ರಾಘವ್ ಲಾರೆನ್ಸ್ ಹಾಗೂ ಕಂಗನಾ ರಾಣಾವತ್ ನಟನೆಯ ಬಹುನಿರೀಕ್ಷಿತ ಚಂದ್ರಮುಖಿ-2 ಸಿನಿಮಾ ಬಿಡುಗಡೆಗೆ ಹೊಸ್ತಿಲಿನಲ್ಲಿ ನಿಂತಿದೆ. ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿರುವ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಫಸ್ಟ್ ಲುಕ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ರಾಘವ್ ಲಾರೆನ್ಸ್, ವೆಟ್ಟೈಯನ್ ರಾಜನ ಫಸ್ಟ್ ಲುಕ್ ಬಿಡುಗಡೆ ಮಾಡಿದ ತಲೈವರ್ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ನಿಮಗೆ ಧನ್ಯವಾದಗಳು. ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಲಿ. ಗಣೇಶ್ ಹಬ್ಬಕ್ಕೆ ತಮಿಳು, ತೆಲುಗು, ಕನ್ನಡ, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಪುರಿ ಜಗನ್ನಾಥ್ ಹಾಗೂ ರಾಮ್ ಪೋತಿನೇನಿ ಜೋಡಿಯ *‘ಡಬಲ್ ಇಸ್ಮಾರ್ಟ್’ ಸಿನಿಮಾದಲ್ಲಿ ಸಂಜಯ್ ದತ್
Thanks to Thalaivar Superstar @rajinikanth! Here’s presenting you the first look of #Vettaiyan 👑 I need all your blessings!
Releasing this GANESH CHATURTHI in Tamil, Hindi, Telugu, Malayalam & Kannada! 🔥 #Chandramukhi2 🗝 pic.twitter.com/v4qYmkzeDh
— Raghava Lawrence (@offl_Lawrence) July 31, 2023
ಹಿರಿಯ ನಿರ್ದೇಶಕ ಪಿ ವಾಸು ನಿರ್ದೇಶನದಲ್ಲಿ ಮೂಡಿ ಬಂದಿರುವ ಚಂದ್ರಮುಖಿ-2 ಸಿನಿಮಾದಲ್ಲಿ ರಾಘವ್ ಲಾರೆನ್ಸ್ ವೆಟ್ಟೈಯನ್ ರಾಜನಾಗಿ ಕಾಣಿಸಿಕೊಂಡಿದ್ದಾರೆ. ಚಂದ್ರಮುಖಿಯಾಗಿ ಕಂಗನಾ ನಟಿಸಿದ್ದಾರೆ. 2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ ಬಾಕ್ಸಾಫೀಸ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಈ ಚಿತ್ರ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರ್ತಿದ್ದು, ನಿರೀಕ್ಷೆಯನ್ನು ಹೆಚ್ಚಿಸಿದೆ.
ಇದನ್ನೂ ಓದಿ: ‘Kousalya Supraja Rama’ movie review: ಕಲಿಯುಗ ರಾಮನ ಮಾಡರ್ನ್ ವನವಾಸ!