ಟಾಲಿವುಡ್‌ನ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಸಿನಿಮಾ ‘ಪುಷ್ಪ 2’ ಬಾಕ್ಸಾಫೀಸ್ ಅನ್ನೇ ಉಡಾಯಿಸಿತ್ತು.ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದರು. 2024 ಡಿಸೆಂಬರ್ ತಿಂಗಳಿನಲ್ಲಿ ತೆರೆಕಂಡಿದ್ದ ‘ಪುಷ್ಪ 2’ ಇನ್ನೂ ಚಿತ್ರಮಂದಿರದಲ್ಲಿ ಸದ್ದು ಮಾಡುತ್ತಿರುವಾಗಲೇ ಓಟಿಟಿ ರಿಲೀಸ್ ಬಗ್ಗೆ ಸುದ್ದಿಯಾಗುತ್ತಿದೆ. ಡಿಸೆಂಬರ್ 5 ರಂದು ರಿಲೀಸ್ ಆಗಿದ್ದ ‘ಪುಷ್ಪ 2′ ಬರೋಬ್ಬರಿ 56 ದಿನಗಳವರೆಗೂ ಓಟಿಟಿಯಲ್ಲಿ ರಿಲೀಸ್ ಆಗುವುದಿಲ್ಲ ಎಂದು ಹೇಳಿದ್ದರು.’ಪುಷ್ಪ 2’ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ 20 ನಿಮಿಷಗಳ ಹೆಚ್ಚುವರಿ ದೃಶ್ಯಗಳನ್ನು ಸೇರಿಸಿದ್ದರು. ಅಲ್ಲಿಂದ ರಿಲೋಡ್ ಆಗಿರುವ ‘ಪುಷ್ಪ 2’ ಥಿಯೇಟರ್‌ಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಈ ಮಧ್ಯೆ ‘ಪುಷ್ಪ 2′ ಓಟಿಟಿ ರಿಲೀಸ್ ಬಗ್ಗೆನೂ ಸುದ್ದಿಯಾಗುತ್ತಿದೆ.
ಇದೇ ತಿಂಗಳು ಅಂದರೆ, ಜನವರಿ 30 ಇಲ್ಲವೇ ಜನವರಿ 31ಕ್ಕೆ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಆದರೆ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ಇದೂವರೆಗೂ ಓಟಿಟಿ ರಿಲೀಸ್ ಬಗ್ಗೆ ಅಧಿಕೃತ ಮಾಹಿತಿಯನ್ನು ರಿವೀಲ್ ಮಾಡಿಲ್ಲ.’ಪುಷ್ಪ 2’ 49ನೇ ದಿನ ಬಾಕ್ಸಾಫೀಸ್‌ನಲ್ಲಿ 50 ಲಕ್ಷ ರೂಪಾಯಿ ಕಲೆಕ್ಷನ್ ಮಾಡಿದೆ. 50ನೇ ದಿನಗಳ ಹೊಸ್ತಿಲಲ್ಲಿ ಈ ಸಿನಿಮಾದ ಬಾಕ್ಸಾಫೀಸ್ ಕಲೆಕ್ಷನ್‌ನಲ್ಲಿ ಡ್ರಾಪ್ ಕಂಡಿದೆ. ಹೀಗಾಗಿ ಪ್ಯಾನ್ ಇಂಡಿಯಾ ರಿಲೀಸ್ ಕಂಡಿರುವ ಮೆಗಾ ಬ್ಲಾಕ್ ಬಸ್ಟರ್ ಸಿನಿಮಾ ಮೊದಲ ಒಪ್ಪಂದ ಆದಂತೆ 56 ದಿನಗಳ ಬಳಿಕ ಅಂದ್ರೆ, ಜನವರಿ 30 ಇಲ್ಲವೇ ಜನವರಿ 31ಕ್ಕೆ ಬಿಡುಗಡೆಯಾಗಬಹುದು ಎಂದು ನಿರೀಕ್ಷೆ ಮಾಡಲಾಗುತ್ತಿದೆ.
ಈ ಸಿನಿಮಾದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಹಾಗೂ ಫಹಾದ್ ಫಾಸಿಲ್ ಅಭಿನಯಕ್ಕೆ ಪ್ರೇಕ್ಷಕರು ಮನ ಸೋತಿದ್ದರು. ‘ಪುಷ್ಪ 2’ ತೆಲುಗು ಹಾಗೂ ಹಿಂದಿ ಏರಿಯಾಗಳಲ್ಲಿ ಭರ್ಜರಿ ಗಳಿಕೆ ಮಾಡಿತ್ತು. ಈ ಬೆನ್ನಲ್ಲೇ ಓಟಿಟಿಯಲ್ಲೂ ಸದ್ದು ಮಾಡಬಹುದೆಂಬ ನಿರೀಕ್ಷೆಯಿದೆ.