು ಜನಪ್ರಿಯ ಸಂಗೀತ ನಿರ್ದೇಶಕರೇ ಆಗಿರುವುದರಿಂದ ಚಿತ್ರದ ಹಾಡುಗಳ ಬಗ್ಗೆ ಕೂಡ ಸಾಕಷ್ಟು ನಿರೀಕ್ಷೆಯಿದೆ.