Sandalwood Leading OnlineMedia

“ಲಂಕಾಸುರ”ನಿಗೆ ಸೆನ್ಸಾರ್ ಅಸ್ತು

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ  “ಲಂಕಾಸುರ” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.ಬಹು ನಿರೀಕ್ಷಿತ ಈ ಚಿತ್ರವನ್ನು ಟೈಗರ್ ಟಾಕೀಸ್ ಲಾಂಛನದಲ್ಲಿ ವಿನೋದ್ ಪ್ರಭಾಕರ್ ನಿರ್ಮಿಸಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಜನರ ಮೆಚ್ಚುಗೆ ಗಳಿಸಿದೆ.ಈ ಚಿತ್ರದ ಆಕ್ಷನ್ ಸನ್ನಿವೇಶಗಳು ಮೈನವಿರೇಳಿಸುವ ಹಾಗಿದೆ. ಐದು ಸಾಹಸ ಸನ್ನಿವೇಶಗಳಿದ್ದು, ಡಿಫರೆಂಟ್ ಡ್ಯಾನಿ, ವಿನೋದ್, ಚೇತನ್ ಡಿಸೋಜ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಮಾಡಿದ್ದಾರೆ. 

 

 

MATA REVIEW : ಸಮಾಜಮುಖೀ ಸಂಘರ್ಷ

 

ಪ್ರಮೋದ್ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ವಿಜೇತ್ ಕೃಷ್ಣ ಸಂಗೀತ ನಿರ್ದೇಶನ, ಸುಜ್ಞಾನ್ ಛಾಯಾಗ್ರಹಣ, ಮುರಳಿ, ಮೋಹನ್ ಅವರ ನೃತ್ಯ ನಿರ್ದೇಶನ ಹಾಗೂ ದೀಪು ಎಸ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

 

Abbara Review: ಅಬ್ಬರದ `ತ್ರಿಬಲ್ ರೈಡಿಂಗ್’!

 

 

ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪಾರ್ವತಿ ಅರುಣ್ ನಟಿಸಿದ್ದಾರೆ. ಮೊದಲ ಬಾರಿಗೆ ಲೂಸ್ ಮಾದ ಯೋಗಿ, ವಿನೋದ್ ಪ್ರಭಾಕರ್ ಅವರೊಂದಿಗೆ ಅಭಿನಯಿದ್ದಾರೆ. ಹಿರಿಯ ನಟರಾದ ದೇವರಾಜ್ ಹಾಗೂ ರವಿಶಂಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

 

ನಟಿ ಸಹನಾ ಗೌಡ

LUCK PADHUMI Lyrical Video |Lankasura |Sahan Gowda

 

 

ಇನ್ನು, ನಟಿ ಸಹನಾ ಗೌಡ ನರ್ತಿಸಿರುವ ಚಿತ್ರದ `ಲಕ್ ಪದ್ಮಿನಿ’ ಅನ್ನುವ ಹಾಡು ಈಗಾಗಲೇ ವೈರಲ್ ಆಗಿದ್ದು, ಸಿನಿಮಾದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. 

 

 

 

 

 

 

Share this post:

Related Posts

To Subscribe to our News Letter.

Translate »