ಅಗ್ನಿ ಸಾಕ್ಷಿ ಧಾರಾವಾಹಿ ಮೂಲಕ ರಾಜ್ಯದ ಜನತೆಯ ಮನ ಗೆದ್ದು, ಇದೀಗ ಸೀತಾರಾಮ ಧಾರಾವಾಹಿ ಮೂಲಕ ಮನೆ ಮಾತಾಗಿರುವ ವೈಷ್ಣವಿ ಗೌಡ ಮದುವೆಯ ಸಂಭ್ರಮದಲ್ಲಿದ್ದಾರೆ. ಕಿರುತೆರೆ ನಟಿ ವೈಷ್ಣವಿ ಗೌಡ ಮದುವೆ ನಿಶ್ಚಯವಾಗಿದೆ. ಸದ್ದಿಲ್ಲದೇ ಎಂಗೇಜ್‌ಮೆಂಟ್ ಕೂಡ ನಡೆದಿದೆ. ಅದಕ್ಕೆ ಸಂಬಂಧಿಸಿ ಫೋಟೊಗಳು ವೈರಲ್ ಆಗುತ್ತಿದೆ. ನಟಿ ಅಮೂಲ್ಯ ಸೇರಿ ಆಪ್ತರು, ಸ್ನೇಹಿತರು ಈ ಅದ್ಧೂರಿ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ. ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.

