Sandalwood Leading OnlineMedia

ತೆರೆಗೆ ಬರಲು ರೆಡಿ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ

 

ಸ್ಯಾಂಡಲ್‌ವುಡ್‌ನ ಭರವಸೆ ನಟ ರೂಪೇಶ್ ಶೆಟ್ಟಿ ಅಭಿನಯದ ಅಧಿಪತ್ರ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಫೆಬ್ರವರಿ 7ಕ್ಕೆ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಅಧಿಪತ್ರದಲ್ಲಿ ಕರಾವಳಿ ಭಾಗದ ಕಥೆಯನ್ನು ಕಟ್ಟಿಕೊಡಲಾಗಿದೆ.

 

ಕರಾವಳಿ ಭಾಗದ ವಿಶೇಷ ಆಚರಣೆಗಳಾದ ಆಟಿ ಕಳಂಜಾ, ಯಕ್ಷಗಾನ, ಹುಲಿ ಕುಣಿತ ಜೊತೆಗೆ ಅಧಿಪತ್ರ ಚಿತ್ರದಲ್ಲಿ ಹೊಸ ರೀತಿಯ ಕಥೆಯನ್ನೆ ಹೆಣೆಯಲಾಗಿದೆ. ಚಯನ್ ಶೆಟ್ಟಿ ಒಂದ್ ಒಳ್ಳೆ ಗಟ್ಟಿಕಥೆಯ ಜೊತೆಗೆ ಅದ್ಭುತ ಮೇಕಿಂಗ್ ಕೂಡ ಮಾಡಿದ್ದಾರೆ ಅದನ್ನ ಕರಾವಳಿ ಭಾಗದಲ್ಲಿಯೇ ಚಿತ್ರೀಕರಣ ಮಾಡಿದ್ದಾರೆ.ಈಗಾಗಲೇ ಚಿತ್ರದ ಡಬ್ಬಿಂಗ್ ಹಾಗೂ ಓಟಿಟಿ ಹಕ್ಕುಗಳಿಗೆ ಬೇಡಿಕೆ ಬಂದಿದೆ.

 

ಅಧಿಪತ್ರ ಚಿತ್ರದಲ್ಲಿ ರೂಪೇಶ್ ಶೆಟ್ಟಿಗೆ ನಿರೂಪಕಿ ಜಾಹ್ನವಿ ಜೋಡಿ ಆಗಿದ್ದಾರೆ. ಸಿನಿಮಾದಲ್ಲಿ ನುರಿತ ಕಲಾವಿದರೇ ಇದ್ದಾರೆ. ಎಂ.ಕೆ.ಮಠ ಅಭಿನಯಿಸಿದ್ದಾರೆ. ಕಾಂತಾರ ಚಿತ್ರ ಖ್ಯಾತಿಯ ಪ್ರಕಾಶ್ ತುಮಿನಾಡು, ರಘು ಪಾಂಡೇಶ್ವರ್, ದೀಪಕ್ ರೈ, ಕಾರ್ತಿಕ್ ಭಟ್, ಅನಿಲ್ ಉಪ್ಪಾಲ್, ಪ್ರಶಾಂತ್ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

‘ಅಧಿಪತ್ರ’ ಸಿನಿಮಾವು ಸಸ್ಪೆನ್ಸ್-ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬಂದಿದೆ. ‘ಕೆ.ಆರ್. ಸಿನಿ ಕಂಬೈನ್ಸ್’ ಬ್ಯಾನರ್‌ ಮೂಲಕ ದಿವ್ಯಾ ನಾರಾಯಣ್, ಕುಲದೀಪ್ ರಾಘವ್ ಲಕ್ಷ್ಮೇ ಗೌಡ ಅವರು ಈ ಚಿತ್ರಕ್ಕೆ ‌ಬಂಡವಾಳ ಹೂಡಿದ್ದಾರೆ ಹಾಗೂ ಬೆಳಕು ಫಿಲಂಸ್ ಅಡಿಯಲ್ಲಿ ಕಾರ್ತಿಕ್ ಶೆಟ್ಟಿ ಮತ್ತು ಸತೀಶ್ ಶೆಟ್ಟಿ ಶ್ವೇತಾ ರವಿಚಂದ್ರ ಶೆಟ್ಟಿ ಕೂಡ ಸಹ-ನಿರ್ಮಾಪಕರಾಗಿದ್ದಾರೆ. ಅಧಿಪತ್ರ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿದಿದ್ದು ಇದೆ 27 ಕೆ ಚಿತ್ರದ ಮೊದಲ ಹಾಡು ಲಹರಿ ಮ್ಯೂಸಿಕ್ ನಲ್ಲಿ ರಿಲೀಸ್ ಆಗಲಿದೆ

 

Share this post:

Related Posts

To Subscribe to our News Letter.

Translate »