Sandalwood Leading OnlineMedia

ಮಾತಿನಮನೆಯಲ್ಲಿ “ದೇಸಾಯಿ” . ಇದು “ಲವ್ 360” ಖ್ಯಾತಿಯ ಪ್ರವೀಣ್ ಕುಮಾರ್ ಅಭಿನಯದ ಚಿತ್ರ .

ವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳದಗುಡ್ಡ ಕಥೆ ಬರೆದು ನಿರ್ಮಿಸುತ್ತಿರುವ ಹಾಗೂ ನಾಗಿರೆಡ್ಡಿ ಭಡ ನಿರ್ದೇಶನದ “ದೇಸಾಯಿ” ಚಿತ್ರಕ್ಕೆ ಮಾತಿನ ಜೋಡಣೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.

ಇದನ್ನೂ ಓದಿ ಮೂಗಜ್ಜನ ಕೋಳಿ ಸಿನಿಮಾದಲ್ಲಿ ಮೂಗನ ಪಾತ್ರದಲ್ಲಿ ಪಡೀಲ್ ಅಭಿನಯ ,ಕುಸೇಲ್ದರಸರೆ ನವೀನ್ ಡಿ ಪಡೀಲ್ ಗೆ ಅತ್ಯುತ್ತಮ ನಟ ಪ್ರಶಸ್ತಿ

“ದೇಸಾಯಿ” ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಉತ್ತರ ಕರ್ನಾಟಕದ ಶೈಲಿಯ ಕಥಾಹಂದರ ಹೊಂದಿರುವ ಈ ಚಿತ್ರದ ರಚನೆ ಹಾಗೂ ನಿರ್ದೇಶನ ನಾಗಿರೆಡ್ಡಿ ಭಡ ಅವರದು. ಬಾದಾಮಿ, ಬಾಗಲಕೋಟೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

ಇದನ್ನೂ ಓದಿ ಆತ್ಮತಲ್ಲಣ ಹಾರರ್ ರಿವೆಂಜ್ ಕಥೆ

“ಲವ್ 360” ಖ್ಯಾತಿಯ ಪ್ರವೀಣ್ ಕುಮಾರ್ ಈ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದು, ನಾಯಕಿಯಾಗಿ ಮೈಸೂರಿನ ರಾಧ್ಯ ಇದ್ದಾರೆ. “ಒರಟ” ಪ್ರಶಾಂತ್, ಚೆಲುವರಾಜು, ಮಧುಸೂದನ್ ರಾವ್, ಕಲ್ಯಾಣಿ, ಹರಿಣಿ, ನಟನ ಪ್ರಶಾಂತ್, ಮಂಜುನಾಥ್ ಹೆಗಡೆ, ಸೃಷ್ಟಿ (ಕಾಂತಾರ) ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ ಅಕ್ಷಯ್ ಕುಮಾರ್ ತುಂಬಾ ಪ್ರತಿಭಾವಂತ ನಟ: ಜಾಕ್ವೆಲಿನ್ ಫೆರ್ನಾಂಡೀಸ್

ಕಳೆದ ಇಪ್ಪತ್ತು ವರ್ಷಗಳಿಂದ ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ನಾಗಿರೆಡ್ಡಿ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ನಿರ್ಮಾಪಕ ಮಹಾಂತೇಶ್ ಅವರಿಗೂ “ದೇಸಾಯಿ” ಮೊದಲ ನಿರ್ಮಾಣದ ಚಿತ್ರ.

Share this post:

Related Posts

To Subscribe to our News Letter.

Translate »