ಗೆಳೆಯನ ಚೊಚ್ಚಲ ನಿರ್ದೇಶನದ ಚಿತ್ರದ ಶೀರ್ಷಿಕೆ ಅನಾವರಣಗೊಳಿಸುವ ಮೂಲಕ ಶುಭ ಹಾರೈಸಿದ ರಿಷಬ್ ಶೆಟ್ಟಿ.
‘ಆಫ್ಟರ್ ಆಪರೇಷನ್ ಲಂಡನ್ ಕೆಫೆ’ ಚಿತ್ರದ ಟೈಟಲ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಗೊಳಿಸುವ ಮೂಲಕ ನಿರ್ದೇಶಕ ಸಡಗರ ರಾಘವೇಂದ್ರ ತಮ್ಮ ಮೊದಲನೆಯ ನಿರ್ದೇಶನದ ಸಡಗರದಕ್ಕೆ ಗೆಳೆಯ ರಿಷಬ್ ಶೆಟ್ಟಿ. ಸಾಥ್ ನೀಡಿದ್ದಾರೆ.
ಈಗಾಗಲೇ ಸುದ್ಧಿಯಾಗಿರುವ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯ ಪ್ಯಾನ್ ಇಂಡಿಯಾ ಸಿನಿಮಾ ಬಹುತೇಕ ಚಿತ್ರೀಕರಣ ಮುಗಿಸಿದ್ದು, ಚಿತ್ರದ ಟೈಟಲ್ ಬಿಡುಗಡೆಯ ವಿಚಾರದಲ್ಲಿ ಮೊದಲಿನಿಂದಲೂ ಕುತೂಹಲ ಹುಟ್ಟಿಸಿದ್ದ ಚಿತ್ರ ತಂಡ ಕೊನೆಗೂ ನಾಯಕ ಕವೀಶ್ ಶೆಟ್ಟಿ ಹುಟ್ಟುಹಬ್ಬದ ಉಡುಗೊರೆಯಾಗಿ ಪ್ಯಾನ್ ಇಂಡಿಯಾ ಮಟ್ಟದ ಆಕರ್ಷಕ ಟೈಟಲ್ ಬಿಡುಗಡೆ ಮಾಡಿ ಚಿತ್ರದ ಬಗ್ಗೆ ಇನ್ನಷ್ಟೂ ಕುತೂಹಲ ಮೂಡಿಸಿದೆ.
ತನ್ನ ವೃತ್ತಿ ಬದುಕಿನಲ್ಲಿ ನಿರ್ದೇಶನದ ಮೊದಲ ಹೆಜ್ಜೆಯಿಡುತ್ತಿರುವ ಗೆಳೆಯ ಸಡಗರ ರಾಘವೇಂದ್ರನಿಗೆ ಶುಭ ಹಾರೈಕೆಗಳು ಹಾಗೂ ತನ್ನ ಎರಡನೆಯ ಚಿತ್ರದ ನಾಯಕನಾಗಿ ನಟಿಸುತ್ತಿರುವ ಕವೀಶ್ , ನಾಯಕಿ ಮೇಘಾ , ಮತ್ತು ನಿರ್ಮಾಪಕರು ಹಾಗೂ ಉಳಿದ ಎಲ್ಲಾ ಕಲಾವಿದರು ಮತ್ತು ತಾಂತ್ರಿಕ ವರ್ಗಕ್ಕೆ ಶುಭಾಶಯಗಳು.
ನಿಮ್ಮ ಪ್ರೀತಿಯ…
ರೀಷಬ್ ಶೆಟ್ಟಿ. pic.twitter.com/KOxBRi4N3d— Rishab Shetty (@shetty_rishab) June 5, 2022
‘ಆಫ್ಟರ್ ಆಪರೇಷನ್ ಲಂಡನ್ ಕೆಫೆ’ ಟೈಟಲ್ನಲ್ಲಿಯೇ ಇದೊಂದು ದೊಡ್ಡ ಮಟ್ಟದ ಆಕ್ಷನ್ ಪ್ಯಾಕೇಜ್ ಸಿನಿಮಾ ಎನ್ನುವುದನ್ನು ರುಜು ಮಾಡಿದೆ. ಹಾಲಿವುಡ್ ಶೈಲಿಯ ಪೋಸ್ಟರ್ನಲ್ಲಿರುವ ನಾಯಕ ಕವೀಶ್ ಶೆಟ್ಟಿ ಖದರ್ ಅದಕ್ಕೆ ಪುಷ್ಟಿ ನೀಡಿದೆ.
ನುರಿತ ತಾಂತ್ರಿಕ ವರ್ಗ ಹಾಗೂ ಕನ್ನಡ, ಮರಾಠಿ ಮತ್ತು ಬಹುಭಾಷಾ ಕಲಾವಿದರನ್ನು ಹೊಂದಿರುವ ಲಂಡನ್ ಕೆಫೆಯ ಗುಟ್ಟು ಬಿಟ್ಟು ಕೊಡದ ನಿರ್ದೇಶಕ ಸಡಗರ ರಾಘವೇಂದ್ರ ಹೆಸರಿಗೆ ತಕ್ಕಂತೆ ಚಿತ್ರ ಪ್ರೇಕ್ಷಕರ ನಿರೀಕ್ಷೆಯನ್ನು ನಿರಾಸೆಗೊಳಿಸುವುದಿಲ್ಲ ಎನ್ನುತ್ತಾ ಚಿತ್ರದ ಟೈಟಲ್ ಬಿಡುಗಡೆಗೆ ಸಹಕರಿಸಿದ ಗೆಳೆಯ ರಿಷಬ್ ಶೆಟ್ಟಿ ಈ ಮೂಲಕ ಕೃತಜ್ಞತೆಯನ್ನು ಸೂಚಿಸಿದ್ದಾರೆ.
ಉಡುಪಿಯ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ ಮತ್ತು ಮರಾಠಿಯ ಹೆಸರಾಂತ ಡ್ರೀಮರ್ಸ್ ಪ್ರೊಡಕ್ಷನ್ ದೀಪಕ್ ರಾಣೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು. ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆಯನ್ನು ಹೊಂದಿದ್ದಾರೆ. ಕನ್ನಡದ ಮತ್ತೊಂದು ಚಿತ್ರ ಕರ್ನಾಟಕದ ಗಡಿ ಭಾಷೆಯನ್ನು ಮೀರಿ ಯಶಸ್ಸಿನ ಹಾದಿಯಲ್ಲಿ ಸಾಗಲಿ!