ಕೊನೆಗೂ ಈಡೇರಿದ ಅಪ್ಪು ಅಭಿಮಾನಿಗಳ ಬೇಡಿಕೆ; ವರ್ತುಲ ರಸ್ತೆಗೆ ಪುನೀತ್ ಹೆಸರು!!
ಕರ್ನಾಟಕ ರತ್ನ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿಕೆ ಬಳಿಕ ಬೆಂಗಳೂರಿನ ಪ್ರಮುಖ ರಸ್ತೆಗೂ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಹೆಸರು ಇಡಬೇಕು ಎಂಬ ಕೂಗು ಕೇಳಿಬಂದಿತ್ತು. ಹೀಗಾಗಿ ಕೆಲವು ತಿಂಗಳುಗಳ ಹಿಂದೆನೇ ಬೆಂಗಳೂರಿನ ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್‌ಆರ್ ರಮೇಶ್ ಬಿಬಿಎಂಪಿ ಆಯುಕ್ತರಿಗೆ ಈ ಬಗ್ಗೆ ಮನವಿ ಮಾಡಿದ್ದರು. ಆ ಬೆನ್ನಲ್ಲೇ ಸುಮಾರು 12 ಕಿ. ಮೀ ಉದ್ದದ ರಸ್ತೆಗೆ ಈಗ ಬಿಬಿಎಂಪಿ ಅಧಿಕಾರಿಗಳು ಕೂಡ ಅನುಮೋದನೆ ನೀಡಿದ್ದರು. ಈಗ ಪುನೀತ್ ಹೆಸರಿನ ರಸ್ತೆಗೆ ನಾಮಫಲಕವನ್ನು ಅಳವಡಿಸಲಾಗಿದೆ.
ಕಳೆದ ವರ್ಷ ಡಿಸೆಂಬರ್ ತಿಂಗಳಿನಲ್ಲಿಯೇ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಹೆಸರನ್ನು ಇಡುವ ಬಗ್ಗೆ ಅನುಮೋದನೆ ನೀಡಲಾಗಿತ್ತು. ಅದರಂತೆಯೇ ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್‌ನಿಂದ ಬನ್ನೇರುಘಟ್ಟ ರಸ್ತೆಯ ವೆಗಾ ಸಿಟಿ ಮಾಲ್ ಜಂಕ್ಷನ್‌ವರೆಗಿನ 12 ಕಿ.ಮೀ ಉದ್ದದ ರಸ್ತೆಗೆ “ಕರ್ನಾಟಕ ರತ್ನ ಡಾll ಪುನೀತ್ ರಾಜ್ಕುಮಾರ್ ರಸ್ತೆ” ಎಂದು ನಾಮಕರಣ ಮಾಡಲಾಗಿದ್ದು, ಈಗ ನಾಮಫಲಕವನ್ನು ಅಳವಡಿಸಲಾಗುತ್ತಿದೆ.
12 ಕಿ.ಮೀ ಉದ್ದದ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ರಸ್ತೆ ಹೆಸರು ಇಡಲಾಗಿದೆ. ಅಗತ್ಯ ಸ್ಥಳಗಳಲ್ಲಿ “ಕರ್ನಾಟಕ ರತ್ನ ಡಾll ಪುನೀತ್ ರಾಜ್ಕುಮಾರ್ ರಸ್ತೆ” ನಾಮಫಲಕವನ್ನು ಅಳವಡಿಸಲಾಗುತ್ತಿದೆ. ಇದು ಹೊಸಕೆರೆ ಹಳ್ಳಿ, ದೇವೇಗೌಡ ಪೆಟ್ರೋಲ್ ಬಂಕ್, ಕದಿರೇನಹಳ್ಳಿ ಪಾರ್ಕ್, ಸಾರಕ್ಕಿ ಸಿಗ್ನಲ್ ಮಾರ್ಗವಾಗಿ ಜೆಪಿ ನಗರ ಹಾಗೂ ಬನ್ನೇರುಘಟ್ಟ ರಸ್ತೆಯ ವೆಗಾ ಸಿಟಿ ಜಂಕ್ಷನ್ ತಲುಪಲಿದೆ.
ಈ ಬೆಳವಣಿಗೆಯಿಂದ ಅಪ್ಪು ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್‌ನಿಂದ ಬನ್ನೇರುಘಟ್ಟ ರಸ್ತೆಯ ವೆಗಾ ಸಿಟಿ ಮಾಲ್ ಜಂಕ್ಷನ್‌ವರೆಗಿನ 12 ಕಿ.ಮೀ ರಸ್ತೆಗೆ “ಕರ್ನಾಟಕ ರತ್ನ ಡಾll ಪುನೀತ್ ರಾಜ್ಕುಮಾರ್ ರಸ್ತೆ” ನಾಮಫಲಕ ಬೀಳುತ್ತಿದಂತೆ ಸೋಶಿಯಲ್ ಮೀಡಿಯಾಗಳಲ್ಲಿ ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ. ಮತ್ತೆ ಪುನೀತ್ ಕುಮಾರ್ ಸಾಮಾಜಿಕ ಕೆಲಸಗಳನ್ನು ನೆನದು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.