ಸ್ಯಾಂಡಲ್‌ವುಡ್‌ನ ಮೋಹಕತಾರೆ ರಮ್ಯಾ, ಡಾಲಿ ಧನಂಜಯ್ ಅಭಿನಯದ ‘ಉತ್ತರಕಾಂಡ’ ಚಿತ್ರಕ್ಕೆ ದೂದ್ ಪೇಡ ದಿಗಂತ್ ಎಂಟ್ರಿ ಕೊಡುತ್ತಿದ್ದಾರೆ. ಸ್ಯಾಂಡಲ್‌ವುಡ್‌ನ ಮೋಹಕತಾರೆ ರಮ್ಯಾ, ಡಾಲಿ ಧನಂಜಯ್ ಅಭಿನಯದ ‘ಉತ್ತರಕಾಂಡ’ ಚಿತ್ರಕ್ಕೆ ದೂದ್ ಪೇಡ ದಿಗಂತ್ ಎಂಟ್ರಿ ಕೊಡುತ್ತಿದ್ದಾರೆ.
ವಿಜಯ್ ಕಿರಗಂದೂರು ಅರ್ಪಿಸುತ್ತಿರುವ, ಕೆ.ಆರ್.ಜಿ ಸಂಸ್ಥೆ ನಿರ್ಮಿಸುತ್ತಿರುವ ಹಾಗೂ ರೋಹಿತ್ ಪದಕಿ ರಚಿಸಿ, ನಿರ್ದೇಶಿಸುತ್ತಿರುವ ‘ಉತ್ತರಕಾಂಡ’ ಚಿತ್ರ ಪ್ರಿ-ಪ್ರೊಡಕ್ಷನ್ ಹಂತದಲ್ಲಿದ್ದು, ಅಕ್ಟೋಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ.
ಇನ್ನೂ ಓದಿ ಸಂಘರ್ಷದ ಏರಿ ಮೇಲೆ `ಕರಿ ಕುರಿ’! ಶೀಘ್ರದಲ್ಲೇ ಬಿಡುಗಡೆಯಾಗಲಿದೆ ವಿಭಿನ್ನ ಕಥಾಹಂದರದ ಚಿತ್ರ.
ಗಾಳಿಪಟ 2 ಚಿತ್ರದಲ್ಲಿ ನಟಿಸಿದ್ದ ನಟ ದಿಗಂತ್ ಅವರು ಉತ್ತರಕಾಂಡ ಚಿತ್ರತಂಡ ಸೇರಿಕೊಂಡಿದ್ದು, ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆಂದು ಮೂಲಗಳು ತಿಳಿಸಿವೆ. ಈ ಕುರಿತ ವಿವರಗಳನ್ನು ಚಿತ್ರತಂಡ ಶೀಘ್ರದಲ್ಲೇ ಬಹಿರಂಗಪಡಿಸಲಿದೆ ಎನ್ನಲಾಗುತ್ತಿದೆ.
ಧನಂಜಯ್, ರಮ್ಯಾ ಮತ್ತು ದಿಗಂತ್ ಅಷ್ಟೇ ಅಲ್ಲದೆ, ಚಿತ್ರದಲ್ಲಿ ಹಲವು ಉನ್ನತ ಕಲಾವಿದರನ್ನೂ ಕೂಡ ಚಿತ್ರತಂಡ ತೆರೆ ಮೇಲೆ ತೋರಿಸಲು ಯೋಜಿಸುತ್ತಿದೆ ಎನ್ನಲಾಗಿದೆ.
‘ರತ್ನನ್ ಪ್ರಪಂಚ’ ಯಶಸ್ಸಿನ ನಂತರ ರೋಹಿತ್ ಪದಕಿ ಹಾಗೂ ಕಾರ್ತಿಕ್ ಮತ್ತು ಯೋಗಿ.ಜಿ.ರಾಜ್ ಅವರು, ಮತ್ತೆ ಒಗ್ಗೂಡಿ ಉತ್ತರಕಾಂಡ ಚಿತ್ರವನ್ನು ಹೊರತರುತ್ತಿದ್ದಾರೆ.
ಉತ್ತರಕಾಂಡ ಚಿತ್ರದ ಮೂಲಕ ರಮ್ಯಾ ಅವರು ಬೆಳ್ಳಿತೆರೆ ಮತ್ತೆ ಪೂರ್ಣ ಪ್ರಮಾಣದ ನಾಯಕಿಯಾಗಿ ಕಮ್ ಬ್ಯಾಕ್ ಆಗುತ್ತಿದ್ದಾರೆ.
ಇನ್ನೂ ಓದಿ ಹೊಸಬರು ಸಿದ್ದಪಡಿಸಿರುವ “ಅಯುಕ್ತ” ಹಾಡು ರಿಲೀಸ್.
ಸಂದರ್ಶನವೊಂದರಲ್ಲಿ ಈ ಹಿಂದೆ ಚಿತ್ರದ ಕುರಿತು ಮಾತನಾಡಿದ್ದ ರಮ್ಯಾ, ಚಿತ್ರತಂಡ ನನಗೆ ತೋರಿಸಿದ ಪ್ರೀತಿ, ವಾತ್ಸಲ್ಯ ನಾನು ಉತ್ತಮ ಸ್ಥಾನದಲ್ಲಿರುವಂತೆ ಭಾವನೆಯನ್ನು ನೀಡಿದೆ. ಇಂತಹ ಪ್ರತಿಭೆ ಹಾಗೂ ಚಿತ್ರತಂಡದೊಂದಿಗೆ ಚಿತ್ರೀಕರಣದಲ್ಲಿ ಭಾಗಿಯಾಗಲು ಕಾತುರಳಾಗಿದ್ದೇನೆಂದು ಹೇಳಿದ್ದರು.
ವಿಜಯ್ ಕಿರಗಂದೂರು ಅವರು ಪ್ರಸ್ತುತ ಪಡಿಸುತ್ತಿರುವ ಚಿತ್ರ ಉತ್ತರಕಾಂಡ ವನ್ನು ಕೆ.ಆರ್.ಜಿ. ಸ್ಟುಡಿಯೋಸ್ ಸಂಸ್ಥೆಯ ಕಾರ್ತಿಕ್ ಮತ್ತು ಯೋಗಿ.ಜಿ.ರಾಜ್ ಅವರು ನಿರ್ಮಿಸುತ್ತಿದ್ದು, ಚಿತ್ರವನ್ನು ರೋಹಿತ್ ಪದಕಿ ನಿರ್ದೇಶಿಸುತ್ತಿದ್ದಾರೆ. ಚರಣ್ ರಾಜ್ ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಸ್ವಾಮಿ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಸಂಕಲನ ಹಾಗೂ ವಿಶ್ವಾಸ್ ಅವರ ಕಲಾ ನಿರ್ದೇಶನ ಚಿತ್ರಕ್ಕಿದೆ.