Sandalwood Leading OnlineMedia

ಜನವರಿ 12 ರಂದು ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ “BAD” ಚಿತ್ರದ ಟ್ರೇಲರ್

 

ಪಿ.ಸಿ.ಶೇಖರ್ ನಿರ್ದೇಶನದ,
ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “BAD” ಚಿತ್ರದ ಟ್ರೇಲರ್ ಜನವರಿ 12 ರಂದು ಜೆಂಕಾರ್‌ ಮ್ಯೂಸಿಕ್ ಮೂಲಕ ಬಿಡುಗಡೆಯಾಗಲಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಚಿತ್ರದ ಟ್ರೇಲರ್ ನಲ್ಲಿ ಏನೆಲ್ಲಾ ಇರಬಹುದು? ಎಂಬದನ್ನು ತಿಳಿಸಲು ಚಿತ್ರತಂಡ ಪ್ರೋಮೊ ಬಿಡುಗಡೆ ಮಾಡಿದೆ. ಈ ಪ್ರೋಮೊದಲ್ಲಿ ನಿರ್ದೇಶಕರಾದ ಪಿ.ಸಿ.ಶೇಖರ್ ಹಾಗೂ ನಾಯಕರಾದ ನಕುಲ್ ಗೌಡ ಸುಂದರವಾದ ನಿರೂಪಣೆಯಲ್ಲಿ “BAD” ಚಿತ್ರದ ಟ್ರೇಲರ್ ನ ವೈಶಿಷ್ಟ್ಯತೆ ಹಾಗು ತಾಂತ್ರಿಕ ವಿಭಿನ್ನತೆಯ ಮಾಹಿತಿ ನೀಡಿದ್ದಾರೆ‌. ಈ ಪ್ರೋಮೊ ನೋಡಿದ ಮೇಲೆ ಚಿತ್ರದ ಬಗ್ಗೆ ಹಾಗೂ ಬಿಡುಗಡೆಯಾಗಲಿರುವ ಟ್ರೇಲರ್ ಬಗ್ಗೆ ಮತ್ತಷ್ಟು ನಿರೀಕ್ಷೆ ಹೆಚ್ಚಿಸಿದೆ.

ಇದನ್ನೂ ಓದಿ ಚೇಫ್ ಆದ ದಿಯಾ ಪೃಥ್ವಿ ಅಂಬಾರ್..ಬಂತು ‘ಜೂನಿ’ ಕ್ಯಾರೆಕ್ಟರ್ ಟೀಸರ್ ’ಜೂನಿ’ ಕ್ಯಾರೆಕ್ಟರ್ ಟೀಸರ್ ಅನಾವರಣ..ಚೇಫ್ ಆದ ಪೃಥ್ವಿ ಅಂಬಾರ್..

ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ “BAD” ಚಿತ್ರಕ್ಕೆ ಪಿ.ಸಿ.ಶೇಖರ್ ಸಂಕಲನ, ಜಿ.ರಾಜಶೇಖರ್ ಕಲಾ ನಿರ್ದೇಶನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿದೆ‌. ಈ ಚಿತ್ರಕ್ಕೆ ಸಚಿನ್ ಬಿ ಹೊಳಗುಂಡಿ ಸಂಭಾಷಣೆ ಬರೆದಿದ್ದಾರೆ.“ಪ್ರೀತಿಯ ರಾಯಭಾರಿ” ಚಿತ್ರದ ಮೂಲಕ ಜನರ ಮನಗೆದ್ದಿರುವ ನಕುಲ್ ಗೌಡ “BAD” ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ ರಾಮ್ ಚರಣ್ ಜೊತೆ ಕೈ ಜೋಡಿಸಿದ ಮ್ಯೂಸಿಕ್ ಮಾಂತ್ರಿಕ..ಉಪ್ಪೇನ್ ಡೈರೆಕ್ಟರ್ ಹೊಸ ಸಿನಿಮಾಗೆ ಎ.ಆರ್.ರೆಹಮಾನ್ ಸಂಗೀತ ನಿರ್ದೇಶನ..

ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳಲ್ಲಿ ಆರು ಜನ ಕಲಾವಿದರು ಅಭಿನಯಿಸಿರುವುದು ಈ ಚಿತ್ರದ ವಿಶೇಷ.

Share this post:

Related Posts

To Subscribe to our News Letter.

Translate »