Sandalwood Leading OnlineMedia

ಅಬ್ಬರಿಸುತ್ತಿರುವ ‘ಅಮರನ್’…ಶಿವಕಾರ್ತಿಕೇಯನ್-ಸಾಯಿಪಲ್ಲವಿ ಸಿನಿಮಾಗೆ ಪ್ರೇಕ್ಷಕ ಜೈಕಾರ

ತಮಿಳು ನಟ ಶಿವ ಕಾರ್ತಿಕೇಯನ್ ಹಾಗೂ ನಟಿ ಸಾಯಿ ಪಲ್ಲವಿ ನಟನೆಯ ಅಮರನ್ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಕ್ಸಾಫೀಸ್ ನಲ್ಲೂ ಗಳಿಕೆಯಲ್ಲಿ ಸಖತ್ ಸದ್ದು ಮಾಡ್ತಿದೆ. ಹುತಾತ್ಮರಾದ ಭಾರತೀಯ ಸೇನಾ ಅಧಿಕಾರಿ ಮೇಜರ್ ಮುಕುಂದ್ ವರದರಾಜನ್ ಅವರ ಸ್ಪೂರ್ತಿದಾಯಕ ಕಥೆ ಹೇಳುವ ಬಹುನಿರೀಕ್ಷಿತ ಬಯೋಪಿಕ್ ಸಿನಿಮಾ 2024ರ ತಮಿಳು ಚಿತ್ರರಂಗದ ಅತಿದೊಡ್ಡ ಬ್ಲಾಕ್‌ಬಸ್ಟರ್‌ಗಳಲ್ಲಿ ಒಂದಾಗಿದೆ. ಅಕ್ಟೋಬರ್ 31ರಂದು ತೆರೆಕಂಡ ಅಮರನ್ ಸಿನಿಮಾ ಎಲ್ಲಾ ಕಡೆಗಳಿಂದಲೂ ಮೆಚ್ಚುಗೆಗೆ ಪಾತ್ರವಾಗಿದೆ.

ಸೋನಿ ಪಿಕ್ಚರ್ಸ್ ಸಹಯೋಗದಲ್ಲಿ ನಟ ಕಮಲ್ ಹಾಸನ್ ಅವರ ರಾಜಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಈ ಚಿತ್ರವನ್ನು ನಿರ್ಮಿಸಿದೆ. ಚಿತ್ರದಲ್ಲಿ ಶಿವಕಾರ್ತಿಕೇಯನ್ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ಸಾಯಿ ಪಲ್ಲವಿ ಅದ್ಭುತವಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಮ್ಯೂಸಿಕ್ ಡೈರೆಕ್ಟರ್ ಜಿವಿ ಪ್ರಕಾಶ್ ಕುಮಾರ್ ಸಂಗೀತ ನೀಡಿದ್ದಾರೆ. ಈ ಚಿತ್ರವು ದಿವಂಗತ ಸೇನಾ ಮೇಜರ್ ಮುಕುಂದ್ ವರದರಾಜನ್ ಅವರ ಜೀವನವನ್ನು ಆಧರಿಸಿದೆ. ಶಿವಕಾರ್ತಿಕೇಯನ್ ಅವರು ಮೇಜರ್ ಮುಕುಂದ್ ಪಾತ್ರದಲ್ಲಿ ಕಾಣಿಸಿಕೊಂಡ್ರೆ. ಪತ್ನಿ ಇಂದೂ ರೆಬೆಕಾ ವರ್ಗೀಸ್ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶನಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ದೀಪಾವಳಿ ಹಬ್ಬದ ದಿನದಂದು ತಮಿಳು, ತೆಲುಗು, ಹಿಂದಿ, ಮಲಯಾಳಂ, ಕನ್ನಡ ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಅಮರನ್ ಎಲ್ಲೆಡೆ ಅಬ್ಬರಿಸುತ್ತಿದ್ದು, ಚಿತ್ರತಂಡದ ಖುಷಿಗೆ ಕಾರಣವಾಗಿದೆ.

 

Share this post:

Related Posts

To Subscribe to our News Letter.

Translate »