ಫ್ಯಾಷನ್ ಐಕಾನ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ ಬಿದ್ದಪ್ಪ ಜೊತೆ ಅಭಿಷೇಕ್ ಅಂಬರೀಶ್ ಸಪ್ತಪದಿ ತುಳಿದಿದ್ದಾರೆ. ಈ ಜೋಡಿಯ ಹೊಸ ಜೀವನಕ್ಕೆ ಶುಭ ಹಾರೈಸಲು ಚಿತ್ರರಂಗ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಆಗಮಿಸಿದ್ದರು. ಹೊಸ ಬಾಳಿಗೆ ಕಾಲಿಡುತ್ತಿರುವ ಅಭಿಷೇಕ್ ಹಾಗೂ ಅವಿವಾಗೆ ಶುಭ ಹಾರೈಸಿದ್ದಾರೆ.
ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಮದುವೆ ಸಮಾರಂಭಕ್ಕೆ ಸೂಪರ್‌ಸ್ಟಾರ್ ರಜನಿಕಾಂತ್ ಆಗಮಿಸಿದ್ದಾರೆ. ವೈಟ್ ಅಂಡ್ ವೈಟ್ ಕಾಸ್ಟ್ಯೂಮ್‌ನಲ್ಲಿ ಆಗಮಿಸಿದ ರಜನಿ ಪ್ರಮುಖ ಆಕರ್ಷಣೆಯಾಗಿದ್ದರು. ಅಂಬರೀಶ್ ಹಾಗೂ ರಜನಿಕಾಂತ್ ಇಬ್ಬರೂ ಆತ್ಮೀಯ ಗೆಳೆಯರು. ಹೀಗಾಗಿ ಬ್ಯುಸಿ ಶೆಡ್ಯೂಲ್‌ನಲ್ಲೂ ಸ್ನೇಹಿತರನ ಪುತ್ರನ ಮದುವೆಗೆ ಬಂದು ಶುಭ ಹಾರೈಸಿದ್ದಾರೆ.
ಅಭಿ ಹಾಗೂ ಅವಿವಾ ಬಿದ್ದಪ್ಪ ಮದುವೆಗೆ ರಾಕಿಂಗ್ ಸ್ಟಾರ್ ಯಶ್ ಆಗಮಿಸಿದ್ದರು. ಡಿಸೈನರ್ ಶೇರ್ವಾನಿ ತೊಟ್ಟು ಮದುವೆ ಸಮಾರಂಭಕ್ಕೆ ಆಗಮಿಸಿ, ನವ ದಂಪತಿಗೆ ಶುಭ ಹಾರೈಸಿದ್ದಾರೆ. ಈ ವೇಳೆ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಜೊತೆ ಕೆಲ ಕಾಲ ಮಾತಾಡಿ ಶುಭ ಹಾರೈಸಿದ ಬಳಿಕ ನಿರ್ಗಮಿಸಿದ್ದಾರೆ. ಯಶ್ ಜೊತೆಗೆ ಪತ್ನಿ ರಾಧಿಕಾ ಪಂಡಿತ್ ಕೂಡ ಆಗಮಿಸಿದ್ದರು. ಪಕ್ಕಾ ಟ್ರೆಡಿಷನ್ ಸೀರೆಯುಟ್ಟು ಮಿಂಚಿದ್ದಾರೆ.
ಪತ್ನಿ ಪ್ರಿಯಾ ಹಾಗೂ ಪುತ್ರಿ ಸಾನ್ವಿ ಜೊತೆ ಕಿಚ್ಚ ಸುದೀಪ್ ಮದುವೆ ಸಮಾರಂಭಕ್ಕೆ ಆಗಮಿಸಿದ್ದರು. ಈ ವೇಳೆ ಅಭಿಷೇಕ್ ಅಂಬರೀಶ್‌ಗೆ ಸುದೀಪ್ ವಿಶೇಷ ಉಡುಗೊರೆಯನ್ನು ನೀಡಿದ್ರು. ತಾವೇ ಸ್ವತ: ಅಭಿಷೇಕ್ ಕತ್ತಿಗೆ ಸರವನ್ನು ಹಾಕಿದ್ದು ವಿಶೇಷವಾಗಿತ್ತು. ಅಭಿ,ಅವಿವಾ ಹಾಗೂ ಕುಟುಂಬಸ್ಥರ ಜೊತೆ ನಿಂತು ಕ್ಯಾಮರಾಗೆ ಪೋಸ್ ಕೂಡ ಕೊಟ್ಟಿದ್ದಾರೆ.
ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಮದುವೆ ಆಗಮಿಸಿದ್ದರು. ಜನ ಜೋಡಿಗೆ ಉಡುಗೊರೆ ನೀಡಿ ಶುಭ ಹಾರೈಸಿದ್ದಾರೆ. ಈ ಸಂಧರ್ಭದಲ್ಲಿ ಮದುವೆ ಮೇಲ್ವಿಚಾರಣೆ ನೋಡುತ್ತಿರೋ ರಾಕ್‌ಲೈನ್ ವೆಂಕಟೇಶ್ ಜೊತೆಗಿದ್ದರು.
ರೆಬಲ್ ಸ್ಟಾರ್ ಅಂಬರೀಶ್ ಮತ್ತೊಬ್ಬ ಆತ್ಮೀಯ ಗೆಳೆಯ ಮೋಹನ್ ಬಾಬು ಉಪಸ್ಥಿತಿ ಇತ್ತು. ಹಾಗೇ ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಮದುವೆಗೆ ಆಗಮಿಸಿ ನವ ಜೋಡಿಗೆ ಆಶೀರ್ವಾದ ನೀಡಿದ್ದಾರೆ. ವೆಂಕಯ್ಯ ನಾಯ್ಡು, ಮೋಹನ್ ಬಾಬು ಹಾಗೂ ರಜನಿಕಾಂತ್ ಈ ಸಂದರ್ಭದಲ್ಲಿ ಕೆಲ ಹೊತ್ತು ಯೋಗಕ್ಷೇಮ ವಿಚಾರಿಸಿಕೊಂಡಿದ್ದಾರೆ.
ರಕ್ಷಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ‘ಸಪ್ತ ಸಾಗರದಾಚೆ ಎಲ್ಲೋ’ ತಂಡದಿoದ `ಡಬಲ್’ ಧಮಾಕ!
ಅಂಬರೀಶ್ ಹಾಗೂ ಸುಮಲತಾ ಕುಟುಂಬಕ್ಕೆ ಆತ್ಮೀಯರಾಗಿರುವ ದಕ್ಷಿಣ ಭಾರತದ ಸ್ಟಾರ್ ನಟಿ ಸುಹಾಸಿನಿ ಮದುವೆ ಅತಿಥಿಯಾಗಿ ಆಗಮಿಸಿದ್ದರು. ಟ್ರೆಡಿಷನ್ ಲುಕ್‌ನಲ್ಲಿ ಡಿಸೈನರ್ ಸೀರೆಯುಟ್ಟು ಆಗಮಿಸಿದ್ದರು. ಈಗತಾನೇ ಕೌಟುಂಬಿಕ ಜೀವನಕ್ಕೆ ಕಾಲಿಟ್ಟಿರೋ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪಗೆ ಶುಭ ಹಾರೈಸಿದರು.