Left Ad
CSA-2025 ;  Fan Favourite Singer ಪ್ರಶಸ್ತಿಗೆ ಭಾಜನರಾದ  ಐಶ್ವರ್ಯಾರಂಗರಾಜನ್ - Chittara news
# Tags

CSA-2025 ;  Fan Favourite Singer ಪ್ರಶಸ್ತಿಗೆ ಭಾಜನರಾದ  ಐಶ್ವರ್ಯಾರಂಗರಾಜನ್

ವೇದಿಕೆಯ ಮೇಲೆ ಸಂಗೀತ ಮಾತ್ರಿಕರು ಸಂಗೀತ ಸಾಧನೆಯ ಪ್ರಶಸ್ತಿಯ ಗರಿಯನ್ನು ಮುಡಿಗೇರಿಸಿಕೊಳ್ಳುತ್ತಿದ್ದರೆ. ಸಭಿಕರಲ್ಲಿ ಸಂತಸ, ಸಂಭ್ರಮ, ಅಭಿಮಾನಿಗಳ ಮುಖದಲ್ಲಿ ತೃಪ್ತ ಭಾವ. ನಡು ನಡುವೆ ಕಣ್ಮನ ಸೆಳೆಯುವ ಹಾಡು-ನೃತ್ಯ ಪ್ರದರ್ಶನ.ನಗರದ ಅರಮನೆ ಮೈದಾನದಲ್ಲಿ ವರ್ಣರಂಜಿತ ಅದ್ದೂರಿ ವೇದಿಕೆಯಲ್ಲಿ ಶುಕ್ರವಾರ ನಡೆದ ಚಿತ್ತಾರ ಮ್ಯೂಸಿಕ್‌ ಅವಾರ್ಡ್‌-2025 ಪ್ರಶಸ್ತಿ ಪ್ರದಾನ ಸಮಾರಂಭದ ಸೊಬಗು  ಹೀಗಿತ್ತು.

ಜೀವಮಾನದ ಪ್ರಶಸ್ತಿ ಪ್ರದಾನ, 30ಕ್ಕೂ ಹೆಚ್ಚು ವಿಭಾಗಗಳಲ್ಲಿ ಸಂಗೀತ ಸಾಧನೆಗೆ ಪ್ರಶಸ್ತಿ ಪ್ರದಾನ, ಸಾಹಿತ್ಯ, ಸಂಗೀತ, ರಾಜಕೀಯ, ಸಿನಿಮಾ ಸಹಿತ ವಿವಿಧ ರಂಗಗಳ ಪ್ರಮುಖರು, ಕಾರ್ಯಕ್ರಮದ ಪ್ರಶಸ್ತಿ ಪ್ರದಾನ ಮಾಡಿ ಎಲ್ಲರಿಗೂ ಹುರುಪು ತುಂಬಿದರು.

ರೆಡ್‌ ಕಾರ್ಪೆಟ್‌ ಮೇಲೆ ವೈಯ್ಯಾರದಿಂದ ಹೆಜ್ಜೆ ಹಾಕಿದ ತಾರೆಯರು, ವೇದಿಕೆಗೇರಿ ಪ್ರಶಸ್ತಿ ತಮ್ಮದಾಗಿಸಿಕೊಂಡ ಪ್ರತಿಭೆಗಳ ಭಾವುಕ ಮಾತುಗಳು. ಅನುರಾಗ್‌ ಹಾಗೂ ಅನುಪಮ ಗೌಡ ಅವರ ಚಂದದ ನಿರೂಪಣೆ ಸಮಾರಂಭದ ಮೆರಗು ಹೆಚ್ಚಿಸಿತು.

