ಖ್ಯಾತ ನಟ ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಇಂದು (ಜುಲೈ 23) ಮಾಧ್ಯಾಹ್ನ 12 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ ಎನ್ನು ಮಾಹಿತಿ ಲಭ್ಯವಾಗಿದೆ. ಲಕ್ಷ್ಮೀದೇವಿ ಅವರಿಗೆ 84 ವರ್ಷ ವಯಸ್ಸಾಗಿತ್ತು.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಅವರನ್ನು ಕಳೆದ 22 ದಿಗಳಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮೀದೇವಿ ಇಹಲೋಕ ತ್ಯಜಿಸಿದ್ದಾರೆ.
ಅರ್ಜುನ್ ಸರ್ಜಾ ಅವರು ಕೆಲ ತಿಂಗಳ ಹಿಂದೆ ಮಾವನನ್ನ ಕಳೆದುಕೊಂಡಿದ್ದರು. ಕಲಾತಪಸ್ವಿ ಎಂದು ಖ್ಯಾತರಾಗಿದ್ದ ನಟ ರಾಜೇಶ್ ಅವರು ಫೆಬ್ರವರಿಯಲ್ಲಿ ಅನಾರೋಗ್ಯದ ಕಾರಣದಿಂದ ವಿಧಿವಶರಾಗಿದ್ದರು. ಆ ನೋವಿನಿಂದ ಹೊರ ಬರುವ ಮೊದಲೇ ತಾಯಿಯ ನಿಧನದ ನೋವು ಅವರನ್ನು ಆವರಿಸಿದ್ದು, ಆಘಾತ ನೀಡಿದೆ. ಅದಕ್ಕೂ ಮುನ್ನ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಶಕ್ತಿ ಪ್ರಸಾದ್ ಅವರ ಇನ್ನೋರ್ವ ಪುತ್ರ ಕಿಶೋರ್ ಸರ್ಜಾ ಕೂಡ ಚಿಕ್ಕ ವಯಸ್ಸಿನಲ್ಲಿ ನಿಧನರಾಗಿದ್ದರು.