ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನನ ಸಮಾಧಿಗೆ ಯಾರು ದಿಕ್ಕು ದೆಸೆ ಇಲ್ಲದಂತೆ ಬೇಸರವಾಗುತ್ತಿದೆ ಎಂದು ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಾಣಿ ಪ್ರಿಯ ‘ಡಿ’ ಬಾಸ್, ಮಳೆಗಾಲ ಶುರುವಾಗುವ ಮುನ್ನ ಅರ್ಜುನನ ಸಮಾಧಿಗೆ ಒಳ್ಳೆ ವ್ಯವಸ್ಥೆಯಾಗಲಿ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಜೊತೆಗೆ ಅರ್ಜುನನ ಜೊತೆಗಿನ ತಮ್ಮ ಫೋಟೋವನ್ನು ಹಂಚಿಕೊಂಡಿದ್ದಾರೆ.
ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು ದೆಸೆ ಇಲ್ಲದಂತೆ ಭಾಸವಾಗುತ್ತಿದೆ. ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು ಎಂದು ನಟ ದರ್ಶನ್ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಅರ್ಜುನನ ಆಸರೆಗೆ ‘ಡಿ’ ಬಾಸ್ ಧ್ವನಿ ಎತ್ತಿದ್ದಾರೆ.
ಇದನ್ನೂ ಓದಿ :ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಚಿತ್ರ
ಇದನ್ನೂ ಓದಿ :ವೈಷ್ಣವಿ ಎಂಬ ಹೆಸರನ್ನು ನೋಡಿ ತಲೆಕೆಡಿಸಿಕೊಂಡ ಕೀರ್ತಿ
‘ಗಜ’ ಗಾಂಭೀರ್ಯಕ್ಕೆ ಅರ್ಜುನನೇ ಸಾಟಿ
‘ಅರ್ಜುನ ಆನೆ ಸಾವಿಗೆ ದರ್ಶನ್ ಅವರು ಕಂಬನಿ ಮಿಡಿದಿದ್ದರು. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದ ಅವರು, ‘8 ಬಾರಿ ಅಂಬಾರಿ ಹೊತ್ತು ನಾಡಿನ ಜನಮನ ಗೆದ್ದಿದ್ದ 64 ವರ್ಷದ ‘ಅರ್ಜುನ’ ಇಂದು ಕಾಡಾನೆಗಳ ಕಾಳಗದಲ್ಲಿ ಸಾವನ್ನಪ್ಪಿರುವುದು ವಿಷಾದದ ಸಂಗತಿ. ಅರ್ಜುನನ ಗಜ ಗಾಂಭೀರ್ಯಕ್ಕೆ ಅವನೇ ಸಾಟಿ. ಓಂ ಶಾಂತಿ’ ಎಂದು ಬರೆದುಕೊಂಡಿದ್ದರು.
ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ.ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ… pic.twitter.com/xKScAy3mMW
— Darshan Thoogudeepa (@dasadarshan) May 2, 2024