Sandalwood Leading OnlineMedia

ಯುವ ಪ್ರತಿಭೆ ವಿನಯ್ ಹೊಸ‌ ಕನಸು ‘ದಿ’ ಸಿನಿಮಾದ ಮೊದಲ ಹಾಡು ಅನಾವರಣ…

 

ಕನ್ನಡದಲ್ಲಿ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ವಿಭಿನ್ನ ಬಗೆಯ ಕಥಾಹಂದರ ಸಿನಿಮಾ ಮೂಲಕ ಯುವ ಸಿನಿಮೋತ್ಸಾಹಿಗಳು ಪ್ರೇಕ್ಷಕರ ಎದುರು ಹಾಜರಾಗುತ್ತಿದೆ. ಅದರ ಮುಂದುವರೆದ ಭಾಗವಾಗಿ ತಯಾರಾಗಿರುವ ಸಿನಿಮಾ ದಿ.ದಿ ಸಿನಿಮಾ ಮೂಲಕ ವಿನಯ್ ನಾಯಕನಾಗಿ ಹಾಗೂ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಒಂದಷ್ಟು ವರ್ಷಗಳ ಅನುಭವವಿರುವ ಅವರೀಗ ದಿ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಹೆಜ್ಜೆ ಇಟ್ಟಿದ್ದಾರೆ. ಈ ಚಿತ್ರದ ನಾನು ಮೌನಿ ಎಂಬ ಮೆಲೋಡಿ ಹಾಡು ಬಿಡುಗಡೆಯಾಗಿದೆ.ಕವಿರಾಜ್ ಸಾಹಿತ್ಯದ ಈ ಹಾಡಿಗೆ ಸಾಯಿ ವಿಘ್ನೇಶ್ ಧ್ವನಿಯಾಗಿದ್ದು, ಯುಎಂ ಸ್ಟೀವನ್ ಸತೀಶ್ ಸಂಗೀತ ಒದಗಿಸಿದ್ದಾರೆ. ನಾನು ಮೌನಿ ಅಂತಾ ವಿನಯ್ ಹಾಗೂ ದಿಶಾ ರಮೇಶ್ ಹಾಡಿನಲ್ಲಿ ಮಿಂಚಿದ್ದಾರೆ.

ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ದಿ ಚಿತ್ರ ಡಾಲರ್ ಸುತ್ತ ನಡೆಯುವ ಕಥಾಹಂದರ ಒಳಗೊಂಡಿದೆ. ಹರಿಣಿ, ಬಾಲ ರಾಜ್ವಾಡಿ, ನಾಗೇಂದ್ರ ಅರಸ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರು, ಶರಣ್, ಸುರೇಶ್ ಬಾಬು, ಗಣೇಶ್, ಕಲಾರತಿ ಮಹದೇವ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ.

‘ವಿಡಿಕೆ’ ಸಿನಿಮಾಸ್ ಬ್ಯಾನರ್ ನಡಿ ‘ವಿಡಿಕೆ’ ಗ್ರೂಪ್ ‘ದಿ’ ಚಿತ್ರವನ್ನು ನಿರ್ಮಾಣ ಮಾಡಿದೆ. ತುಮಕೂರು, ಮೈಸೂರು, ಮೂಡುಗೆರೆ, ಚಿಕ್ಕಮಗಳೂರು, ಹೊನ್ನಾವರ, ಉತ್ತರ ಕನ್ನಡ, ಬೆಂಗಳೂರು, ಕೇರಳದಲ್ಲಿ ‘ದಿ’ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಆಲನ್ ಭರತ್ ಕ್ಯಾಮೆರಾ ವರ್ಕ್, ಯುಎಂ ಸ್ಟೀವನ್ ಸತೀಶ್ ಸಂಗೀತ ನಿರ್ದೇಶನ, ಕವಿರಾಜ್ ಹಾಗೂ ವಿನಯ್ ಸಾಹಿತ್ಯ, ಸಿದ್ದಾರ್ಥ ಸಂಕಲನ, ಚಂದ್ರು ಬಂಡೆ ಸಾಹಸ ನಿರ್ದೇಶನ ಚಿತ್ರಕ್ಕಿದೆ.ದಿ ಸಿನಿಮಾಗೆ ವಿನಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸಿಂಪಲ್ ಸುನಿ ಈ ಹಿಂದೆ ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದ್ದರು. ಸದ್ಯ ಪ್ರಚಾರದ ಅಖಾಡಕ್ಕೆ ಧುಮುಕಿರುವ ಚಿತ್ರತಂಡ ಶೀಘ್ರದಲ್ಲೇ ದಿ ಸಿನಿಮಾವನ್ನು ತೆರೆಗೆ ತರಲಿದೆ.

Share this post:

Related Posts

To Subscribe to our News Letter.

Translate »