Sandalwood Leading OnlineMedia

*ಅದ್ದೂರಿ ಹಾಗೂ ಅಪಾರ ವೆಚ್ಚದ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ನಟ ಅರುಣ್ ರಾಮ್ ಗೌಡ(ಅರು ಗೌಡ) ರೀ ಎಂಟ್ರಿ* .

 *ತಮ್ಮ ಹುಟ್ಟುಹಬ್ಬದ ದಿನ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಚಿತ್ರದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಮಾಡಿದ ಅರುಣ್ ರಾಮ್ ಗೌಡ* .“ಮುದ್ದು ಮನಸ್ಸೆ” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅರುಣ್ ರಾಮ್ ಗೌಡ, ನಂತರ 3 ಗಂಟೆ 30 ದಿನ 30 ಸೆಕೆಂಡ್, ಪತಿ ಬೇಕು. ಕಾಮ್ ಹಾಗೂ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರಗಳಲ್ಲಿ ನಟಿಸಿದ್ದರು.

ಇನ್ನೂ ಓದಿ   *ಲೈಕಾ ಪ್ರೊಡಕ್ಷನ್ ಸಂಸ್ಥೆಯ ಹೊಸ ಸಿನಿಮಾ ಅನೌನ್ಸ್….ಸೆನ್ಸೇಷನಲ್ ಸಿನಿಮಾ ’2018’ ನಿರ್ದೇಶಕರ ಜೊತೆ ಕೈ ಜೋಡಿಸಿದ ಸುಭಾಷ್ ಕರಣ್*

ಕೆಲವು ವರ್ಷಗಳ ಬಳಿಕ ಅರುಣ್ ರಾಮ್ ಗೌಡ ಪ್ಯಾನ್ ಇಂಡಿಯಾ ಚಿತ್ರವೊಂದರ ಮೂಲಕ ಚಿತ್ರರಂಗಕ್ಕೆ ರೀ ಎಂಟ್ರಿ ಕೊಡುತ್ತಿದ್ದಾರೆ. ಅರುಣ್ ರಾಮ್ ಗೌಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಪ್ರಮುಖಪಾತ್ರದಲ್ಲೂ ನಟಿಸುತ್ತಿದ್ದಾರೆ. ಅರುಣ್ ರಾಮ್ ಗೌಡ ತಮ್ಮ ಹುಟ್ಟುಹಬ್ಬದ ದಿನ(ಜುಲೈ 7) ಈ ಚಿತ್ರದ ಮೊದಲ ಗ್ಲಿಂಪ್ಸನ್ನು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಬಿಡುಗಡೆ ಮಾಡಿದ್ದಾರೆ.

ಇನ್ನೂ ಓದಿ   *ಜುಲೈ 6 ಕಿಚ್ಚನಿಗೆ ಸ್ಪೆಷಲ್ ಡೇ…ಹುಚ್ಚ@22..ಈಗ@11..ಫ್ಯಾನ್ಸ್ ಸೆಲೆಬ್ರೇಷನ್*

ಇದೊಂದು ಬಿಗ್ ಬಜೆಟ್ ನ ಪ್ಯಾನ್ ಇಂಡಿಯಾ ಮೂವೀ ಎಂದು ತಿಳಿಸಿರುವ ಅರುಣ್ ರಾಮ್ ಗೌಡ, ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಜೊತೆಗೆ ಪ್ರಮುಖ ಪಾತ್ರದಲ್ಲೂ ನಟಿಸುತ್ತಿದ್ದೇನೆ. ಈ ಚಿತ್ರದ ನಾಯಕಿ, ವಿಲನ್ ಸೇರಿದಂತೆ ಎಲ್ಲಾ ಕಲಾವಿದರು ಹಾಗೂ ತಂತ್ರಜ್ಞರು ಸಾಕಷ್ಟು ಜನಪ್ರಿಯರಾಗಿರುವವರೆ ಇರುತ್ತಾರೆ. ನನ್ನ ಹುಟ್ಟುಹಬ್ಬದ ದಿನ ಅಯೋಧ್ಯೆಯಲ್ಲಿ ಈ ಚಿತ್ರದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಮಾಡಿ, ಶ್ರೀರಾಮನ ಆಶೀರ್ವಾದ ಪಡೆದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.

Share this post:

Related Posts

To Subscribe to our News Letter.

Translate »