Sandalwood Leading OnlineMedia

ಡ್ರೋಣ್ ಪ್ರತಾಪ್ ವಿರುದ್ಧ 2.5 ಕೋಟಿ ರೂ. ಮಾನನಷ್ಟ ಮೊಕದ್ದಮೆ,ಸಂಕಷ್ಟದಲ್ಲಿ ಬಿಗ್‌ಬಾಸ್‌ ಸ್ಪರ್ಧಿ..!

ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ಇನ್ನೇನು ಮುಕ್ತಾಯದ ಹಂತದಲ್ಲಿದೆ. ಈ ವೇಳೆ ಸ್ಪರ್ಧಿಗಳು ಡ್ರೋನ್ ಪ್ರತಾಪ್ ವಿರುದ್ಧ ತಿರುಗಿಬೀಳುತ್ತಿದ್ದಾರೆ. ಈಗ ಎಲಿಮಿನೇಟ್ ಆದ ಸ್ಪರ್ಧಿಗಳು ಕೂಡ ಮತ್ತೆ ಮನೆಯೊಳಗೆ ಪ್ರವೇಶ ಮಾಡಿದ್ದಾರೆ. ಅದಾದ ಮೇಲೆ ಪ್ರತಾಪ್ ವಿರುದ್ಧ ಮುಗಿಬೀಳುತ್ತಿದ್ದಾರೆ. ಈ ಬೆನ್ನಲ್ಲೇ ಡ್ರೋನ್ ಪ್ರತಾಪ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದರು. ಕೋವಿಡ್ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳು ಹಿಂಸೆ ಕೊಟ್ಟಿದ್ದರು ಎಂದು ಹೇಳಿಕೆ ಕೊಟ್ಟಿದ್ದರು. ಈ ಹೇಳಿಕೆ ಬಳಿಕ ಅಂದು ಡ್ರೋನ್ ಪ್ರತಾಪ್ ವಿಚಾರಣೆ ಮಾಡಿದ್ದ ಬಿಬಿಎಂಪಿ ಅಧಿಕಾರಿ ಪ್ರಯಾಗ್ ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ ವಿಶೇಷ ದಿನದಂದು ಮಗಳಿಗೆ ನಾಮಕರಣ ಮಾಡಲು ತೀರ್ಮಾನಿಸಿದ ಧ್ರುವ ಸರ್ಜಾ

ಈಗ ಡಾ. ಪ್ರಯಾಗ್ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ವರದಿಯಾಗಿವೆ. ಈಗಾಗಲೇ ವರದಿಯಾಗಿರುವ ಪ್ರಕಾರ, ಡಾ. ಪ್ರಯಾಗ್ ರಾಜ್ 50 ಲಕ್ಷ ರೂಪಾಯಿ ಹಾಗೂ ಮತ್ತೊಬ್ಬರ ಅಧಿಕಾರಿ ಸುಮಾರು 2 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ಹೇಳಲಾಗಿದೆ. ಡ್ರೋನ್ ಪ್ರತಾಪ್ ಮಾನನಷ್ಟ ಮೊಕದ್ದಮೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಾದ ಪ್ರತಿವಾದ ನಡೆದಿದ್ದು, ಇಂದು (ಜನವರಿ 18) ಆದೇಶ ಹೊರಬೀಳಬಹುದು ಎಂದು ನಿರೀಕ್ಷೆ ಮಾಡಲಾಗಿದೆ. ಬಿಗ್ ಬಾಸ್ ಮನೆಯೊಳಗೆ ಡ್ರೋನ್ ಪ್ರತಾಪ್ ಸಂದರ್ಭವೊಂದಲ್ಲಿ ಎಮೋಷನಲ್ ಆಗಿದ್ದರು. ಕೋವಿಡ್ ಸಮಯದಲ್ಲಿ ಬಿಬಿಎಂಪಿ ಅಧಿಕಾರಿ ತನ್ನನ್ನು ನಡೆಸಿಕೊಂಡ ರೀತಿ ಕೆಟ್ಟದಾಗಿತ್ತು. ಮಾನಸಿಕ ಆರೋಗ್ಯ ಸರಿಯಿಲ್ಲ ಎಂದು ಒಪ್ಪಿ ಸಹಿ ಮಾಡುವಂತೆ ಹೇಳಿದ್ದರು. ಕ್ವಾರಂಟೈನ್ ಸಮಯದಲ್ಲೂ ನನಗೆ ಹಿಂಸೆ ಕೊಟ್ಟಿದ್ದರು ಎಂದು ಡ್ರೋನ್ ಪ್ರತಾಪ್ ಕಣ್ಣೀರು ಹಾಕಿದ್ದರು.

