ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಹಸೆಮಣೆ ಏರಲು ರೆಡಿಯಾಗಿದ್ದಾರೆ. ತಮಿಳಿನ ಖ್ಯಾತ ನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ ಜೊತೆ ನಟಿ ಮದುವೆಯಾಗಲಿದ್ದಾರೆ. ಸದ್ಯ ಮದುವೆಯ ದಿನಾಂಕ ನಿಗದಿಯಾಗಿದೆ.
ನಟ ಅರ್ಜುನ್ ಸರ್ಜಾ ಸದ್ಯ ತಮ್ಮ ಮೊದಲನೇ ಮಗಳು ಐಶ್ವರ್ಯಾ ಮದುವೆ ಮಾಡುವುದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಇಬ್ಬರ ಮದುವೆ ಚೆನ್ನೈನಲ್ಲೇ ನಡೆಯಲಿದ್ದು, ಜೂನ್ 10ರಂದು ಸಂಪ್ರದಾಯಬದ್ಧವಾಗಿ ಮದುವೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ. ಈ ಮದುವೆಯಲ್ಲಿ ಸಂಬಂಧಿಕರು ಹಾಗೂ ಚಿತ್ರರಂಗದ ಗಣ್ಯರು ಪಾಲ್ಗೊಳ್ಳಲಿದ್ದಾರೆ. ತಮಿಳು ಹಾಗೂ ಕನ್ನಡ ಚಿತ್ರರಂಗದ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ.
ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ ಹಾಗೂ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಇಬ್ಬರೂ ಕಳೆದ ಹಲವು ದಿನಗಳಿಂದ ಪ್ರೀತಿಸುತ್ತಿದ್ದರು. ಈ ವಿಷಯವನ್ನು ಮನೆಯವರಿಗೆ ತಿಳಿಸಿದ ಬಳಿಕ ಕಳೆದ ಅಕ್ಟೋಬರ್ 27ಕ್ಕೆ ಚೆನ್ನೈನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿದ್ದರು. ಈ ಕಾರ್ಯಕ್ರಮಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸೇರಿದಂತೆ ಕುಟುಂಬಸ್ಥರು ಭಾಗವಹಿಸಿದ್ದರು.