Sandalwood Leading OnlineMedia

ಬಿರುಸಿನಿಂದ ಸಾಗುತ್ತಿದೆ  ಶಿವಣ್ಣ & ಪ್ರಭುದೇವ ಅಭಿನಯಿಸಿ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ಚಿತ್ರ

ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ “ಪ್ರೊಡಕ್ಷನ್ ನಂ 47” ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

 

 

ಬೆಂಗಳೂರಿನಲ್ಲಿ ‘ಕೋಬ್ರಾ’ ಕ್ರೇಜ್

 

 

ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಶಿವರಾಜಕುಮಾರ್, ಪ್ರಭುದೇವ, ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗಯಾಗಿದ್ದಾರೆ.

 

`ಆಪರೇಷನ್ ಲಂಡನ್ ಕೆಫೆ’ ಯಲ್ಲಿ ಶಿವಾನಿ ಸುರ್ವೆ ಡೆಡ್ಲಿ ಲುಕ್!

 

 

ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನಿರ್ದೇಶನ ಮಾಡಿದ್ದು, ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಜವಾಬ್ಧಾರಿ ಹೊತ್ತಿದ್ದಾರೆ. ಶಿವಣ್ಣ – ಪ್ರಭುದೇವ- ಯೋಗರಾಜ್ ಭಟ್ ಹಾಗೂ ರಾಕ್ ಲೈನ್ ವೆಂಕಟೇಶ್ ಅವರಂತಹ ಸಿನಿ ದಿಗ್ಗಜರ ಕಾಂಬಿನೇಶನ್‌ನಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿರುವ ಈ ಅಪರೂಪದ ಚಿತ್ರವನ್ನು ಕಣ್ತುಂಬಿಕೊಳ್ಳಲು ಕನ್ನಡ ಕಲಾರಸಿಕರು ಕಾತುರದಿಂದ ಕಾಯುತ್ತಿದ್ದಾರೆ.

Share this post:

Translate »