ಜುಲೈ 12, ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಶಿವಣ್ಣ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ “BIG DADDY” ವಿಡಿಯೋ ಬಿಡುಗಡೆಯಾಗಲಿದೆ. “BIG DADDY” ವಿಡಿಯೋವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲುನಿರ್ಮಾಪಕರು ನಿರ್ಧರಿಸಿದ್ದಾರೆ. ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ ಈ ಚಿತ್ರ ಬರುತ್ತಿದೆ. ಈಗಾಗಲೇ ಈ ಕುರಿತು “July 12 “BD”(BIG DADDY)” ಎಂಬ ಪೋಸ್ಟರ್ ಸಹ ಬಿಡುಗಡೆಯಾಗಿದೆ. ಈ ವಿಡಿಯೋ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಸ್ಪೈ ಸಿನಿಮಾ ಪ್ರಚಾರಕ್ಕಾಗಿ ಬಂದಿಳಿದ ನಿಖಿಲ್ ಸಿದ್ಧಾರ್ಥ್ ಹಾಗೂ ಐಶ್ವರ್ಯ ಮೆನನ್
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದ”ಘೋಸ್ಟ್” ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯವಾಗಿದೆ. ಶಿವರಾಜಕುಮಾರ್, ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.