Sandalwood Leading OnlineMedia

ಗಮನಸೆಳೆದ `ಬ್ರಹ್ಮಕಮಲ’ ಫಸ್ಟ್ ಲುಕ್

 

“ದಾರಿ ಯಾವುದಯ್ಯಾ ವೈಕುಂಠಕೆ” ಚಿತ್ರದ ಖ್ಯಾತಿಯ ನಿರ್ದೇಶಕ “ಸಿದ್ದು ಪೂರ್ಣಚಂದ್ರ” ಅವರು   ಕಥೆ,ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಚಿತ್ರ “ಬ್ರಹ್ಮಕಮಲ”. ಸಿದ್ದು ಪೂರ್ಣಚಂದ್ರ ಅವರೇ ಈ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ. ಚಿತ್ರದ ಮೊದಲ ನೋಟವನ್ನು ಹೊಸ ವರ್ಷಕ್ಕೆ  ಬಿಡುಗಡೆ ಮಾಡಿ ಚಿತ್ರತಂಡ ಹರ್ಷ ವ್ಯಕ್ತಪಡಿಸಿದೆ. ರಾತ್ರಿ ಹುಟ್ಟಿ ರಾತ್ರಿಯೇ ಮುರುಟಿ ಹೋಗುವ ಒಂದು ಮಗುವಿನ ಸುತ್ತ ಘಟಿಸುವ ಕಥೆಯೇ ಬ್ರಹ್ಮ ಕಮಲ. `ಬ್ರಹ್ಮಕಮಲ’ ಮಹಿಳಾ ಪ್ರಧಾನ ಚಿತ್ರವಾಗಿದ್ದು, ಅಧ್ವಿತಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ.

 

“ಕಿಂಗ್ & ಕ್ವೀನ್” ಆಗಿ ಬರುತ್ತಿದ್ದಾರೆ ಶ್ರೇಯಸ್ ಚಿಂಗ – ಇತಿ ಆಚಾರ್ಯ 

 

ಲೋಕೇಂದ್ರ ಸೂರ್ಯ, ಋತು ಚೈತ್ರ, ಮಮತಾ ರಾಹುತ್,ಪ್ರಮಿಳಾ ಸುಬ್ರಹ್ಮಣ್ಯ, ಬಲ ರಾಜ್ವಾಡಿ, ಸಿದ್ದು ಪೂರ್ಣಚಂದ್ರ, ಆಟೋ ನಾಗರಾಜ್, ಗಂಡಸಿ ಸದಾನಂದಸ್ವಾಮಿ, ಕವಿತಾ ಕಂಬಾರ್, ರಾಧಾ ರಾಮಚಂದ್ರ ಇನ್ನೂ ಮುಂತಾದವರು ತಾರಾಬಳಗದಲ್ಲಿದ್ದಾರೆ. ಛಾಯಾಗ್ರಹಣ ಲೋಕೇಂದ್ರ ಸೂರ್ಯನಾರಾಯಣ,  ಸಂಕಲನ ದೀಪು ಸಿ ಎಸ್, ಸಂಗೀತ ಅನಂತ್ ಆರ್ಯನ್ ಹೊಣೆ ಹೊತ್ತಿದ್ದಾರೆ. ಕಾರ್ಯಕಾರಿ ನಿರ್ಮಾಪಕರು ಎ.ಕೆ. ಪುಟ್ಟರಾಜು ಮತ್ತು ಪ್ರಮಿಳಾ ಸುಬ್ರಹ್ಮಣ್ಯಂ.

Share this post:

Related Posts

To Subscribe to our News Letter.

Translate »