Sandalwood Leading OnlineMedia

ರಾಷ್ಟ್ರಪ್ರಶಸ್ತಿ ವಿಜೇತ ‘ಡೊಳ್ಳು ಸಿನಿಮಾ ವೀಕ್ಷಿಸಲು ರಾಜ್ಯಪಾಲರಿಗೆ ಆಹ್ವಾನ

ನಿರ್ದೇಶಕ ಪವನ್ ಒಡೆಯರ್ ನಿರ್ಮಾಣದಲ್ಲಿ ಮೂಡಿಬಂದಿರುವ ಡೊಳ್ಳು ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ನಿಂತಿದೆ. ಇದೇ 26ರಂದು ಚಿತ್ರ ರಾಜ್ಯಾದ್ಯಂತ ತೆರೆಗೆ ಬರ್ತಿದೆ. ಜನಪದ ಕಲೆ ಡೊಳ್ಳು ಮಹತ್ವ ಸಾರುವ ಈ ಸಿನಿಮಾಗೆ 18 ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಮನ್ನಣೆ ದೊರೆತಿದ್ದು, ಜೊತೆಗೆ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೂ ಭಜನವಾಗಿದೆ.ಕಮರ್ಷಿಯಲ್ ಸಿನಿಮಾಗಳ ನಡುವೆ ಇಂತಹ ವಿಭಿನ್ನ ಕಂಟೆಂಟ್ ಸಿನಿಮಾವನ್ನು ನೋಡುವಂತೆ ನಿರ್ಮಾಪಕ ಪವನ್ ಒಡೆಯರ್ ಹಾಗೂ ನಿರ್ದೇಶಕ ಸಾಗರ್ ಪುರಾಣಿಕ್ ರಾಜ್ಯಪಾಲರಾದ ಥಾವರ್ ಚಂದ್ರ ಗೆಹ್ಲೋಟ್ ಅವರಿಗೆ ಆಹ್ವಾನ ನೀಡಿದ್ದಾರೆ. ರಾಷ್ಟ್ರಪ್ರಶಸ್ತಿಗೆ ಪಾತ್ರವಾಗಿರುವ ಡೊಳ್ಳು ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ರಾಜ್ಯಪಾಲರು ಸಿನಿಮಾ ನೋಡುವ ಭರವಸೆ ನೀಡಿದ್ದಾರೆ.

 

 

ಅನಿರೀಕ್ಷಿತ ತಿರುವುಗಳನ್ನು ಹೊತ್ತ ಕಾಡುವ ಪ್ರೇಮ ಕಥೆ!

ಒಡೆಯರ್ ಮೂವೀಸ್ ಬ್ಯಾನರ್ ನಡಿ ಚೊಚ್ಚಲ ಬಾರಿಗೆ ಪವನ್ ಒಡೆಯರ್ ಪತ್ನಿ ಅಪೇಕ್ಷಾ ಜೊತೆಗೂಡಿ ಡೊಳ್ಳು ಸಿನಿಮಾ ಮಾಡಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ಸಾರಥ್ಯದಲ್ಲಿ ಚಿತ್ರ ತಯಾರಾಗಿದೆ. ಕಿರುತೆರೆ ಕಲಾವಿದ ಕಾರ್ತಿಕ್ ಮಹೇಶ್ ನಾಯಕನಾಗಿ, ನಿಧಿ ಹೆಗಡೆ ನಾಯಕಿಯಾಗಿ ಅಭಿನಯಿಸಿದ್ದು, ಉಳಿದಂತೆ ಬಾಬು ಹಿರಣ್ಣಯ್ಯ, ಚಂದ್ರ ಮಯೂರ್,  ಶರಣ್ಯ ಸುರೇಶ್ ಮುಂತಾದ  ಮುಂತಾದ ಕಲಾವಿದರು ಚಿತ್ರದಲ್ಲಿದ್ದಾರೆ. ಸಂಭಾಷಣೆ ಮತ್ತು ಚಿತ್ರಕಥೆಯನ್ನು ಶ್ರೀನಿಧಿ ಬರೆದಿದ್ದಾರೆ. ಅನಂತ್ ಕಾಮತ್ ಸಂಗೀತವಿದ್ದು, ಅಭಿಲಾಷ್ ಕಲಾಥಿ ಕ್ಯಾಮೆರಾ ಕೈಚಳಕ ಸಿನಿಮಾಕ್ಕಿದೆ. ಇತ್ತೀಚೆಗಷ್ಟೇ ರಿಲೀಸ್ ಆಗಿರುವ ಟ್ರೇಲರ್ ಹಾಗೂ ಮಾಯಾನಗರಿ ಹಾಡಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗ್ತಿದೆ.

 

Share this post:

Related Posts

To Subscribe to our News Letter.

Translate »