ಡಾ.ರಾಜ್ಕುಮಾರ್ ಅವರ ಹುಟ್ಟುಹಬ್ಬದಂದು (ಏ.24) ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಹೊಸ ಉದ್ಯಮಕ್ಕೆ ಕೈ ಹಾಕಿದ್ದಾರೆ. ಈ ಕುರಿತು ಪುನೀತ್ ಪತ್ನಿ ಅಶ್ವಿನಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.
ಡಾ.ರಾಜ್ಕುಮಾರ್ ಅವರ ಹುಟ್ಟುಹಬ್ಬದಂದು (ಏ.24) ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಹೊಸ ಉದ್ಯಮಕ್ಕೆ ಕೈ ಹಾಕಿದ್ದಾರೆ. ಈ ಕುರಿತು ಪುನೀತ್ ಪತ್ನಿ ಅಶ್ವಿನಿ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.
-ಅಪ್ಪಾಜಿ ಹುಟ್ಟುಹಬ್ಬದ ಸವಿನೆನಪಿನಲ್ಲಿ ಎಂದು ಅಣ್ಣಾವ್ರರನ್ನು ಅಶ್ವಿನಿ ಸ್ಮರಿಸಿದ್ದಾರೆ. ಇಂದು ಅಪ್ಪಾಜಿಯವರ 95ನೇ ಜನ್ಮದಿನಾಚರಣೆಯ ಅಂಗವಾಗಿ ಹಾಗೂ ಗಂಧದಗುಡಿ ಚಿತ್ರದ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಶುಭಸುದ್ದಿ ತಿಳಿಸಿದ್ದಾರೆ. ಅಪ್ಪು ಅವರ ‘ಗಂಧದಗುಡಿ ಅಗರಬತ್ತಿ’ಯ ಶುಭಾರಂಭದೊಂದಿಗೆ ಸ್ಮರಿಸೋಣ ಎಂದು ಅಶ್ವಿನಿ ಪುನೀತ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಡಾ.ರಾಜ್ ಕುಮಾರ್ ಅವರ ಹುಟ್ಟು ಹಬ್ಬ. ಇಂದು (ಏ.24) ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿಸಲು ನಾನಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ ಅವರ ಅಭಿಮಾನಿಗಳು. ಚುನಾವಣೆ ನಡುವೆಯೂ ಕರ್ನಾಟಕ ಸರಕಾರ ಮತ್ತು ಡಾ.ರಾಜ್ ಕುಮಾರ್ ಸ್ಮಾರಕ ಟ್ರಸ್ಟ್ ಪ್ರತಿ ವರ್ಷದಂತೆ ಈ ವರ್ಷವೂ ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಪ್ರತಿ ವರ್ಷದಂತೆ ಈ ಸಲವೂ ಡಾ.ರಾಜ್ ಪುಣ್ಯಭೂಮಿ ಸ್ಥಳದಲ್ಲಿ ಅಭಿಮಾನಿಗಳು ರಕ್ತದಾನ ಶಿಬಿರ, ಕಣ್ಣುದಾನ ಶಿಬಿರ, ಅನ್ನ ಸಂತರ್ಪಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಳ್ಳುತ್ತಿದ್ದಾರೆ. ಬೆಳಗ್ಗೆಯಿಂದಲೇ ಈ ಎಲ್ಲ ಕೆಲಸಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋದ ಆವರಣದಲ್ಲೇ ಶುರುವಾಗಿದೆ.