Sandalwood Leading OnlineMedia

ನಾಯಕಿಯಾಗಿ ಮಿಂಚಲು ಬಂದ್ರು ‘ವೀರ ಮದಕರಿʼ ಚಿತ್ರದ ಬಾಲನಟಿ..!

ಮಹೇಶ್ ಬಾಬು ಕನ್ನಡ ಚಿತ್ರರಂಗದ ಸ್ಟಾರ್ ನಿರ್ದೇಶಕ. ಮತ್ತೊಂದು ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಮಹೇಶ್ ಬಾಬು ಹಾಗೂ ರಕ್ಷಿತ್ ಹೊಸ ಸಿನಿಮಾ ಈಗಾಗಲೇ ಅನೌನ್ಸ್ ಆಗಿದೆ. ಇದೀಗ ಹೊಸ ಸಮಾಚಾರ ಏನಂದರೆ ಈ ಚಿತ್ರದ ಮೂಲಕ ಮತ್ತೊಬ್ಬ ಯುವ ನಟಿಯನ್ನು ಲಾಂಚ್ ಮಾಡುತ್ತಿದ್ದಾರೆ ಮಹೇಶ್ ಬಾಬು. ಹೊಸ ಮುಖ ಜೆರುಶಾರನ್ನು ನಾಯಕಿಯಾಗಿ ಲಾಂಚ್ ಮಾಡುತ್ತಿದ್ದಾರೆ.

 

 

 

 

 

ಅಂದಹಾಗೇ ಜೆರುಶಾ ಅವರಿಗೆ ಕ್ಯಾಮೆರಾ ಹೊಸದೇನಲ್ಲ. ಈಗಾಗಲೇ ಸುದೀಪ್ ಅಭಿನಯದ ವೀರ ಮದಕರಿ ಚಿತ್ರದಲ್ಲಿ ಬಾಲ ಕಲಾವಿದೆಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದರು.

 

 

 

 

ಜಾಹೀರಾತುಗಳು ಮತ್ತು ರಂಗಭೂಮಿ ಹಿನ್ನೆಲೆ ಹೊಂದಿರುವ ಜೆರುಶಾ, ಇದೀಗ ಮಹೇಶ್ ಬಾಬು ನಿರ್ದೇಶನದ ಚಿತ್ರದ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ.

 

 

 

 

 

ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡು ಹೆಸರಾಗಿರುವ ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾಗಿ ಜೆರುಶಾ ಮಿಂಚಲಿದ್ದಾರೆ.

 

 

 

 

ಮಹೇಶ್ ಬಾಬು ಅವರು ಪ್ರಮುಖ ಪಾತ್ರವೊಂದಕ್ಕೆ ಮತ್ತೊಬ್ಬ ಪ್ರತಿಭಾವಂತ ನಟಿ ಆಯ್ಕೆಯಲ್ಲಿ ತೊಡಗಿದ್ದು, ಅದರ ವಿವರಗಳನ್ನು ಶೀಘ್ರದಲ್ಲೇ ಅನಾವರಣಗೊಳಿಸಲಾಗುವುದು.

Share this post:

Related Posts

To Subscribe to our News Letter.

Translate »