ಇದನ್ನೂ ಓದಿ “ಒಬ್ಬ ನಿರ್ದೇಶಕ ತಲೆಕೆಡಿಸ್ಕೊಂಡು ನಿಂತ್ರೆ…ಎಂಥಹ ಅದ್ಭುತವನ್ನೇ ಮಾಡಬಹುದು ಅನ್ನೋದಿಕ್ಕೆ ಈ ಚಿತ್ರವೇ ಸಾಕ್ಷಿ”

ಬಿಗ್ ಬಾಸ್‌ ಮನೆಯಲ್ಲಿ ಡ್ರೋನ್ ಪ್ರತಾಪ್ ಕಣ್ಣೀರು ಹಾಕುತ್ತಿದ್ದಂತೆ ಅಂದು ಕೇಸ್ ದಾಖಲಿಸಿದ್ದ ಅಧಿಕಾರಿ ಪ್ರತಿಕ್ರಿಯೆ ನೀಡಿದ್ದರು. ಕಾನೂನು ಪ್ರಕಾರ ಕಾರ್ಯ ಕೆಲಸ ಮಾಡಿದ್ದೆ. ಪ್ರತಾಪ್ ಅಂದು ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ್ದರಿಂದ ಕೇಸ್ ದಾಖಲು ಮಾಡಲಾಗಿತ್ತು. ಇಂದು ಪ್ರತಾಪ್ ಹೇಳುತ್ತಿರುವ ಮಾತಿನಲ್ಲಿ ಸತ್ಯವಿಲ್ಲ. ಪ್ರತಾಪ್ ಸುಳ್ಳು ಹೇಳುತ್ತಿದ್ದಾನೆ ಎಂದು ಬಿಬಿಎಂಪಿ ಅಧಿಕಾರಿ ಡಾ.ಪ್ರಯಾಗ್ ಪ್ರತಿಕ್ರಿಯೆ ನೀಡಿದ್ದರು. ಅದೇ ವೇಳೆ ಬಿಗ್ ಬಾಸ್ ಮನೆಯೊಳಗೆ ಮಾಡಿದ ಆರೋಪದಿಂದ ರೊಚ್ಚಿಗೆದ್ದಿದ್ದ ಅಧಿಕಾರಿ ಡ್ರೋನ್ ಪ್ರತಾಪ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆಯನ್ನು ನೀಡಿದ್ದರು. ಅದರಂತೆ ಇಬ್ಬರು ಅಧಿಕಾರಿಗಳು ಕೇಸ್ ದಾಖಲಿಸಿದ್ದು, ನ್ಯಾಯಾಲಯದಿಂದ ಆದೇಶ ಹೊರಬರಬೇಕಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಸದ್ಯ ಡ್ರೋನ್ ಪ್ರತಾಪ್ ಬಿಗ್ ಬಾಸ್ ಗೆಲ್ಲುವ ನೆಚ್ಚಿನ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದಾರೆ. ಹಿಂದಿನ ತಪ್ಪುಗಳನ್ನು ಬಿಗ್ ಬಾಸ್ ವೀಕ್ಷಕರು ಕ್ಷಮಿಸಿ, ಡ್ರೋನ್ ಪ್ರತಾಪ್ ಅನ್ನು ಗೆಲ್ಲಿಸುತ್ತಾರಾ? ಅನ್ನೋ ಪ್ರಶ್ನೆಯಂತೂ ಹುಟ್ಟುಕೊಂಡಿದೆ.

Share this post:

Related Posts

To Subscribe to our News Letter.

Translate »