Sandalwood Leading OnlineMedia

“ಅಲೆಕ್ಸಾ” ಆದ ಅದಿತಿ ಪ್ರಭುದೇವ

“ಅಲೆಕ್ಸಾ” ಆದ ಅದಿತಿ ಪ್ರಭುದೇವ .

ಅದಿತಿ ಪ್ರಭುದೇವ ಕನ್ನಡ ಚಿತ್ರರಂಗದ ಪ್ರತಿಭಾವಂತ ನಟಿ. ಪ್ರಸ್ತುತ ಇವರ ನಟನೆಯ “ಅಲೆಕ್ಸಾ” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿದೆ. ಒಂದು ಹಾಡು ಸೇರಿದಂತೆ ಕೆಲವು ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದೆ‌.

ಜೀವಾ ನಿರ್ದೇಶನದ ಈ ಚಿತ್ರಕ್ಕೆ ಇತ್ತೀಚೆಗೆ ರಾಮಮೂರ್ತಿ ನಗರದ ಬಳಿ ಖ್ಯಾತ ಸಾಹಸ ನಿರ್ದೇಶಕ ರವಿವರ್ಮ ಸಾಹಸ ಸಂಯೋಜನೆಯಲ್ಲಿ ಭರ್ಜರಿ ಕ್ಲೈಮ್ಯಾಕ್ಸ್ ಸಾಹಸ ಸನ್ನಿವೇಶದ ಚಿತ್ರೀಕರಣ ನಡೆದಿದೆ. ಅದಿತಿ ಪ್ರಭುದೇವ, ಪವನ್ ತೇಜ್ ಈ ಸಾಹಸ ಸನ್ನಿವೇಶದಲ್ಲಿ ಭಾಗವಹಿಸಿದ್ದರು.

ಕಳೆದ 24 ವರ್ಷಗಳಿಂದ ಜೀವಾ ಅವರಿಗೆ ಕನ್ನಡ ಚಿತ್ರರಂಗದೊಂದಿಗೆ ನಂಟು. ಹೆಸರಾಂತ ತಂತ್ರಜ್ಞರ ಜೊತೆ ಕೆಲಸ ಮಾಡಿರುವ ಜೀವಾ ಅವರು ಪ್ರಜ್ವಲ್ ದೇವರಾಜ್ ಅಭಿನಯದ 25ನೇ ಚಿತ್ರ “ಬುಜಂಗ” ಚಿತ್ರವನ್ನು ನಿರ್ದೇಶಿಸಿದ್ದರು. ಇದು ಅವರಿಗೆ ಎರಡನೇ ಚಿತ್ರ.

ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

ವಿ.ಚಂದ್ರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಡಾ||ವಿ.ನಾಗೇಂದ್ರಪ್ರಸಾದ್ ಹಾಡುಗಳನ್ನು ಬರೆದಿದ್ದು, ಎ.ಪಿ.ಒ ಸಂಗೀತ ನೀಡಿದ್ದಾರೆ. ಸಾಯಿಸತೀಶ್ ಛಾಯಾಗ್ರಹಣ, ಉಮೇಶ್ ಸಂಕಲನ, ಚಂದ್ರು, ರಾಮು ನೃತ್ಯ ನಿರ್ದೇಶನ ಹಾಗೂ ರವಿವರ್ಮ, ಮಾಸ್ ಮಾದ, ವಿಕ್ರಮ್ ಮೋರ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

     

ಅದಿತಿ ಪ್ರಭುದೇವ ವಿಶೇಷ ತನಿಖಾಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಪವನ್ ತೇಜ್ ನಾಯಕನಾಗಿ ಅಭಿನಯಿಸುತ್ತಿದ್ದಾರೆ‌. ನಾಗಿಣಿ ಧಾರಾವಾಹಿ ಖ್ಯಾತಿಯ ನಾಗಾರ್ಜುನ್, ಮೇಘಾಶ್ರೀ, ಹನುಮಂತೇಗೌಡ, ಚಂದ್ರಕಲಾ ಮೋಹನ್, ಮಿಮಿಕ್ರಿ ಗೋಪಿ, ಮೈಸೂರು ಮಲ್ಲೇಶ್ ಹಾಗೂ ಮನಮೋಹನ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Share this post:

Related Posts

To Subscribe to our News Letter.

Translate »