Sandalwood Leading OnlineMedia

ಭರಪೂರ ಮೆಚ್ಚುಗೆ ಪಡೆದ ಕವೀಶ್ ಹಾಗೂ ಮೇಘಾ ಅಭಿನಯದ  `ಆಫ್ಟರ್ ಆಪರೇಷನ್ ಲಂಡನ್ ಕೆಫೆ’ ಟೀಸರ್ 

ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ‘ಆಪರೇಷನ್ ಲಂಡನ್ ಕೆಫೆ’ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರೇಕ್ಷಕರಿಂದ ಭರ್ಜರಿ ಫಲಿತಾಂಶವನ್ನು ಕಾಣುತ್ತಿದೆ. ಟೀಸರ್ ಬಿಡುಗಡೆ ಮಾಡಿದ ಚಿತ್ರತಂಡ ಇದೆ ಮೊದಲ ಬಾರಿ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಹಂಚಿಕೊಂಡಿದೆ.

ಮೊದಲು ಮಾತನಾಡಿದ ನಿರ್ದೇಶಕ ಸಡಗರ ರಾಘವೇಂದ್ರ, ನಾನು ಕನ್ನಡದ ಹೆಸರಾಂತ ನಿರ್ದೇಶಕರ ಜೊತೆ ಹಲವಾರು ವರ್ಷಗಳಿಂದ ಕೆಲಸ ಮಾಡಿದ ನಂತರ ಇದೇ ಮೊದಲ ಬಾರಿಗೆ ತನ್ನ ಚೊಚ್ಚಲ ಚಿತ್ರದ ನಿರ್ದೇಶನ ಮಾಡಿದ್ದೇನೆ. ಈ ಚಿತ್ರದ ನಾಯಕನಾಗಿ ನಟಿಸಿರುವ ಕವೀಶ್ ಶೆಟ್ಟಿ ಈ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಹಾಗೂ ಚಿತ್ರದ ನಿರ್ಮಾಪಕರಿಗೆ ಧನ್ಯವಾದ ತಿಳಿಸುತ್ತೇನೆ. ಇನ್ನು ಇದೊಂದು ನಕ್ಸಲಿಸಂ ಬೇಸಾಗಿಟ್ಟಿಕೊಂಡು ಹೆಣೆದಿರುವ ಕಥೆ‌.‌ ಹಾಗಂತ ನಕ್ಸಲಿಸಂನ ವೈಭವಿಕರಿಸಿಲ್ಲ. ಯಾವುದೇ ಒಬ್ಬ ವ್ಯಕ್ತಿಯ ಕುರಿತಾದ ಚಿತ್ರವೂ ಇದಲ್ಲ. ಇದು ಆಫ್ಟರ್ “ಆಪರೇಷನ್ ಲಂಡನ್ ಕೆಫೆ”. ನೀವು ಮೊದಲು ನೋಡುವುದು ಚಿತ್ರದ ಪ್ರೀಕ್ವೆಲ್. ಮೊದಲ ಭಾಗ ಆನಂತರ ಬರಲಿದೆ. ಆ ಚಿತ್ರದ ಕುರಿತು ಈಗಾಗಲೇ ಕಾರ್ಯ ಆರಂಭವಾಗಿದೆ. ಕನ್ನಡ ಹಾಗೂ ಮರಾಠಿ ಎರಡೂ ಭಾಷೆಯಲ್ಲಿ ನೇರವಾಗಿ ಚಿತ್ರೀಕರಣ ಮಾಡಲಾಗಿದೆ‌. ಉಳಿದಂತೆ ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂನಲ್ಲೂ ಚಿತ್ರ ಬಿಡುಗಡೆಯಾಗಲಿದೆ. ಕನ್ನಡ ಕಲಾವಿದರು ಮರಾಠಿ ಕಲಿತು, ಮರಾಠಿ ಕಲಾವಿದರು ಕನ್ನಡ ಕಲಿತು ಅಭಿನಯಿಸಿರುವುದು ಈ ಚಿತ್ರದ ವಿಶೇಷ.

ಸಡಗರ ರಾಘವೇಂದ್ರ, ನಿರ್ದೇಶಕರು

“ಮುಂಗಾರು ಮಳೆ 2” ಚಿತ್ರದಿಂದ ನನ್ನ ಸಿನಿ ಜರ್ನಿ ಆರಂಭವಾಯಿತು. ನಂತರ 2020 ರಲ್ಲಿ “ಜಿಲ್ಕಾ” ಚಿತ್ರದಲ್ಲಿ ನಟಿಸಿದ್ದೆ. ಸಡಗರ ರಾಘವೇಂದ್ರ ಅವರ ಕಾರ್ಯವೈಖರಿಯನ್ನು ಹತ್ತಿರದಿಂದ ಕಂಡಿದ್ದ ನನಗೆ ಅವರ ಮೊದಲ ನಿರ್ದೇಶನದಲ್ಲಿ ನನ್ನದೊಂದು ಚಿತ್ರ ಮಾಡುವ ಆಸೆಯಿತ್ತು. ಈ ಚಿತ್ರದ ಮೂಲಕ ಅದು ಈಡೇರಿದೆ. ವಿಜಯ ಕುಮಾರ್ ಶೆಟ್ಟಿ, ರಮೇಶ್ ಕೊಠಾರಿ, ಹವರಾಲ್ ಹಾಗೂ ದೀಪಕ್ ರಾಣೆ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಮೇಘಾ ಶೆಟ್ಟಿ ನಾಯಕಿಯಾಗಿ ಅಭಿನಯಿಸಿದ್ದಾರೆ ಎಂದು ನಾಯಕ ಕವೀಶ್ ಶೆಟ್ಟಿ ತಿಳಿಸಿದರು. ನಾನು ಮರಾಠಿ ಕಲಿತು ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನಿರ್ದೇಶಕರಾಗಿ ಸಡಗರ ರಾಘವೇಂದ್ರ ಅವರು ತಮ್ಮ ಮೊದಲ ನಿರ್ದೇಶನದಲ್ಲೇ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಒಳ್ಳೆಯ ತಂಡದ ಜೊತೆಗೆ ಕೆಲಸ ಮಾಡಿರುವ ಖುಷಿಯಿದೆ ಎಂದರು ಮೇಘಾ ಶೆಟ್ಟಿ. ಇಂಡಿಯನ್ ಫಿಲ್ಮ್ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲಂ ಲಾಂಛನದಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿರುವ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ಮಾತನಾಡಿ ಈ ಚಿತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ ಎಂದರು. ಛಾಯಾಗ್ರಾಹಕ ಎನ್ ಡಿ ನಾಗಾರ್ಜುನ್, ಸಾಹಸ ನಿರ್ದೇಶಕ ಮಾಸ್ ಮಾದ ಹಾಗೂ ಚಿತ್ರದಲ್ಲಿ ನಟಿಸಿರುವ ಅರ್ಜುನ್ ಕಾಪಿಕ್ಕಾಡ್, ವಿರಾಟ್ ಮಡಕೆ ಮುಂತಾದವರು “ಆಪರೇಷನ್ ಲಂಡನ್ ಕೆಫೆ” ಹಾಗೂ ತಮ್ಮ ಪಾತ್ರದ ಬಗ್ಗೆ ಮಾತನಾಡಿ, ಚಿತ್ರದ ಮೇಕಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

Share this post:

Related Posts

To Subscribe to our News Letter.

Translate »