ಪರಂವಃ ಸ್ಟುಡಿಯೋಸ್ ನಿರ್ಮಾಣದ, ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಚಿತ್ರವು ಇದೀಗ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ. ಇದೇ ಜೂನ್ 28ಕ್ಕೆ ಜಪಾನ್ ದೇಶದ ಪ್ರಮುಖ ನಗರಗಳಲ್ಲಿ ಚಿತ್ರ ತೆರೆಕಾಣಲಿದೆ.
ಜಪಾನಿನ ಅತೀ ದೊಡ್ಡ ಹಾಗೂ ಜಪಾನ್ ಚಿತ್ರರಂಗದಲ್ಲಿ 1೦೦ ವರ್ಷಕ್ಕೂ ಅಧಿಕ ಅನುಭವ ಹೊಂದಿರುವ “ಶೋಚಿಕೋ ಮೂವೀ” ಎಂಬ ಸಂಸ್ಥೆ ಈ ಚಿತ್ರವನ್ನು ಜಪಾನಿನಲ್ಲಿ ವಿತರಣೆ ಮಾಡಲಿದೆ. ವಿಶೇಷವೆಂದರೆ, ಇದೇ ಸಂಸ್ಥೆಯು ಈ ಹಿಂದೆ “Hachi: A Dog’s Tale” ಎಂಬ ಚಿತ್ರವನ್ನು ಜಪಾನಿನಲ್ಲಿ ವಿತರಣೆ ಮಾಡಿತ್ತು.
ಕಳೆದ ವರ್ಷ ಥೈಲ್ಯಾಂಡ್ ನಲ್ಲಿ ಡಬ್ ಆಗಿ ಬಿಡುಗಡೆಗೊಂಡ ಈ ಚಿತ್ರ, ಮುಂದಿನ ದಿನಗಳಲ್ಲಿ ಜಪಾನ್ ಸೇರಿದಂತೆ ರಷ್ಯಾ, ಲ್ಯಾಟಿನ್ ಅಮೆರಿಕ, ತೈವಾನ್, ಜರ್ಮನಿ ಹಾಗೂ ಇನ್ನಿತರ ದೇಶಗಳಲ್ಲಿ ಬಿಡುಗಡೆಯಾಗಲಿದೆ.
ಇದನ್ನೂ ಓದಿ :ಮೇ ಹತ್ತರಂದು ಮರು ಬಿಡುಗಡೆಯಾಗಲಿದೆ ಪುನೀತ್ ರಾಜಕುಮಾರ್ ಅಭಿನಯದ ಸೂಪರ್ ಹಿಟ್ ಚಿತ್ರ “ಅಂಜನಿ ಪುತ್ರ” .
ಇದನ್ನೂ ಓದಿ :ಧೀರೇನ್ ಆರ್ ರಾಜ್ ಕುಮಾರ್ ಆದ ಧೀರೇನ್ ರಾಮ್ ಕುಮಾರ
ಕಿರಣ್ ರಾಜ್ ನಿರ್ದೇಶನದ ಈ ಚಿತ್ರವು ಜೂನ್ 1೦, 2೦22ಕ್ಕೆ ಐದು ಭಾಷೆಗಳಲ್ಲಿ ಬಿಡುಗಡೆಯಾಗಿ ಎಲ್ಲಾ ವರ್ಗದ ಪ್ರೇಕ್ಷಕರನ್ನು ಭಾವನಾತ್ಮಕವಾಗಿ ಸೆಳೆದಿತ್ತು. ಹಲವಾರು ಪ್ರಶಸ್ತಿಗಳನ್ನ ಬಾಚಿಕೊಂಡ ಈ ಸಿನಿಮಾಗೆ ರಾಷ್ಟ್ರ ಪ್ರಶಸ್ತಿಯೂ ದೊರಕಿದೆ.