Sandalwood Leading OnlineMedia

ದರ್ಶನ್ಗೆ ಜಾಮೀನು ; ಶುರುವಾಗುತ್ತಾ ಡೆವಿಲ್ ಚಿತ್ರೀಕರಣ!?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ತೂಗುದೀಪಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್​ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಕರ್ನಾಟಕ ಹೈಕೋರ್ಟ್ ಆರು ವಾರಗಳ ಅವಧಿ ಅಂದರೆ 45 ದಿನಗಳ ಕಾಲದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆ ಮೂಲಕ ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್​ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

READ MORE ; ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು MMB legacy ಯ ದ್ವಿತೀಯ ವಾರ್ಷಿಕೋತ್ಸವ‌

ಇನ್ನು ನಟ ದರ್ಶನ್ ಗೆ ನೀಡಲಾಗಿರುವ ಮಧ್ಯಂತರ ಜಾಮೀನಿಗೆ ಹೈಕೋರ್ಟ್ ಸಾಕಷ್ಟು ಷರತ್ತುಗಳನ್ನು ವಿಧಿಸಿದೆ. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು, ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಇದೀಗ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ. ಆದರೆ ಆರು ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ. ಜಾಮೀನು ಪಡೆದ ಬಳಿಕ ಒಂದು ವಾರದಲ್ಲಿ ನಟ ದರ್ಶನ್ ಆಸ್ಪತ್ರೆ ದಾಖಲಾತಿ ಮತ್ತು ಚಿಕಿತ್ಸೆ ವಿವರವನ್ನು ಕೋರ್ಟ್ ಗೆ ನೀಡಬೇಕು ಎಂದು ಹೇಳಿದೆ.

READ MORE ; ಧೀರ ಭಗತ್ ರಾಯ್; ವಿಶೇಷ ಪಾತ್ರದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ನಟ ಎಮ್.ಕೆ.ಮಠ

ಅಲ್ಲದೆ ದರ್ಶನ್ ಪಾಸ್ಪೋರ್ಟ್ ಅನ್ನು ಕೋರ್ಟ್ ಸುಪರ್ಧಿಗೆ ನೀಡಬೇಕು ಎಂದು ಹೇಳಿದೆ. ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್​ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಹೈಕೋರ್ಟ್​ನಲ್ಲಿ ಅರ್ಜಿ ಹಾಕಿದ್ದರು. ಆದರೆ ಹೈಕೋರ್ಟ್​ನಲ್ಲಿ ದರ್ಶನ್ ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು. ದರ್ಶನ್​ಗೆ ತೀವ್ರ ಬೆನ್ನುನೋವಿನ ಸಮಸ್ಯೆ ಇದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

READ MORE ; ಭಾರಿ ಮೊತ್ತಕ್ಕೆ ಮಾರಾಟವಾಯ್ತು ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ “45” ಚಿತ್ರದ ಆಡಿಯೋ ‌ರೈಟ್ಸ್

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರು, ದರ್ಶನ್​ರ ಆರೋಗ್ಯ ಸಮಸ್ಯೆಯ ಕುರಿತು ವರದಿ ನೀಡಲು ಮೆಡಿಕಲ್ ಬೋರ್ಡ್ ಸ್ಥಾಪನೆ ಮಾಡಬೇಕೆಂಬ ವಾದವನ್ನು ನ್ಯಾಯಾಲಯದ ಮುಂದೆ ಮಂಡಿಸಿದ್ದರು. ಅಲ್ಲದೆ ಈಗ ಸಲ್ಲಿಸಲಾಗಿರುವ ವೈದ್ಯ ವರದಿಯಲ್ಲಿ ದರ್ಶನ್​ಗೆ ಆಗಬೇಕಿರುವ ಶಸ್ತ್ರಚಿಕಿತ್ಸೆ, ಗುಣವಾಗಲು ತೆಗೆದುಕೊಳ್ಳುವ ಸಮಯ ನಿಖರವಾಗಿಲ್ಲವೆಂದು ವಾದಿಸಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ನಟ ದರ್ಶನ್, ಮೈಸೂರಿನಲ್ಲಿ ಶೂಟಿಂಗ್‌ ತೆರಳಿದ್ದ ದರ್ಶನ್‌ ಅವರನ್ನು ಪೊಲೀಸರು ಜೂನ್ 11 ರಂದು ಬೆಂಗಳೂರಿಗೆ ಕರೆ ತಂದು ಬಂಧಿಸಿದ್ದರು. 11 ದಿನಗಳ ಕಾಲ ಪೊಲೀಸರ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಿದ್ದ ದರ್ಶನ್ ಬಳಿಕ ವಿಚಾರಣಾ ಕೈದಿಯಾಗಿ ಜೈಲು ಸೇರಿದ್ದರು. ಜೂನ್ 22ಕ್ಕೆ ನ್ಯಾಯಾಂಗ ಬಂಧನ ಜಾರಿಯಾಗಿತ್ತು. ಪರಪ್ಪನ ಅಗ್ರಹಾರ ಜೈಲಲ್ಲಿ ಪಾರ್ಟಿ ಮಾಡಿದ ಫೋಟೋ ವೈರಲ್‌ ಆದ ನಂತರ ಕೋರ್ಟ್‌ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿಸಿತ್ತು. 69 ದಿನ ಪರಪ್ಪನ ಅಗ್ರಹಾರದಲ್ಲಿ ಕಳೆದ ದರ್ಶನ್ ಆಗಸ್ಟ್ 29 ಕ್ಕೆ ಬಳ್ಳಾರಿ ಜೈಲಿಗೆ ಆಗಮಿಸಿದ್ದರು. 5 ತಿಂಗಳಿನಿಂದ ಕಂಬಿ ಹಿಂದೆ ಕಾಲ ಕಳೆದಿದ್ದ ದರ್ಶನ್‌ಗೆ ಈಗ ಬಿಡುಗಡೆಯಾಗುವ ಭಾಗ್ಯ ಸಿಕ್ಕಿದೆ. ಇನ್ನು, ದರ್ಶನ್ ಜಾಮೀನು ಮಂಜೂರಾದ ಬೆನ್ನಲೇ ಅವರ ಅಭಿಮಾನಿಗಳಲ್ಲಿ ಡೆವಿಲ್ ಚಿತ್ರ ಚಿತ್ರೀಕರಣ ಆರಂಭವಾಗುವ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಆದರೆ ಶರತ್ತುಗಳ ಮೇಲೆ ಜಾಮೀನು ಪಡೆದುಕೊಂಡಿರುವ ದರ್ಶನ್ ಶೂಟಿಂಗ್‌ನಲ್ಲಿ ಪಾಲ್ಗೊಳ್ಳುವುದು ಸಧ್ಯದ ಪರಿಸ್ಥಿಯಲ್ಲಿ ಅಸಾಧ್ಯವಾದ ಮಾತು.

 

 

Share this post:

Related Posts

To Subscribe to our News Letter.

Translate »