Sandalwood Leading OnlineMedia

ಗಿನ್ನಿಸ್ ದಾಖಲೆ ಮಾಡುವತ್ತ “ದೇವರ ಆಟ ಬಲ್ಲವರಾರು”

ಸಾಕಷ್ಟು ಹೊಸ ಪ್ರಯೋಗಗಳಿಗೆ ಕನ್ನಡ ಚಿತ್ರರಂಗ ಸಾಕ್ಷಿಯಾಗಿದೆ. ಅಂತಹ ಮತ್ತೊಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ “ದೇವರ ಆಟ ಬಲ್ಲವರಾರು ” ಚಿತ್ರತಂಡ. ಈ ಹಿಂದೆ ಸಂಚಾರಿ ವಿಜಯ್ ಅವರ “ಫಿರಂಗಿ ಪುರ” ಚಿತ್ರವನ್ನು ಕೈಗೆತ್ತಿಕೊಂಡಿದ್ದ ಜನಾರ್ದನ್ ಪಿ ಜಾನಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಮೂವತ್ತು ದಿನಗಳಲ್ಲಿ ಚಿತ್ರದ ಎಲ್ಲಾ ಪ್ರಕ್ರಿಯೆ ಮುಗಿಸಿ ಬಿಡುಗಡೆ ಮಾಡಿ ಗಿನ್ನಿಸ್ ರೆಕಾರ್ಡ್ ಮಾಡಲು  ಹೊರಟಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ಇದನ್ನೂ ಓದಿHarshika Poonacha’s latest `MARAKASTRA’ Press meet Photos

ನಾನು ಈ ಹಿಂದೆ “ಫಿರಂಗಿ ಪುರ” ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ತಮ್ಮನ್ನು ಭೇಟಿ ಮಾಡಿದ್ದೆ. ಈಗ “ದೇವರ ಆಟ ಬಲವರಾರು” ಚಿತ್ರವನ್ನು ನಿರ್ದೇಶಿಸುತ್ತಿದ್ದೇನೆ. ಇದು 1975 ರ ಕಾಲಘಟ್ಟದಲ್ಲಿ ನಡೆಯುವ ಕಥೆ.  ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಎಲ್ಲಾ ಕೆಲಸಗಳನ್ನು ಒಂದು ತಿಂಗಳೊಳಗೆ ಮುಗಿಸಿ, ಸರಿಯಾಗಿ ಒಂದು ತಿಂಗಳಿಗೆ ಚಿತ್ರವನ್ನು ತೆರೆಗೆ ತರಬೇಕು. ನಮ್ಮ ಚಿತ್ರ ಗಿನ್ನಿಸ್ ರೆಕಾರ್ಡ್ ಆಗಬೇಕು ಎಂಬುದು ನನ್ನ ಅಸೆ. ಈ ಕುರಿತು ನಾನು, ನನ್ನ ತಂಡ ಸುಮಾರು ಆರು ತಿಂಗಳಿನಿಂದ ಶ್ರಮ ಪಡುತ್ತಿದ್ದೇವೆ. ಇಡೀ ಚಿತ್ರದ ಚಿತ್ರೀಕರಣ ಮಡಿಕೇರಿಯಲ್ಲಿ ನಡೆಯಲಿದೆ. ಅಲ್ಲಿನ ವಿಶಾಲವಾದ ಜಾಗದಲ್ಲಿ ಸೆಟ್ ಗಳನ್ನು ನಿರ್ಮಿಸಿ ಅದೇ ಸ್ಥಳದಲ್ಲಿ ಚಿತ್ರೀಕರಣ ಮಾಡಲಿದ್ದೇವೆ. ದಿನ ಸುಮಾರು 160 ಕ್ಕೂ ಹೆಚ್ಚು ಜನ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿSonal Monteiro’s latest `GARADI’ Press meet Photos

ಜೂನ್ 16 ರಿಂದ ಐದು ದಿನಗಳ ಕಾಲ ಚಿತ್ರೀಕರಣ ನಡೆಯುವ ಸ್ಥಳದಲ್ಲಿಯೇ ತಾಲೀಮು ನಡೆಸಲಿದ್ದೇವೆ. ಆನಂತರ ಚಿತ್ರೀಕರಣ ಪ್ರಾರಂಭಿಸಲಿದ್ದೇವೆ. ಹದಿನಾರು ದಿನದೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ. ಚಿತ್ರೀಕರಣವಾದ ನಂತರ ಎಲ್ಲಾ ಕಾರ್ಯಗಳನ್ನು ಪೂರೈಸಿ ಜುಲೈ 20ರಂದು ಚಿತ್ರವನ್ನು ತೆರೆಗೆ ತರುತ್ತಿದ್ದೇವೆ. ನಮ್ಮ ಕಾರ್ಯವೈಖರಿ ವೀಕ್ಷಿಸಲು ಆರು ಜನ ತೀರ್ಪುಗಾರರು ಆ ಸ್ಥಳದಲ್ಲೇ ಇರುತ್ತಾರೆ. ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ. ಅರ್ಜುನ್ ರಮೇಶ್, ಸಿಂಧೂ ಲೋಕನಾಥ್, ವರ್ಷ ವಿಶ್ವನಾಥ್, ಸಂಪತ್ ರಾಮ್, ಅರ್ಜುನ್, ಮೇದಿನಿ ಕೇಳಮನೆ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂದು ನಿರ್ದೇಶಕ ಜನಾರ್ದನ್ ಪಿ ಜಾನಿ ತಿಳಿಸಿದರು.

ಇದನ್ನೂ ಓದಿಪಸಂದಾಗಿದೆ “ಗರಡಿ” ಚಿತ್ರದ ಮೊದಲ ಹಾಡು; “ಹೊಡಿರೆಲೆ ಹಲಗಿ” ಎಂದ ಭಟ್ರು

ನಾನು ಈ ಹಿಂದೆ ನಾಲ್ಕು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಆದರೆ ಈ ಚಿತ್ರದ ನಿರ್ದೇಶಕರ ಕಾರ್ಯವೈಖರಿ ಕಂಡು ಆಶ್ಚರ್ಯವಾಯಿತು. ಈ ಚಿತ್ರಕ್ಕಾಗಿ ಎರಡು ತಿಂಗಳಲ್ಲಿ ಹದಿನಾಲ್ಕು ಕೆಜಿ ತೂಕ ಇಳಿಸಿದ್ದೇನೆ. ನೋಡಿದವರು ಕಂಡು ಹಿಡಿಯದಷ್ಟು ಸಣ್ಣ ಆಗಿದ್ದೇನೆ. ನಿರ್ದೇಶಕರು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಸೂರಿ ನನ್ನ ಪಾತ್ರದ ಹೆಸರು ಎಂದರು ನಾಯಕ ಅರ್ಜುನ್ ರಮೇಶ್ (ಶನಿ ಧಾರಾವಾಹಿ ಖ್ಯಾತಿ).

Share this post:

Related Posts

To Subscribe to our News Letter.

Translate »