Left Ad
ಟೀಸರ್ ನಲ್ಲೇ ಮೋಡಿಮಾಡಿದ "ದಿಲ್ ಖುಷ್" - Chittara news
# Tags

ಟೀಸರ್ ನಲ್ಲೇ ಮೋಡಿಮಾಡಿದ “ದಿಲ್ ಖುಷ್”

ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ ಡಾರ್ಲಿಂಗ್ ಕೃಷ್ಣ .ರೊಮ್ಯಾಂಟಿಕ್ ಕಾಮಿಡಿ ಕಥಾಹಂದರದ ಜೊತೆಗೆ ನವೀರಾದ ಪ್ರೇಮಕಥೆಯ, ಪ್ರಮೋದ್ ಜಯ ನಿರ್ದೇಶಿಸಿರುವ “ದಿಲ್ ಖುಷ್” ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ನಟ ಡಾರ್ಲಿಂಗ್ ಕೃಷ್ಣ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇದನ್ನೂ ಒದಿ  ಸದ್ದಿಲ್ಲದೇ ಸೆಟ್ಟೇರಿತು ದರ್ಶನ್- ಮಿಲನಾ ಪ್ರಕಾಶ್ ಹೊಸ ಸಿನಿಮಾ: ಟೈಟಲ್ ಕೂಡ ಘೋಷಣೆ

“ದಿಲ್ ಖುಷ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಕೊಡಗಿನ ಸೋಮವಾರಪೇಟೆ,‌ ಶನಿವಾರಸಂತೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.‌

ಇದನ್ನೂ ಒದಿ  ‘ಪೂರ್ಣ’ವಾಗದ ‘ಭಾವ’ಕ್ಕೊಂದು ಸಂಪೂರ್ಣ ನ್ಯಾಯ

“ದಿಲ್ ಖುಷ್” ಎಂದರೆ ನಾಯಕ – ನಾಯಕಿ ಹೆಸರು. ದಿಲ್ಮಯ ನಾಯಕಿಯ ಹೆಸರಾದರೆ, ಕುಷಾಲ್ ನಾಯಕನ ಹೆಸರು. ಮನೆಮಂದಿಯಲ್ಲಾ ಕುಳಿತು ನೋಡುವ ಈ ಕೌಟುಂಬಿಕ ಚಿತ್ರವಿದು ಎನ್ನುತ್ತಾರೆ ನಿರ್ದೇಶಕ ಪ್ರಮೋದ್ ಜಯ.

ಇದನ್ನೂ ಒದಿ  ರಶ್ಮಿಕಾ ಮಂದಣ್ಣ ಅವರ ಇತ್ತೀಚಿನ ಫೋಟೋಶೂಟ್ ನೆಟ್ಟಿಗರ ಮನಸೆಳೆದಿದೆ.

ಯುವಪ್ರತಿಭೆ ರಂಜಿತ್ “ದಿಲ್ ಖುಷ್” ಚಿತ್ರದ ನಾಯಕನಾಗಿ, ಸ್ಪಂದನ ಸೋಮಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ. ರಂಗಾಯಣ ರಘು, ಅರುಣಾ ಬಾಲರಾಜ್, ರಘು ರಾಮನಕೊಪ್ಪ, ರವಿ ಭಟ್, ಧರ್ಮಣ್ಣ ಕಡೂರು, ಸೂರ್ಯ ಪ್ರವೀಣ್ ಮುಂತಾದವರು ಪ್ರಮುಖಪಾತ್ರಗಳಲ್ಲಿ ನಟಿಸಿದ್ದಾರೆ.ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಪ್ರಸಾದ್ ಕೆ ಶೆಟ್ಟಿ ಸಂಗೀತ ನೀಡಿರುವ ಐದು ಹಾಡುಗಳು ಚಿತ್ರದಲ್ಲಿದೆ.ನಿವಾಸ್ ನಾರಾಯಣ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಜ್ಞಾನೇಶ್ ಬಿ ಮಠದ್ ಸಂಕಲನ, ಹೈಟ್ ಮಂಜು ನೃತ್ಯ ನಿರ್ದೇಶನ ಹಾಗೂ ವಿಕ್ರಮ್, ಅಶೋಕ್ ಅವರ ಸಾಹಸ ನಿರ್ದೇಶನವಿದೆ.

Spread the love
Translate »
Right Ad