ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯವನ್ನೊಳಗೊಂಡ ದುನಿಯಾ ವಿಜಯ್ ಅಭಿನಯದ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಜನರಿಗೆ ಮೌಲ್ಯಯುತ ಸಂದೇಶ ತಲುಪಿಸುವಲ್ಲಿ ಹಾಗೂ ಸಾಮಾಜಿಕ ಬದಲಾವಣೆ ತರಲು ಸಿನಿಮಾಗಳು ಶಕ್ತಿಶಾಲಿ ಮಾಧ್ಯಮ ಎಂದು ನಾನು ನಂಬುತ್ತೇನೆ. ಸಾಮಾಜಿಕ ಕಳಕಳಿಯ ಸಿನಿಮಾಗಳನ್ನು ಮಾಡಿದವರಿಗೆ ಬೆಂಬಲ ನೀಡುವುದು ಸರ್ಕಾರದ ನೈತಿಕ ಜವಾಬ್ದಾರಿ. ‘ಲ್ಯಾಂಡ್ ಲಾರ್ಡ್’ ನಂತಹ ಇನ್ನಷ್ಟು ಸಾಮಾಜಿಕ ಚಿತ್ರಗಳು ಮುಂದಿನ ದಿನಗಳಲ್ಲಿ ಮೂಡಿಬರಲಿ ಎಂಬ ಆಶಯವನ್ನೂ ಹೊಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.
