Sandalwood Leading OnlineMedia

ಜವಾರಿ ಭಾಷೆಯ ‘ಬಯಲುಸೀಮೆ’ ಸಿನಿಮಾ ಆಡಿಯೋ ಸದ್ಧು

ಜವಾರಿ ಭಾಷೆಯ ‘ಬಯಲುಸೀಮೆ’ ಸಿನಿಮಾ ಆಡಿಯೋ ಸದ್ಧು

ಉತ್ತರ ಕರ್ನಾಟಕ ಶೈಲಿಯ ರಗಡ್ ಕಥೆಗಳ ಬಗ್ಗೆ ಕನ್ನಡದ ಪ್ರೇಕ್ಷಕರರಲ್ಲಿ ಒಂದು ವಿಶೇಷ ಪ್ರೀತಿ. ಇದೀಗ ಅದೇ ಸೊಗಡಿನ ಪಕ್ಕಾ ರಗಡ್ ಕಥಾನಕ ಹೊಂದಿರೋ ಬಯಲು ಸೀಮೆ  ಸಧ್ಯದಲ್ಲೆ ಬಿಡುಗಡೆಯಾಗಲಿದೆ.

ಸಿನಿ ಪೊಲಿಟಿಕಲ್ ಕ್ರೈಂ ಥ್ರಿಲ್ಲರ್ ಜಾನರಿನ ‘ಬಯಲುಸೀಮೆ’ ಸಿನಿಮಾ ನಾನಾ ಮಜಲುಗಳ, ಮೈನವಿರೇಳಿಸೋ ತಿರುವುಗಳ ಮೂಲಕ ಪ್ರೇಕ್ಷಕರನ್ನು ಬೇರೆಯದ್ದೇ ಜಗತ್ತಿಗೆ ಕೊಂಡೊಯ್ಯುವAತೆ ಸಿನಿಮಾ ಮೂಡಿಬಂದಿದೆ.

 
ಲಕ್ಷ್ಮಣ್ ಸಾ ಶಿಂಗ್ರಿ ನಿರ್ಮಾಣದಲ್ಲಿ ಮೂಡಿ ಬಂದಿರುವ ಬಯಲುಸೀಮೆಯನ್ನು ವರುಣ್ ಕಟ್ಟೀಮನಿ ನಿರ್ದೇಶನ ಮಾಡಿದ್ದಾರೆ. ಎಂಭತ್ತರ ದಶಕ ಮತ್ತು ಈವತ್ತಿನ ಕಾಲಮಾನದೊಂದಿಗೆ ಜುಗಲ್ಬಂದಿ ಹೊಂದಿರೋ ಈ ಕಥೆ, ಆ ಎರಡು ಕಾಲಘಟ್ಟಗಳನ್ನೂ ಉತ್ತರ ಕರ್ನಾಟಕದ ಜವಾರಿ ಶೈಲಿಯಲ್ಲಿ ಕಟ್ಟಿಕೊಟ್ಟಿದೆ.

   

ಸಾಹೂರಾವ್ ಶಿಂಧೆ ಎಂಬ ಶ್ರೀಮಂತ ವ್ಯಕ್ತಿಯ ಸುತ್ತ ಬಯಲು ಸೀಮೆಯ ಕಥೆ ಚಲಿಸುತ್ತೆ. ಕ್ಷಣ ಕ್ಷಣವೂ ಪ್ರೇಕ್ಷಕರನ್ನು ತುದೀ ಸೀಟಿಗೆ ತಂದು ಕೂರಿಸುವಂಥಾ ಗಟ್ಟಿ ಕಥೆಯೊಂದಿಗೆ ಚಿತ್ರತಂಡ ಪ್ರೇಕ್ಷಕರನ್ನು ಮುಖಾಮುಖಿಯಾಗೋ ಉತ್ಸಾಹದಲ್ಲಿದೆ.


ಬೃಹತ್ ತಾರಾಗಣ ಹೊಂದಿರೋ ಬಯಲು ಸೀಮಿಯಲ್ಲಿ ಬಿಸಿಲ ನಾಡ ಪ್ರತಿಭೆಗಳೂ ಮಿಂಚಲು ಅಣಿಯಾಗಿದ್ದಾರೆ. ಟಿ.ಎಸ್ ನಾಗಾಭರಣ, ರವಿಶಂಕರ್, ಸಂಯುಕ್ತ ಹೊರನಾಡು, ಯಶ್ ಶೆಟ್ಟಿ, ಭವಾನಿ ಪ್ರಕಾಶ್, ಅರ್ಚನಾ ಕೊಟ್ಟಿಗೆ, ವರುಣ್ ಕಟ್ಟೀಮನಿ, ಲಕ್ಷ್ಮೀ ನಾಡಗೌಡರ್, ಸಂತೋಷ್ ಉಪ್ಪಿನ್, ನಾಗರಾಜ ಭಟ್, ಮಹೇಶ್ ದೊಡ್ಡಕೈನವರ್, ಪ್ರದೀಪ್ ರಾಜ್ ಮುಂತಾದವರ ತಾರಾಗಣ ಈ ಸಿನಿಮಾದಲ್ಲಿದೆ.

ಸುಜಯ್ ಕುಮಾರ್ ಬಾವಿಕಟ್ಟಿ ಛಾಯಾಗ್ರಹಣ, ಮಾನಸಾ ಹೊಳ್ಳ ಸಂಗೀತ ನಿರ್ದೇಶನ, ಕಿರಣ್ ಕುಮಾರ್ ಸಂಕಲನ ಮತ್ತು ರಾಮು ಅವರ ನೃತ್ಯ ಸಂಯೋಜನೆ ಈ ಚಿತ್ರಕ್ಕಿದೆ
ಈಗಾಗಲೆ  ಚಿತ್ರದ ಎರಡು ಹಾಡುಗಳು ರಿಲೀಸ್ ಆಗಿದ್ದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ..

 

 

Share this post:

Related Posts

To Subscribe to our News Letter.

Translate »