ಎ.ಆರ್. ಸಾಯಿರಾಮ್ ನಿರ್ದೇಶನದ ‘ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾ ಬಿಡುಗಡೆಗೆ ಸಕಲ ರೀತಿಯಲ್ಲೂ ಸಜ್ಜಾಗುತ್ತಿದೆ. ಪವರ್ ಫುಲ್ ಟೈಟಲ್ ಮೂಲಕ ಗಮನ ಸೆಳೆದಿರೋ ಈ ಚಿತ್ರ ಸೆನ್ಸಾರ್ ಅಂಗಳದಲ್ಲಿ ‘ಎ’ ಸರ್ಟಿಫಿಕೇಟ್ ಪಡೆದುಕೊಂಡಿದೆ. ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ನಿರ್ದೇಶನ ವಿಭಾಗದಲ್ಲಿ, ಡೈಲಾಗ್ ರೈಟರ್ ಆಗಿ, ತಾಂತ್ರಿಕ ವಿಭಾಗದಲ್ಲಿ ದುಡಿದು ಅನುಭವ ಇರುವ ಎ. ಆರ್. ಸಾಯಿರಾಮ್ ನಿರ್ದೇಶನದಲ್ಲಿ ಮೂಡಿ ಬಂದ ಮೊದಲ ಸಿನಿಮಾವಿದು.
ಚಿತ್ರದಲ್ಲಿ ನವನಟ ವಿವನ್ ಕೆ.ಕೆ ನಾಯಕ ನಟನಾಗಿ ನಟಿಸುತ್ತಿದ್ದು, ಅನುಷಾ ರೈ ನಾಯಕಿಯಾಗಿ ತೆರೆ ಹಂಚಿಕೊಂಡಿದ್ದಾರೆ. ಯಶ್ ಶೆಟ್ಟಿ, ಬಾಲ ರಾಜವಾಡಿ, ಜೀವನ್ ರಿಚಿ, ಪ್ರದೀಪ್ ಪೂಜಾರಿ, ರಾಮ್ ಪವನ್, ವರ್ಧನ್ ತೀರ್ಥಹಳ್ಳಿ, ಚಕ್ರವರ್ತಿ ಚಂದ್ರಚೂಡ್, ಹೊಂಗಿರಣ ಚಂದ್ರು ಒಳಗೊಂಡ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿತ್ರದ ಪ್ರಚಾರ ಕಾರ್ಯವನ್ನು ಚಿತ್ರತಂಡ ಆರಂಭಿಸಿದ್ದು, ಅದರ ಮೊದಲ ಭಾಗವಾಗಿ ‘ಹೆಂಡವೇ ನಮ್ಮ ಮನೆ ದ್ಯಾವರು’ ಹಾಡು ಬಿಡುಗಡೆಯಾಗಿ ಗಮನ ಸೆಳೆದಿದೆ. ಫೆಬ್ರವರಿ ಅಥವಾ ಮಾರ್ಚ್ ನಲ್ಲಿ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.
ನಾಳೆಯಿಂದ ಥೀಯೆಟರ್‌ನಲ್ಲಿ (Mr) `ಬ್ಯಾಚುಲರ್’ Party!
ಎ. ಪಿ. ಪ್ರೊಡಕ್ಷನ್ಸ್ ಬ್ಯಾನರ್ ನಡಿ ಆನಂದ್ ಬಾಬು.ಜಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜ್ಯೂಡ ಸ್ಯಾಂಡಿ ಸಂಗೀತ ನಿರ್ದೇಶನ, ಶ್ರೀಕಾಂತ್ ಸಂಕಲನ, ರವಿಕುಮಾರ್ ಸನ ಛಾಯಾಗ್ರಹಣ ಚಿತ್ರಕ್ಕಿದೆ. ಕಿನ್ನಲ್ ರಾಜ್, ಅರಸು ಅಂತಾರೆ, ಹೃದಯ ಶಿವ, ಎ. ಆರ್.ಸಾಯಿರಾಮ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.