ನ್ಯಾಚುರಲ್ ಸ್ಟಾರ್ ನಾನಿ ಮೆಗಾ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ ‘ದಸರಾ’ ಬಹು ನಿರೀಕ್ಷಿತ ಟ್ರೇಲರ್ ಬಿಡುಗಡೆಯಾಗಿದೆ. ಸಿನಿಮಾ ಈಗಾಗಲೇ ಸಿನಿ ಪ್ರಿಯರಲ್ಲಿ ದೊಡ್ಡ ಮಟ್ಟದ ಬಝ್ ಕ್ರಿಯೇಟ್ ಮಾಡಿದೆ. ಮಾಸ್ ಆಕ್ಷನ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಮಾರ್ಚ್ 30ರಂದು ವರ್ಲ್ಡ್ ವೈಡ್ ಬಿಡುಗಡೆಯಾಗುತ್ತಿದೆ. ಟ್ರೇಲರ್ ಮೂಲಕ ನಾನಿ ‘ದಸರಾ’ ದರ್ಬಾರ್ ಶುರುವಾಗಿದೆ.
`ರಾಜಯೋಗ’ದ ಮೂಲಕ ಧರ್ಮಣ್ಣನಿಗೊಲಿದ ಸುಯೋಗ!
‘ದಸರಾ’ ರಗಡ್ ಹಾಗೂ ಮಾಸ್ ಟ್ರೇಲರ್ ಬಿಡುಗಡೆಯಾಗಿದೆ. ಧರಣಿಯಾಗಿ ನಾನಿ ಅವತಾರ ಸಖತ್ ಕಿಕ್ ನೀಡುತ್ತಿದೆ. ಟ್ರೇಲರ್ ತುಣುಕಿನಲ್ಲಿ ನಾನಿ ಮಾಸ್ ಅವತಾರ, ಸಿಂಗರೇಣಿ ಕಲ್ಲಿದ್ದಲಿನ ರಕ್ತಸಿಕ್ತ ಲೋಕ ಪ್ರೇಕ್ಷಕರ ಮನದಲ್ಲಿ ಕ್ಯೂರಿಯಾಸಿಟಿ ಹುಟ್ಟುಹಾಕಿದೆ. ನ್ಯಾಚುರಲ್ ಸ್ಟಾರ್ ಮೇಕೋವರ್, ರಗಡ್ ಲುಕ್, ಹಾವ ಭಾವ ಎಲ್ಲವೂ ಗಮನ ಸೆಳೆದಿದ್ದು, ನಾನಿ ಅಭಿಮಾನಿಗಳು ಕೂಡ ಸಿನಿಮಾ ಮೇಲೆ ಅಪಾರ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ತೆಲಂಗಾಣದ ಗೋದಾವರಿಖಾನಿ ಸುತ್ತಮುತ್ತಲಿನ ವೀರ್ಲಪಲ್ಲಿ ಗ್ರಾಮ ಹಾಗೂ ಸಿಂಗರೇಣಿ ಕಲ್ಲಿದ್ದಲಿನ ಪ್ರಪಂಚವನ್ನು ಮಾಸ್ ಆಕ್ಷನ್ ಸಬ್ಜೆಕ್ಟ್ ಮೂಲಕ ತೆರೆ ಮೇಲೆ ತರ್ತಿದೆ ದಸರಾ ಸಿನಿಮಾ.
ಚಿತ್ರವನ್ನು ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್ ನಡಿ ಸುಧಾಕರ್ ಚೆರುಕುರಿ ಬಿಗ್ ಬಜೆಟ್ ನಲ್ಲಿ ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಒಡೆಲಾ ಚೊಚ್ಚಲ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬಂದಿದ್ದು, ಖ್ಯಾತ ನಟಿ ಕೀರ್ತಿ ಸುರೇಶ್ ನಾನಿ ಜೋಡಿಯಾಗಿ ಸ್ಕ್ರೀನ್ ಶೇರ್ ಮಾಡಿದ್ದಾರೆ. ಟೀಸರ್,ಹಾಡುಗಳ ಮೂಲಕ ಕ್ರೇಜ್ ಕ್ರಿಯೇಟ್ ಮಾಡಿರುವ ಸಿನಿಮಾ ಇದೀಗ ರಗಡ್ ಅಂಡ್ ಮಾಸ್ ಟ್ರೇಲರ್ ಮೂಲಕ ಸಿನಿಮಾಗೆ ಆಮಂತ್ರಣ ನೀಡಿದೆ. ಬಹು ದೊಡ್ಡ ತಾರಾಗಣ ಒಳಗೊಂಡ ಈ ಚಿತ್ರದಲ್ಲಿ ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ, ಸಮುದ್ರಕನಿ, ಸಾಯಿಕುಮಾರ್, ಜರೀನಾ ವಹಾಬ್ ಸೇರಿದಂತೆ ಸ್ಟಾರ್ ಕಲಾವಿದರ ತಾರಾಬಳಗವಿದೆ. ಸಂತೋಷ್ ನಾರಾಯಣನ್ ಮ್ಯೂಸಿಕ್, ಸತ್ಯನ್ ಸೂರ್ಯನ್ ಕ್ಯಾಮೆರಾ ವರ್ಕ್, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ, ವಿಜಯ್ ಚಗಂಟಿ ಕಾರ್ಯಕಾರಿ ನಿರ್ಮಾಣದಲ್ಲಿ ‘ದಸರಾ’ ಸಿನಿಮಾ ಮೂಡಿ ಬಂದಿದೆ.