ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ಅವರ ನಿಶ್ಚಿತಾರ್ಥ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ವೊಂದರಲ್ಲಿ ನಡೆಯಿತು. ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ ಜೊತೆ ಅಭಿಷೇಕ್ ಎಂಗೇಜ್ ಆಗಿದ್ದಾರೆ.ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಪ್ತರ ಸಮ್ಮುಖದಲ್ಲಿ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ಜೊತೆ ಎಂಗೇಜ್‌ಮೆಂಟ್ ನೆರವೇರಿದೆ. ಈ ವೇಳೆ ಅಭಿಷೇಕ್ ತಾಯಿ ಸುಮಲತಾ ಅಂಬರೀಶ್, ಅವಿವಾ ಅವರ ತಂದೆ-ತಾಯಿ ಹಾಗೂ ನಟ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ರಾಕಿಂಗ್ ಸ್ಟಾರ್ ಯಶ್ ದಂಪತಿ, ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ , ಅನೇಕ ಗಣ್ಯರು, ಚಲನಚಿತ್ರ ತಾರೆಯರು ಹಾಜರಿದ್ದು, ಜೋಡಿಗಳಿಗೆ ಶುಭಹಾರೈಸಿದರು.