ಕರ್ಣನ್ ಅನ್ನೋ ನವ ನಿರ್ದೇಶಕ ಈ ಚಿತ್ರಕ್ಕೆ ಕಥೆ ಚಿತ್ರಕತೆ ಜೊತೆಗೆ ನಿರ್ದೇಶನ ಮಾಡಿದ್ದಾರೆ.. ರಾಕೇಶ್ ದಳವಾಯಿ ಅನ್ನೋ ನವ ನಾಯಕ ನಟ ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಸೋದಕ್ಕೆ ಸಜ್ಜಾಗಿದ್ದು, ನಾಯಕಿಯಾಗಿ ಸುಚರಿತಾ ಅನ್ನೋ ಹೊಸ ಮುಖ ಪರಿಚಯವಾಗ್ತಿದೆ.
ಇವ್ರ ಜೊತೆಗೆ ಶರತ್ ಲೋಹಿತಶ್ವ, ನೀನಾಸಂ ಅಶ್ವಥ್, ಪ್ರವೀಣ್ ಗೌಡ ಹೆಚ್ ಸಿ, ಹರಿರಾಮ್ , ಕೆ.ಎ ಮ್ ಸಂದೇಶ್, ಸುಧೀರ್ ಕುಮಾರ್ ಮುರೋಳಿ ಸೇರಿ ಪ್ರತಿಭಾನ್ವಿತಾ ತಾರಾ ಬಳಗವಿದೆ. ವೈಟ್ ಲೋಟಸ್ ಎಂಟರ್ಟೈನ್ಮೆಂಟ್ ಮತ್ತು ಶ್ರೀ ಓಂ ಸಿನಿ ಎಂಟ್ರಟೈನರ್ಸ್ ಬ್ಯಾನರ್ ನಡಿಯಲ್ಲಿ ಈ ಚಿತ್ರ ನಿರ್ಮಾಣವಾಗಿದೆ.
ತಾಂತ್ರಿಕವಾಗಿ ಸಖತ್ ಸ್ಟ್ರಾಂಗ್ ಆಗಿ ಕಾಣ್ತಿರೋ ಈ ಸಿನಿಮಾಗೆ ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜಿಸಿದ್ದು, ಸೆಲ್ಪಂ ಜಾನ್ ಛಾಯಾಗ್ರಹಣ ಮಾಡಿದ್ದಾರೆ. ಎನ್.ಎಂ ವಿಶ್ವ ಈ ಚಿತ್ರಕ್ಕೆ ಸಂಕಲನ ಮಾಡಿದ್ದಾರೆ.
ದರ್ಶನ್ ಕಾಟೇರನಂತೆ ಧೀರ ಭಗತ್ ರಾಯ್
ಅದೇ ಕಾಲಘಟ್ಟದ ಬೇರೆ ಆಯಾಮದ ಸಿನಿಮಾ.
ಜೈಭೀಮ್, ವಿಸಾರಣೈ ಚಿತ್ರಗಳ ಗುಣಮಟ್ಟದಲ್ಲಿ ಈ ಚಿತ್ರವನ್ನು ಮಾಡಲಾಗಿದೆ.ಧೀರ ಭಗತ್ ರಾಯ್ ಕನ್ನಡ ಚಿತ್ರರಂಗದಲ್ಲಿ ಹೊಸ ಪರ್ವಕ್ಕೆ ಕಾರಣವಾಗಬಹುದು ಅನ್ನೋ ನಿರೀಕ್ಷೆ ಇದೆ ಎಂದ ಚಿತ್ರತಂಡ ಹೇಳಿಕೊಂಡಿದೆ
ಈಗಾಗಲೆ ಟ್ರೈಲರ್ ರಿಲೀಸ್ ಆಗಿದ್ದು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದೆ