‘ಅಲೆಯಾಗಿ ಬಾ’ ಆಲ್ಬಂ ಸಾಂಗ್ ಮೂಲಕ ಗಮನ ಸೆಳೆದ ರಥ ಕಿರಣ ನಾಯಕ ನಟನಾಗಿ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಡ್ತಿದ್ದಾರೆ. ನಾಗೇಂದ್ರ ಗಾಣಿಗ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ ‘ಅಭಿರಾಮಚಂದ್ರ’ ಸಿನಿಮಾ ಮೂಲಕ ಚಂದನವನದಲ್ಲಿ ಸಿನಿ ಜರ್ನಿ ಆರಂಭಿಸಿದ್ದಾರೆ ರಥ ಕಿರಣ. ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಅಶ್ವಿನಿ ಪುನೀತ್ ರಾಜ್ ಕುಮಾರ್ ಫಸ್ಟ್ ಲುಕ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಟೈಟಲ್ ಮೂಲಕವೇ ಗಮನ ಸೆಳೆಯುತ್ತಿರುವ ‘ಅಭಿರಾಮಚಂದ್ರ’ ಸಿನಿಮಾಗೆ ನಾಗೇಂದ್ರ ಗಾಣಿಗ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕಿರಿಕ್ ಪಾರ್ಟಿ ಚಿತ್ರಕ್ಕೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ‘ಅಭಿರಾಮಚಂದ್ರ’ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಚೈಲ್ಡ್ ವುಡ್ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥೆ ಹೊತ್ತ ಚಿತ್ರದಲ್ಲಿ ರಥ ಕಿರಣ ನಾಯಕ ನಟನಾಗಿ ಬಣ್ಣ ಹಚ್ಚಿದ್ದು, ಸಿದ್ದು ಮೂಲಿಮನಿ, ನಾಟ್ಯರಂಗ ಕೂಡ ಚಿತ್ರದ ಮುಖ್ಯ ಭೂಮಿಕೆಯಲ್ಲಿದ್ದಾರೆ. ನಾಯಕಿಯಾಗಿ ಶಿವಾನಿ ರೈ ನಟಿಸಿದ್ದಾರೆ.
ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ. ಸದ್ಯದಲ್ಲೇ ಸಿನಿಮಾ ಟೀಸರ್ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ. ಕುಂದಾಪುರ, ಬೆಂಗಳೂರು, ಮೈಸೂರಿನಲ್ಲಿ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ. ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ‘ಅಭಿರಾಮಚಂದ್ರ’ ಸಿನಿಮಾ ಮೂಡಿ ಬರ್ತಿದ್ದು, ರವಿ ಬಸ್ರೂರು ಮೂವೀಸ್ ನಡಿ ಸಿನಿಮಾವನ್ನು ಪ್ರಸ್ತುತ ಪಡಿಸಲಾಗುತ್ತಿದೆ. ರವಿ ಬಸ್ರೂರು ಪುತ್ರ ಪವನ್ ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದು, ವೀಣಾ ಸುಂದರ್, ಸುಂದರ್ ವೀಣಾ, ಎಸ್.ನಾರಾಯಣ್, ಪ್ರಕಾಶ್ ತೂಮಿನಾಡು ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಎ.ಜಿ. ಎಸ್ ಎಂಟಟೈನ್ಮೆಂಟ್ ಹಾಗೂ ರವಿ ಬಸ್ರೂರು ಮ್ಯೂಸಿಕ್ ಮತ್ತು ಮೂವೀಸ್ ಬ್ಯಾನರ್ ನಡಿ ಎ.ಜಿ.ಸುರೇಶ್ ಹಾಗೂ ಮಲ್ಲೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಸುರೇಶ್ ಆರುಮುಗಂ ಸಂಕಲನ ಚಿತ್ರಕ್ಕಿದೆ.