Sandalwood Leading OnlineMedia

‘ಚೌಕಿದಾರ್’ನಿಗೆ ಸಿಕ್ಕಳು ಚೌಕಿದಾರಿ! ಪೃಥ್ವಿಗೆ ಧನ್ಯ  ಜೋಡಿ

ರಥಾವರ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶಿಸುತ್ತಿರುವ ಹೊಸ ಸಿನಿಮಾ ಚೌಕಿದಾರ್..ಇತ್ತೀಚೆಗಷ್ಟೇ ಡೈಲಾಗ್ ಕಿಂಗ್ ಸಾಯಿಕುಮಾರ್ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ಚೌಕಿದಾರ್ ಗೆ ನಾಯಕಿ ಸಿಕ್ಕಿದ್ದಾಳೆ. ದೊಡ್ಮನೆ ಬ್ಯೂಟಿ ಧನ್ಯರಾಮ್ ಕುಮಾರ್ ಪೃಥ್ವಿ ಅಂಬಾರ್ ಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಪೃಥ್ವಿ ಅಂಬಾರ್ ನಾಯಕನಾಗಿ ಅಭಿನಯಿಸುತ್ತಿರುವ ಚೌಕಿದಾರ್ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ. ನಿನ್ನ ಸನಿಹಕೆ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯಿತರಾಗಿದ್ದ ಧನ್ಯ ಇತ್ತೀಚೆಗಷ್ಟೇ ಜಡ್ಜಮೆಂಟ್ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದರು. ಸದ್ಯ ಕಾಲಪತ್ತರ್ ರಿಲೀಸ್ ಗೆ ಎದುರು ನೋಡುತ್ತಿರುವ ದೊಡ್ಮನೆ ಸುಂದರಿ ಈಗ ಚೌಕಿದಾರ್ ಬಳಗ ಸೇರಿಕೊಂಡಿದ್ದಾರೆ.

 ‘ಟಾಕ್ಸಿಕ್’ ಚಿತ್ರದ ಬಗ್ಗೆ Latest Talks: ಯಾರಾಗ್ತಾರೆ ಯಶ್ ಹಿರೋಯಿನ್!

ಚೌಕಿದಾರ್ ಬಹುಭಾಷೆಯಲ್ಲಿ ಮೂಡಿ ಬರ್ತಿದೆ. ಕನ್ನಡದ ಜೊತೆಗೆ ಹಲವು ಭಾಷೆಯಲ್ಲಿ ಚಿತ್ರ ತಯಾರಾಗುತ್ತಿದೆ. ಈವರೆಗೆ ಸಿನಿಮಾದಲ್ಲಿ ಲವರ್‌ ಬಾಯ್‌ನಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್‌ ಈ ಚಿತ್ರದಲ್ಲಿ ಆಕ್ಷನ್ ಸೀಕ್ವೆನ್ಸ್ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ, ಹಾಗಂತ ಚೌಕಿದಾರ್ ಕಂಪ್ಲೀಟ್ ಆಕ್ಷನ್ ಸಿನಿಮಾವಲ್ಲ. ಪಕ್ಕ ಫ್ಯಾಮಿಲಿ ಎಂಟರ್ ಟೈನರ್. ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಡಾ.ಕಲ್ಲಹಳ್ಳಿ ಚಂದ್ರಶೇಖರ್ ಚೌಕಿದಾರ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್‌ ಬಸ್ರೂರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ. ಜುಲೈ ಮೂರನೇ ತಾರೀಖಿನಂದು ಬಂಡಿ ಮಹಾಕಾಳಿ ದೇಗುಲದಲ್ಲಿ ಚೌಕಿದಾರ್ ಸಿನಿಮಾ ಮುಹೂರ್ತ ನೆರವೇರಿಸಲು ಚಿತ್ರತಂಡ ಯೋಜನೆ ಹಾಕಿದೆ.

Share this post:

Related Posts

To Subscribe to our News Letter.

Translate »