ವಿವಿಧ ವಿಭಾಗಗಳಲ್ಲಿ ಭವ್ಯ ಪರದೆಯಲ್ಲಿ ಪ್ರಶಸ್ತಿ ನಾಮನಿರ್ದೇಶಿತರ ಹೆಸರು ಬರುವಾಗ ಹಲವರಿಗೆ ಕುತೂಹಲ ಮತ್ತು ದುಗುಡ ಒಟ್ಟೋಟ್ಟಿಗೆ ಉಂಟಾಯಿತು. ವಿಜೇತರ ಹೆಸರು ಘೋಷಣೆ ಆಗುತ್ತಿದ್ದಂತೆ ವಿಜೇತರು ಸಂಭ್ರಮಿಸಿದರೆ, ಉಳಿದವರು ಕೈಕುಲುಕಿ ಅಭಿನಂದನೆ ಸಲ್ಲಿಸಿದರು

ವಿಶಿಷ್ಟ ಸಂಗೀತ ಸಾಧಕರಿಗೆ ವಿಶೇಷ ಪ್ರಶಸ್ತಿ

ಚಂದನವನವನ್ನು ಅನೇಕ ಸಂಗೀತ ಸಾಧಕರು ತಮ್ಮ ಕಲಾಸೇವೆಯಿಂದ ಸಮೃದ್ಧಗೊಳಿಸಿದ್ದಾರೆ. ಹಿರಿಯರು ಸ್ಫೂರ್ತಿಯ ಸೆಲೆಯಾದರೆ, ಕಿರಿಯರು ಎಳೆಯದರಲ್ಲೇ ಪ್ರೇಕ್ಷಕರ ಮನ ಮುಟ್ಟಿದ್ದಾರೆ. ಚಿತ್ತಾರದ ಪರಂಪರೆಯಂತೆ ಈ ಬಾರಿಯೂ ಅನೇಕ ಸಂಗೀತ ಸಾಧಕರನ್ನು ‘ಚಿತ್ತಾರ ವಿಶೇಷ ಪ್ರಶಸ್ತಿ’ ನೀಡಿ ಗೌರವಿಸುವ ಮೂಲಕ ಅವರ ಸಾಧನೆಯನ್ನು ಸಂಭ್ರಮಿಸಲಾಯಿತು. ಈ ಬಾರಿಯ ಆ ವಿಶೇಷ ಸಾಧಕರ ಪರಿಚಯ ಇಲ್ಲಿದೆ..

Fan Favourite Singer / ಐಶ್ವರ್ಯಾ ರಂಗರಾಜನ್

ʻಕೆ.ಜಿ.ಎಫ್‌ʼ ಚಿತ್ರದ ʻತೂಫಾನ್‌ʼ, ʻಕ್ರಾಂತಿʼ ಚಿತ್ರದ ʻಪುಶ್ಪವತಿʼ, ʻಎಕ್‌ ಲವ್‌ ಯಾʼ ಚಿತ್ರದ ʻಮೀಟ್‌ ಮಾಡಾಣಾ.. ಇಲ್ಲಾ ಡೇಟ್‌ ಮಾಡಾಣಾ..ʼ ಹಾಡುಗಳ ಮೂಲಕ ಕನ್ನಡ ಪ್ರೇಕ್ಷಕರನ್ನು ಮೋಡಿ ಮಾಡಿದವರು ಗಾಯಕಿ ಐಶ್ವರ್ಯಾ ರಂಗರಾಜನ್.  ಮ್ಯಾಕ್ಸ್ಚಿತ್ರದ ಹಾಟು ಮಾಮಾ.. ಹಾಡು ಕೂಡ ಮಾಸ್ ಪ್ರಿಯರ ಮನ ಗೆದ್ದಿತ್ತು. ಅಜನೀಶ್ ಲೋಕನಾಥ್ ಮೋಹಕ ಸಂಯೋಜನೆಗೆ, ಸೆನ್ಸೇಷನಲ್ ಗಾಯಕಿ ಐಶ್ವರ್ಯಾ ರಂಗರಾಜನ್ ಮಾದಕ ಧ್ವನಿ ಸೇರಿ ಸೂಪರ್ ಹಿಟ್ ಆಯ್ತು ಪ್ರತಿಭಾವಂತ ಗಾಯಕಿಗೆ Fan Favourite Singer ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Spread the love
Translate »
Right Ad